Close Menu
Kodagu News
    ಹೊಸ ಸುದ್ದಿ

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ
    • ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
    • ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ
    • ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
    • ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
    • ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಆರೋಗ್ಯ»ಸುರಕ್ಷಿತ ಸಹಜ ಹೆರಿಗೆ ರಾಜ್ಯಮಟ್ಟದಲ್ಲಿ ಕೊಡಗು ಜಿಲ್ಲೆಗೆ ಎರಡನೇ ಸ್ಥಾನ
    ಆರೋಗ್ಯ

    ಸುರಕ್ಷಿತ ಸಹಜ ಹೆರಿಗೆ ರಾಜ್ಯಮಟ್ಟದಲ್ಲಿ ಕೊಡಗು ಜಿಲ್ಲೆಗೆ ಎರಡನೇ ಸ್ಥಾನ

    ಸುರಕ್ಷಿತ ಸಹಜ ಹೆರಿಗೆ ರಾಜ್ಯಮಟ್ಟದಲ್ಲಿ ಕೊಡಗು ಜಿಲ್ಲೆಗೆ ಎರಡನೇ ಸ್ಥಾನ

     

    ಜಿಲ್ಲೆಯಲ್ಲಿ ಮಡಿಕೇರಿ ಜಿಲ್ಲಾಸ್ಪತ್ರೆ ಪ್ರಥಮ

     

    ಗೋಣಿಕೊಪ್ಪಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ದ್ವಿತೀಯ ಸ್ಥಾನ

     

    ರಾಜ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಸಹಜ ಹೆರಿಗೆಯಲ್ಲಿ ಕೊಡಗು ಜಿಲ್ಲೆ ಎರಡನೇ ಸ್ಥಾನ ಪಡೆದಿದೆ. ಹಾಗೆ ಕೊಡಗಿನಲ್ಲಿ ಮೊದಲನೇ ಸ್ಥಾನ ಜಿಲ್ಲಾ ಆಸ್ಪತ್ರೆ ಮಡಿಕೇರಿಯಾದರೆ, ದ್ವಿತೀಯ ಸ್ಥಾನ ಪೊನ್ನಂಪೇಟೆ ತಾಲೂಕು ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರ ಪಡೆದುಕೊಂಡಿದೆ.

     

    ಕೊಡಗು ಜಿಲ್ಲೆಯಲ್ಲಿ ಸೋಮವಾರಪೇಟೆ, ಕುಶಾಲನಗರ ವಿರಾಜಪೇಟೆ ತಾಲೂಕು ಆಸ್ಪತ್ರೆಗಳಿದ್ದರು ಹೆಚ್ಚಿನ ಹೆರಿಗೆ ಗೋಣಿಕೊಪ್ಪಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯುತ್ತಿದೆ. ಇಲ್ಲಿನ ಸ್ತ್ರೀ ರೋಗ ತಜ್ಞರಾದ ಗ್ರೀಷ್ಮ ಭೋಜಮ್ಮ , ಹಾಗೂ ಅರವಳಿಕೆ ತಜ್ಞರಾದ ಡಾಕ್ಟರ್ ಸುರೇಶ್ ಇಬ್ಬರೇ ವೈದ್ಯರು ಪ್ರತಿನಿತ್ಯ ನೂರಕ್ಕೂ ಹೆಚ್ಚು ಹೊರರೋಗಿಗಳನ್ನು ಪರೀಕ್ಷಿಸುತ್ತ ಹಗಲು ಹಾಗೂ ರಾತ್ರಿ ಪಾಳೆಯದಲ್ಲಿ ಕರ್ತವ್ಯ ನಿರ್ವಹಿಸುತ್ತಾ ಸಹಜ ಹೆರಿಗೆ ಹಾಗೂ ಸಿಸೇರಿಯನ್ ಕೂಡ ನಡೆಸಿ ದಾಖಲೆ ಬರೆದಿದ್ದಾರೆ.

     

    ಈ ಬಾರಿ ಸಹಜ ಹೆರಿಗೆ 452 ಹಾಗೂ ಸಿಸೇರಿಯನ್ 158 ಒಟ್ಟು 610 ದಾಖಲಾಗಿದೆ. ಇಲ್ಲಿರುವ ದಾದಿಯರ ಪರಿಶ್ರಮ, ಹಾಗೂ ಸಿಬ್ಬಂದಿಗಳ ಕಾರ್ಯಕ್ಷಮತೆಯಿಂದ ಗೋಣಿಕೊಪ್ಪಲು ಸಮುದಾಯ ಆರೋಗ್ಯ ಕೇಂದ್ರ ಆರೋಗ್ಯ ಸೇವೆಯಲ್ಲಿ ಹೆಸರು ಪಡೆದಿದೆ.

