
“ಎರಡು ಹನಿಗಳು ಪೋಲಿಯೋ ವಿರುದ್ಧ ನಿರಂತರ ಗೆಲುವು”
ಕಾರ್ಯಕ್ರಮದ ಭಾಗವಾಗಿ ಹೆಬ್ಬಾಲೆ ಸರ್ಕಾರಿ ಆಸ್ಪತ್ರೆ ಹಾಗೂ ಅಂಗನವಾಡಿಗಳಲ್ಲಿ ಆಯೋಜನೆಗೊಂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಾಪಂಡ ಮುತ್ತಪ್ಪನವರು ಐದು ವರ್ಷ ಒಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕೋ ಕಾರ್ಯಕ್ರಮವನ್ನು ಸರ್ಕಾರ ಹಮ್ಮಿಕೊಂಡಿದ್ದು ಡಿಸೆಂಬರ್ 21ರಿಂದ 24ರ ವರೆಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಮಕ್ಕಳ ಸ್ವಾಸ್ತ್ಯದ ದೃಷ್ಟಿಯಿಂದ ಎಲ್ಲರೂ 5 ವರ್ಷ ಒಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಪಂಚಾಯಿತಿ ಅಧ್ಯಕ್ಷರಾದ ಅರುಣ ಕುಮಾರಿ, ಮಂಜುನಾಥ,ಹೆಚ್ ಜೆ ತ್ರಿನೇಶ್, ಹಾಗೂ ರವಿ ರವರು ಮತ್ತು ಪ್ರಮುಖರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಆಸ್ಪತ್ರೆ ಸಿಬ್ಬಂದಿಗಳಿಗೆ ಟೋಪಿಗಳನ್ನು, ಮಕ್ಕಳಿಗೆ ಸಿಹಿ ಮತ್ತು ಆಟಿಕೆ ವಿತರಿಸಲಾಯಿತು.

