ಸುಂಟಿಕೊಪ್ಪ ಪಿಎಸ್ ಮೋಹನ್ ರಾಜ್ ಗೆ ಬೆಳ್ಳಿ ಪದಕ

ಕೊಡಗಿನ ಪೊನ್ನಂಪೇಟೆಯಲ್ಲಿ ನಡೆದಿದ್ದ ಕೊಲೆ ಪ್ರಕರಣವೊಂದರಲ್ಲಿ ಆರೋಪಿಯನ್ನು ಬಂಧಿಸಿ ಉತ್ತಮವಾದ ತನಿಖೆಯನ್ನು ನಡೆಸಿ ಸಾಕ್ಷ್ಯಧಾರಗಳನ್ನು ಕಲೆಹಾಕಿ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಲ್ಲಿ ಪ್ರಮುಖ ಪಾತ್ರವಹಿಸಿದ ತಂಡದಲ್ಲಿದ್ದ ಸುಂಟಿಕೊಪ್ಪ ಪೊಲೀಸ್ ಠಾಣೆಯ ಪಿಎಸ್ಐ ಪಿ.ಮೋಹನ್‌ರಾಜ್ ಅವರಿಗೆ ಪ್ರಶಂಸನಾ ಪತ್ರ ಮತ್ತು ಬೆಳ್ಳಿ ಪದಕ ಲಭಿಸಿದೆ.

ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಮೋಹನ್‌ರಾಜ್ ಸೇರಿದಂತೆ ವಿವಿಧ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ ಮತ್ತು ಬೆಳ್ಳಿಯ ಪದಕಗಳನ್ನು ನೀಡಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೆ.ರಾಮರಾಜನ್ ಗೌರವಿಸಿದ್ದಾರೆ.

ಕೊಡಗು ನ್ಯೂಸ್

Exit mobile version