     

    ಕಳೆದ ಎರಡು ತಿಂಗಳ ಹಿಂದೆ ಸಾಮೂಹಿಕ ವರ್ಗಾವಣೆಯಲ್ಲಿ ಈ ಇಬ್ಬರು ವ್ಯದ್ಯರನ್ನು ಬೇರೆ ಕಡೆ ವರ್ಗಾಯಿಸಲಾಗಿತ್ತು. ಹಾಗೆ ಬದಲಿ ವ್ಯದ್ಯರನ್ನು ಇಲ್ಲಿ ನೇಮಿಸದೆ,ಈ ಭಾಗದ ಜನರು ಕಂಗಾಲಾಗಿದ್ದಾಗ, ಶಾಸಕರಾದ ಎ. ಎಸ್ ಪೊನ್ನಣ್ಣ, ಗ್ಯಾರೆಂಟಿ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷರಾದ ಧರ್ಮಜಾ ಉತ್ತಪ್ಪ, ಜಿಲ್ಲಾ ಆರೋಗ್ಯ ಅಧಿಕಾರಿ ಸತೀಶ್ ಹಾಗೂ ತಾಲೂಕು ವೈದ್ಯಧಿಕಾರಿ ಡಾ..ಯತಿರಾಜ್ ರವರು ಇಲ್ಲಿನ ಸಮಸ್ಯೆಗಳನ್ನು, ಹಾಗೂ ಈ ಆಸ್ಪತ್ರೆಯ ಪ್ರಗತಿಯ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯ ಆಯುಕ್ತರಿಗೆ ಮನವರಿಕೆ ಮಾಡಿಕೊಟ್ಟ ಪರಿಣಾಮ ವರ್ಗಾವಣೆಗೊಂಡ ಇಬ್ಬರು ವೈದ್ಯರನ್ನು ಮತ್ತೆ ಪುನಃ ಈ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮರು ನೇಮಕಗೊಳಿಸಿ ಆದೇಶ ಹೊರಡಿಸಿದ್ದರು. ಕಳೆದ 12ಕ್ಕು ಹೆಚ್ಚು ವರ್ಷಗಳಿಂದ ಈ ಇಬ್ಬರು ವೈದ್ಯರು ಇಲ್ಲಿ ಕಾರ್ಯನಿರ್ವಹಿಸುತ್ತಿದ್ದು ಸಿಬ್ಬಂದಿಗಳ ಸಹಕಾರದಿಂದ ಗರ್ಭಿಣಿ ಸ್ತ್ರೀಯರು ಹಾಗೂ ರೋಗಿಗಳು ಸರ್ಕಾರಿ ಆಸ್ಪತ್ರೆಗಳತ್ತ ಒಲವು ತೋರಲು ಕಾರಣವಾಗಿದೆ. ಕೇವಲ ಇಬ್ಬರೇ ಖಾಯಂ ವ್ಯದ್ಯರು ಇರುವ ಈ ಸಮುದಾಯ ಆರೋಗ್ಯ ಕೇಂದ್ರಕ್ಕೆ, ಮೂಳೆ ತಜ್ಞರು, ಕಿವಿ ಮತ್ತು ಮೂಗು ತಜ್ಞರು, ಶಸ್ತ್ರ ವೈದ್ಯರ ಅವಶ್ಯಕತೆ ಇದ್ದು, ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಈ ಬಗ್ಗೆ ನೇಮಕಾತಿಗೊಳಿಸಲು ಪ್ರಯತ್ನಿಸಬೇಕಾಗಿದೆ.

     

    ಖಾಸಗಿ ಆಸ್ಪತ್ರೆಗಳ ಪೈಪೋಟಿಯ ನಡುವೆ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳತ್ತ ಗರ್ಭಿಣಿಯರು ಹಾಗು ರೋಗಿಗಳು ಮುಖ ಮಾಡಿರೋದು ವಿಶೇಷವಾಗಿದೆ.

     

    *ಕೊಡಗು ನ್ಯೂಸ್*

    Previous Articleಜೆಜೆಎಂ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಆನಂದ್ ಪ್ರಕಾಶ್ ಮೀನಾ
    Next Article ವಿರಾಜಪೇಟೆ ಚೆಕ್ ಬೌನ್ಸ್ ಪ್ರಕರಣ

    Related Posts

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.