
ಮೂರ್ನಾಡು ವಿರಾಜಪೇಟೆ ಮುಖ್ಯ ರಸ್ತೆಯ ಕಾಕೋಟು ಪರಂಬು ಎಂಬಲ್ಲಿ ಘಟನೆ.
ಮೂರ್ನಾಡು ಕಡೆಯಿಂದ ವಿರಾಜಪೇಟೆ ಕಡೆಗೆ ತೆರಳುತ್ತಿದ್ದ ಟಿಪ್ಪರ್ ವಾಹನದ ಹಿಂಬದಿಗೆ ಇದೇ ಮಾರ್ಗವಾಗಿ ತೆರಳುತ್ತಿದ್ದ ಬಿಎಸ್ಎನ್ಎಲ್ ಉದ್ಯೋಗಿಗಳು ಸಂಚರಿಸುತ್ತಿದ್ದ ಬೊಲೆರೋ ಜೀಪ್ ನಿಯಂತ್ರಣ ಕಳೆದುಕೊಂಡು ಟಿಪ್ಪರ್ ವಾಹನ ಹಿಂಬದಿಗೆ ಅಪ್ಪಳಿಸಿದೆ.
ಅಪಘಾತದಿಂದ ಬೊಲೆರೋ ಜೀಪಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು ವಿರಾಜಪೇಟೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಅಪಘಾತದಿಂದ ಬೊಲೆರೋ ಜೀಪ್ ಸಂಪೂರ್ಣ ಜಖಂಗೊಂಡಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

