ಕೊಡಗು ಜಿಲ್ಲಾ ಪೊಲೀಸ್ ಪ್ರಕಟಣೆ

ಕಾಫಿ ಮತ್ತು ಮೆಣಸು ಬೆಳಗಾರರಿಗೆ ಎಚ್ಚರದ ಸಂದೇಶ

ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿನ ಎಲ್ಲಾ ಕಾಫಿ ಮತ್ತು ಕಾಳು ಮೆಣಸು ಬೆಳೆಗಾರರು ಕಾಫಿ-ಕಾಳು ಮೆಣಸು ಫಸಲನ್ನು ಕೊಯ್ಲು ಮಾಡುವ ಕಾಲವಾಗಿರುತ್ತದೆ.

ಕೊಯ್ಲು ಮಾಡಿರುವ ಕಾಫಿ ಕಾಳು ಮೆಣಸನ್ನು ಸಂಗ್ರಹ ಮಾಡಿರುವ ಸ್ಥಳಗಳಿಂದ ಕಳವು ಮಾಡಿರುವ ಕುರಿತು ವಿವಿಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಆದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಲ್ಲಿನ ಕಾಫಿ ಮತ್ತು ಕಾಳುಮೆಣಸು ವ್ಯಾಪಾರ ಮಾಡುವವರೊಂದಿಗೆ ಸಭೆ ನಡೆಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಹಾಗೂ ಕಾಫಿ ಮತ್ತು ಕಾಳು ಮೆಣಸು ವ್ಯಾಪಾರಸ್ಥರ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸುವಂತೆ ಸ್ಥಳೀಯ ಪೊಲೀಸ್ ಠಾಣಾಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿರುತ್ತದೆ.

ಜಿಲ್ಲೆಯಲ್ಲಿನ ಕಾಫಿ ಮತ್ತು ಕಾಳುಮೆಣಸು ವ್ಯಾಪಾರಸ್ಥರು ಕಾಫಿ ಮತ್ತು ಕಾಳು ಮೆಣಸು ಖರೀದಿ ಮಾಡುವ ಸಂದರ್ಭದಲ್ಲಿ ಮಾರಾಟ ಮಾಡುವವರ ಸಂಪೂರ್ಣ ಮಾಹಿತಿ ಸಂಗ್ರಹಿಸಿ ಇಟ್ಟುಕೊಳ್ಳುವುದು ಮತ್ತು ಬೆಳೆ ಖರೀದಿ ಸಂದರ್ಭ ಸಂಶಯ ಉಂಟಾದಲ್ಲಿ ಅಂತಹ ವ್ಯಕ್ತಿಗಳ ಭಾವಚಿತ್ರವನ್ನು ತೆಗೆದುಕೊಳ್ಳುವುದು ಹಾಗೂ ಸದರಿ ಮಾರಾಟಗಾರರ ಕುರಿತು ಹಿನ್ನೆಲೆಯನ್ನು ಪರಿಶೀಲಿಸಿ ಎಚ್ಚರಿಕೆಯಿಂದ ವ್ಯವಹಾರ ನಡೆಸುವುದು.

ಕಾಫಿ ವ್ಯಾಪಾರಸ್ಥರು ಮೇಲ್ಕಂಡ ವಿವರಗಳನ್ನು ಪಡೆಯುವುದು ಕಡ್ಡಾಯವಾಗಿರುತ್ತದೆ.

ಹಾಗೂ ಮಾರಾಟ ಖರೀದಿ-ಸಂದರ್ಭ ಯಾವುದೇ ರೀತಿ ಅನುಮಾನ ಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವುದು ಒಂದು ವೇಳೆ ಮೇಲ್ಕಂಡ ವಿವರಗಳ ದಾಖಲಾತಿಯನ್ನು ನಿರ್ವಹಿಸದಿರುವುದು ಸ್ಥಳೀಯ ಪೊಲೀಸ್ ಠಾಣಾಧಿಕಾರಿಗಳು ವ್ಯಾಪಾರಸ್ಥರ ಪರಿಶೀಲನೆ ಸಂದರ್ಭ ಕಂಡುಬಂದಲ್ಲಿ ಅಂತಹವರ ವಿರುದ್ಧ ಜಿಎಸ್ ಟಿ ಇಲಾಖೆ

ಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಲಾಗಿರುತ್ತದೆ.

ವಿಶೇಷ ಸೂಚನೆ:- ಕಾಫಿ ಮತ್ತು ಕಾಳು ಮೆಣಸು ಬೆಳಗಾರರು ವ್ಯಾಪಾರ ನಡೆಸುವ ಸಂದರ್ಭ ಮಾರಾಟ-ಖರೀದಿ ಕುರಿತು ಸಂಶಯ ಬಂದಲ್ಲಿ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿ ಮಾಹಿತಿ ಒದಗಿಸಿದಲ್ಲಿ ಕೂಡಲೇ ಸ್ಥಳಕ್ಕೆ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಆಗಮಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕೊಡಗು ನ್ಯೂಸ್

Exit mobile version