Close Menu
Kodagu News
    ಹೊಸ ಸುದ್ದಿ

    ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್

    September 21, 2026

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್
    • ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ
    • ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.
    • ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ
    • ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ
    • “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ
    • ಕಾವೇರಿ ಉಳಿವಿಗೆ ಮಳೆನೀರು ಕೊಯ್ಲು, ಮರಗಳ ಸಂರಕ್ಷಣೆ ಅಗತ್ಯ: ಬಿದ್ದಂಡ ಮಾದಯ್ಯ.
    • ಸಂಪಿಗೆಕಟ್ಟೆ ಮಹದೇವಪೇಟೆ ಸಂಪರ್ಕ ರಸ್ತೆಗೆ ಕಾಂಕ್ರೀಟ್ ಭಾಗ್ಯ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ಪೆರಾಜೆಯಲ್ಲಿ ಅಖಿಲ ಭಾರತ 72 ನೇ ಸಹಕಾರ ಸಪ್ತಾಹಕ್ಕೆ ಚಾಲನೆ
    ಅಂತರರಾಷ್ಟ್ರೀಯ

    ಪೆರಾಜೆಯಲ್ಲಿ ಅಖಿಲ ಭಾರತ 72 ನೇ ಸಹಕಾರ ಸಪ್ತಾಹಕ್ಕೆ ಚಾಲನೆ


    ಸರ್ಕಾರದಿಂದ ಕಾಫಿ ಬೆಳೆಗೆ ಹೆಚ್ಚಿನ ಉತ್ತೇಜನ ಮತ್ತು ಪ್ರೋತ್ಸಾಹ
    ವಿಶ್ವ ಮಾರುಕಟ್ಟೆಯಲ್ಲಿ ಕಾಫಿಗೆ ಬಹು ಬೇಡಿಕೆ: ತಳೂರು ಕಿಶೋರ್ ಕುಮಾರ್
    *************************************************************
    ಮಡಿಕೇರಿ -ಸರ್ಕಾರ ಕಾಫಿ ಬೆಳೆಗೆ ಹೆಚ್ಚಿನ ಉತ್ತೇಜನ ನೀಡುತ್ತಿದ್ದು, ವಿಶ್ವ ಮಾರುಕಟ್ಟೆಯಲ್ಲಿ ಬೇಡಿಕೆ ಇದೆ. ಆದ್ದರಿಂದ ಸಂಪಾಜೆ, ಕರಿಕೆ, ಪೆರಾಜೆ, ಚೆಂಬು ಭಾಗದಲ್ಲಿಯೂ ಸಹ ಕಾಫಿ ಬೆಳೆಯುವಂತಾಗಬೇಕು ಎಂದು ಕಾಫಿ ಮಂಡಳಿ ಸದಸ್ಯರಾದ ತಳೂರು ಕಿಶೋರ್ ಕುಮಾರ್ ಅವರು ಸಲಹೆ ಮಾಡಿದ್ದಾರೆ.
    ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆ ಹಾಗೂ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಪೆರಾಜೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಶುಕ್ರವಾರ ನಡೆದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹಕ್ಕೆ ಚಾಲನೆ ಹಾಗೂ ಕಾರ್ಯದಕ್ಷತೆ, ಉತ್ತರದಾಯಿತ್ವ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸಲು ಡಿಜಿಟಲೀಕರಣವನ್ನು ಪ್ರೋತ್ಸಾಹಿಸುವ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
    ಸರ್ಕಾರ ಕಾಫಿ ಉತ್ಪಾದನೆಗೆ ಸಹಾಯಧನ ಕಲ್ಪಿಸುತ್ತಿದೆ. ಜತೆಗೆ ಪ್ರೋತ್ಸಾಹ ನೀಡುತ್ತಿದೆ. ಹಾಗಾಗಿ ಅಡಿಕೆ, ರಬ್ಬರ್, ಗೇರು ಜೊತೆಗೆ ಕಾಫಿ ಬೆಳೆಯಲು ಪ್ರಯತ್ನಿಸುವಂತೆ ಸಲಹೆ ಮಾಡಿದರು.
    ದೇಶವು ಕಾಫಿ ಉತ್ಪಾದನೆಯಲ್ಲಿ 3.60 ಲಕ್ಷ ಮೆಟ್ರಿಕ್ ಟನ್ ಉತ್ಪಾದಿಸುತ್ತಿದ್ದು, ಇದರಲ್ಲಿ 2.30 ಲಕ್ಷ ಮೆಟ್ರಿಕ್ ಟನ್ ಕಾಫಿಯನ್ನು ವಿದೇಶಕ್ಕೆ ರಫ್ತು ಮಾಡಲಾಗುತ್ತಿದೆ. ಉಳಿದಂತೆ 1.50 ಲಕ್ಷ ರೂ. ಮೆಟ್ರಿಕ್ ಟನ್ ದೇಶದಲ್ಲಿಯೇ ವ್ಯಾಪಾರ ಆಗುತ್ತಿದೆ ಎಂದು ತಳೂರು ಕಿಶೋರ್ ಕುಮಾರ್ ಹೇಳಿದರು.
    ರಾಜ್ಯವು ಕಾಫಿ ಉತ್ಪಾದನೆಯಲ್ಲಿ ಶೇ.60 ರಿಂದ 65 ರಷ್ಟು, ಕೊಡಗು ಜಿಲ್ಲೆ ಕಾಫಿ ಉತ್ಪಾದನೆಯಲ್ಲಿ ಶೇ.30 ರಿಂದ 35 ರಷ್ಟು, ಹಾಗೆಯೇ ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯಿಂದ ಶೇ.25 ರಿಂದ 30 ರಷ್ಟು, ಕೇರಳ, ತಮಿಳುನಾಡು, ಆಂದ್ರ ಪ್ರದೇಶದಲ್ಲಿ ಶೇ.20 ರಿಂದ 30 ರಷ್ಟು ಹಾಗೆಯೇ ಈಶಾನ್ಯ ರಾಜ್ಯಗಳಲ್ಲಿ ಶೇ.10 ರಿಂದ 15 ರಷ್ಟು ಕಾಫಿಯನ್ನು ಉತ್ಪಾದಿಸಲಾಗುತ್ತಿದೆ ಎಂದು ಕಾಫಿ ಮಂಡಳಿ ಸದಸ್ಯರು ವಿವರಿಸಿದರು

