ಚಿಕ್ಕಬಳ್ಳಾಪುರದಲ್ಲಿ ಶಾಲಾ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ನಡೆದ 17ರ ವಯೋಮಿತಿಯ ಬಾಲಕ ಮತ್ತು ಬಾಲಕಿಯರ l ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಸುಂಟಿಕೊಪ್ಪದ ಸಂತ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರ್. ಜೀವಿಕ ಅವರು ಪ್ರಥಮ ಸ್ಥಾನ ಪಡೆದು, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಆರ್. ಜೀವಿಕ ಅವರು ಸುಂಟಿಕೊಪ್ಪದ ನಿವಾಸಿ ಹಾಗೂ ಸೈನಿಕರಾಗಿ ಸೇವೆ ಸಲ್ಲಿಸುತ್ತಿರುವ ರಾಜಕುಮಾರ ಹಾಗೂ ಮಡಿಕೇರಿ ಸರಕಾರಿ ಆಸ್ಪತ್ರೆಯಲ್ಲಿ ದಾದಿಯಾಗಿ ಸೇವೆ ಸಲ್ಲಿಸುತ್ತಿರುವ ಲಕ್ಷ್ಮಿ ಅವರ ಪುತ್ರಿಯಾಗಿದ್ದಾರೆ.

ಇವರ ಈ ಸಾಧನೆಗೆ ರೆವೆರೆಂಡ್ ಫಾದರ್ ವಿಜಯಕುಮಾರ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಆರ್. ಸೆಲ್ವರಾಜ್ ಹಾಗೂ
ಕೊಡಗು ಕರಾಟೆ ಅಸೋಸಿಯೇಷನ್ ರವರು ಅಭಿನಂದನೆ ಸಲ್ಲಿಸಿದ್ದಾರೆ.

Exit mobile version