    ಸಹಕಾರ ಬ್ಯಾಂಕ್‍ಗಳು ಶೈಕ್ಷಣಿಕ ಸಾಲ ಸೌಲಭ್ಯವನ್ನು ನೀಡುತ್ತಿರುವುದು ಶ್ಲಾಘನೀಯ. ಸಹಕಾರ ಸಂಘಗಳಲ್ಲಿಯೂ ಸಹ ರಾಷ್ಟ್ರೀಕೃತ ಬ್ಯಾಂಕ್‍ಗಳಂತೆ ಗಣಕೀಕರಣವಾಗುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು.
    ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ ಅವರು ಮಾತನಾಡಿ ಪೆರಾಜೆ ಸಹಕಾರ ಸಂಘ ಸ್ಥಾಪಿಸುವಲ್ಲಿ ಡಿಸಿಸಿ ಬ್ಯಾಂಕ್ ಹೆಚ್ಚಿನ ಸಹಕಾರ ನೀಡಿದೆ ಎಂದರು.
    ಪ್ರತಿಯೊಂದು ಕ್ಷೇತ್ರದಲ್ಲೂ ಆರ್ಥಿಕ ಶಿಸ್ತು ಇದ್ದಾಗ ಅಭಿವೃದ್ಧಿ ಸಾಧ್ಯ. ಪೆರಾಜೆ, ಚೆಂಬು, ಸಂಪಾಜೆ ಭಾಗದವರು ಅಡಿಕೆಯನ್ನು ನಂಬಿ ಬದುಕುತ್ತಾರೆ. ಅಡಿಕೆ ರೋಗದಿಂದ ಆದಾಯ ಕಡಿಮೆಯಾಗಿದೆ. ಈಗ ಸದ್ಯಕ್ಕೆ ಮಿಶ್ರ ಬೆಳೆ ಬೆಳೆಯುವಂತಾಗಬೇಕು ಎಂದು ಹೇಳಿದರು.
    ಸಹಕಾರ ಸಂಘಗಳಲ್ಲಿ ಸಾಲ ಪಡೆಯಬೇಕು. ಕಾಲ ಕಾಲಕ್ಕೆ ಮರು ಪಾವತಿ ಮಾಡಬೇಕು. ಸಹಕಾರ ಸಂಘದಲ್ಲಿ ಪಾರದರ್ಶಕತೆ ಕಾಪಾಡಬೇಕು. ಪಿ.ಎಂ.ವಿಶ್ವಕರ್ಮ ಯೋಜನೆ ಸೌಲಭ್ಯ ತಲುಪಬೇಕು ಎಂದರು.
    ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ನಿರ್ದೇಶಕರಾದ ಎ.ಕೆ.ಮನುಮುತ್ತಪ್ಪ ಅವರು ಮಾತನಾಡಿ ಮುಂದಿನ ದಿನಗಳಲ್ಲಿ ಎಲ್ಲಾ ವ್ಯವಹಾರಗಳು ಸಹಕಾರ ಸಂಘಗಳ ಮೂಲಕ ನಡೆಯುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದರು.
    ಆತ್ಮ ನಿರ್ಭರ ಭಾರತ ಯೋಜನೆಯಡಿ ರಾಷ್ಟ್ರ ಸ್ವಾವಲಂಬನೆಯತ್ತ ಹೆಜ್ಜೆ ಇಡಲಾಗುತ್ತದೆ. ಆ ನಿಟ್ಟಿನಲ್ಲಿ ಬೇರೆಯವರನ್ನು ಅವಲಂಭಿಸದೆ ಸ್ಥಳೀಯವಾಗಿ ದೊರೆಯುವ ಸೌಲಭ್ಯಗಳನ್ನು ಬಳಸಿಕೊಂಡು ಆರ್ಥಿಕತೆಯನ್ನು ಉತ್ತೇಜಿಸಬೇಕು ಎಂದರು.
    ಭಾರತ ದೇಶ ಹಾಲು ಉತ್ಪಾದನೆಯಲ್ಲಿ ಪ್ರಥಮ ಸ್ಥಾನದಲ್ಲಿದೆ. ಅದೇ ರೀತಿ ಇತರೆ ಕ್ಷೇತ್ರಗಳಲ್ಲಿಯೂ ಪ್ರಗತಿ ಸಾಧಿಸುವಂತಾಗಬೇಕು ಎಂದರು.
    ದೀಪಾವಳಿ ಸಂದರ್ಭದಲ್ಲಿ ಜಿಎಸ್‍ಟಿ ಕಡಿತದಿಂದ ರಾಷ್ಟ್ರದಲ್ಲಿ 6 ಲಕ್ಷ ಕೋಟಿ ರೂ. ವ್ಯವಹಾರ ಆಗಿರುವುದು ವಿಶೇಷವಾಗಿದೆ ಎಂದರು.
    ಕೊಡಗು ಜಿಲ್ಲೆ ಸಹಕಾರ ಕೇಂದ್ರ ಬ್ಯಾಂಕ್‍ನ ನಿರ್ದೇಶಕರಾದ ಹೊಸೂರು ಸತೀಶ್ ಕುಮಾರ್ ಅವರು ಮಾತನಾಡಿ ಸಹಕಾರ ಸಂಘಗಳಲ್ಲಿಯೂ ಹಲವು ಲೋಪದೋಷಗಳು ಇದ್ದು, ಅದನ್ನು ಸರಿಪಡಿಸಿಕೊಂಡು ಅಭಿವೃದ್ಧಿ ಪಥದತ್ತ ಸಾಗಬೇಕು. ಸಹಕಾರ ಸಂಘಗಳು ಗ್ರಾಮೀಣ ಜನರ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದರು.
    ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ಶ್ಯಾಮಲಾ ಅವರು ಮಾತನಾಡಿ ಸಹಕಾರ ಕ್ಷೇತ್ರ ಬಹಳ ವಿಶಾಲವಾಗಿದ್ದು, ಸಹಕಾರ ಕ್ಷೇತ್ರದಲ್ಲಿ ಪ್ರತಿಯೊಬ್ಬರೂ ತೊಡಗಿಸಿಕೊಳ್ಳುವಂತಾಗಬೇಕು ಎಂದರು.
    ಸಹಕಾರ ಕ್ಷೇತ್ರದ ಮೂಲಕ ಗ್ರಾಮೀಣ ಅಭಿವೃದ್ಧಿ ಆಗಬೇಕು. ಸ್ವಾವಲಂಬಿ ಬದುಕಿಗೆ ಸಹಕಾರ ಕ್ಷೇತ್ರ ಸಹಕಾರಿಯಾಗಿದೆ ಎಂದರು.

    ಸಹಕಾರ ಸಪ್ತಾಹ ಸಂದರ್ಭದಲ್ಲಿ ಆರೋಗ್ಯ ಉಚಿತ ತಪಾಸಣೆ ನಡೆಯಿತು. ಹಾಗೆಯೇ ಸಂಜೀವಿನಿ ಒಕ್ಕೂಟದ ಸದಸ್ಯರಿಂದ ತರಕಾರಿ ಹಾಗೂ ವಿವಿಧ ವಸ್ತುಗಳ ಮಾರಾಟ ಮೇಳ ನಡೆಯಿತು.

    Previous Article*ಪದ್ಮಶ್ರೀ ಸಾಲುಮರದ ತಿಮ್ಮಕ್ಕ (114) ವಿಧಿವಶ*
    Next Article ನಾನು ಗೆದ್ದು ನಿವೃತಿಯಾಗುತ್ತೇನೆ ಹೊರತು ಸೋತಲ್ಲ: ಮಾಜಿ ಸಚಿವ ಅಪ್ಪಚ್ಚುರಂಜನ್.

    Related Posts

    ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್

    September 21, 2026

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026

    ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.

    September 21, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್

    September 21, 2026

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.