ಲೈಂಗಿಕ ದೌರ್ಜನ್ಯದಿಂದ ಮಕ್ಕಳ ಸಂರಕ್ಷಣೆ ಕುರಿತು ಮಡಿಕೇರಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಹಿತಿ ಕಾರ್ಯಗಾರ

ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು :ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಡಿಕೇರಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯ ಸಹಯೋಗದೊಂದಲ್ಲಿ ಲೈಂಗಿಕ ದೌರ್ಜನ್ಯದಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012 ಕುರಿತು ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಹಿತಿ ಕಾರ್ಯಗಾರ ಕಾರ್ಯಕ್ರಮವು ಮಡಿಕೇರಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿನಡೆಯಿತು.
ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳಾಭಿವೃದ್ಧಿ ಯೋಜನಾಧಿಕಾರಿ ಸೀತಾ ಲಕ್ಷ್ಮಿಅವರು ಉದ್ಘಾಟಿಸಿ ಮಾತನಾಡಿ, ಹೆಣ್ಣು ಮಗಳನ್ನು ರಕ್ಷಿಸಿ ಹೆಣ್ಣು ಮಗಳನ್ನು ಓದಿಸಿ. ಯೋಜನೆಯು ಕುಸಿಯುತ್ತಿರುವ ಮಕ್ಕಳ ಲಿಂಗ ಅನುಪಾತವನ್ನು ಪರಿಹರಿಸುವ ಮತ್ತು ಹೆಣ್ಣು ಮಗುವಿನ ಬದುಕುಳಿಯುವಿಕೆ, ರಕ್ಷಣೆ ಮತ್ತು ಹೆಣ್ಣು ಮಗುವಿನ ಶಿಕ್ಷಣವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು.
ಪ್ರಭಾರ ಸಹಾಯಕ ಶಿಶು ಅಭಿವೃದ್ದಿ ಯೋಜನಾಧಿಕಾರಿ ಶೀಲಾ ಅಶೋಕ್ ಅವರು ಮಾತನಾಡಿ ಪೌಷ್ಟಿಕ ಆಹಾರ ಸೇವನೆಯಿಂದ ಆರೋಗ್ಯ ಸುಧಾರಣೆ ಸಾಧ್ಯವಿದೆ. ಈ ನಿಟ್ಟಿನಲ್ಲಿ ಸರ್ಕಾರವು ಪೋಷಣ್ ಅಭಿಯಾನ ಯೋಜನೆಯ ಮೂಲಕ ಮಕ್ಕಳು, ಹೆಣ್ಣು ಮಕ್ಕಳು, ಗರ್ಭಿಣಿ, ಬಾಣಂತಿಯರಲ್ಲಿ ಪೌಷ್ಠಿಕಾಂಶ ಕೊರತೆಯನ್ನು ನೀಗಿಸುವುದಕ್ಕಾಗಿ ಶ್ರಮ ಪಡುತ್ತಿದೆ ಎಂದರು.
ಸಂಪನ್ಮೂಲ ವ್ಯಕ್ತಿಯಾದ ಮಿಷನ್ ಸಂಯೋಜಕಿ ಮಮತ ಮಿಷನ್ ಶಕ್ತಿ ಯೋಜನೆಯಡಿಯಲ್ಲಿ ಬರುವ ಸಂಬಲ್ ಯೋಜನೆಗಳಾದ ಸಖಿ ಒನ್ ಸ್ಟಾಫ್ ಸೆಂಟರ್, ಮಹಿಳಾ ಸಹಾಯವಾಣಿ ಹಾಗೂ ಸಖಿ ನಿವಾಸ, ಶಕ್ತಿ ಸದನ್ ಬಗ್ಗೆ ತಿಳಿಸಿದ ಅವರು ಫಲಾನುಭವಿಗಳು ಯಾವುದೇ ಯೋಜನೆಗಳಿಂದ ವಂಚಿತರಾಗದಂತೆ ನೋಡಿಕೊಂಡು, ಅಗತ್ಯವಿದ್ದವರಿಗೆ ಯೋಜನೆಗಳ ಪ್ರಯೋಜನ ದೊರಕುವಂತೆ ಮಾಡಬೇಕು ಎಂದು ತಿಳಿಸಿದರು.
ನಂತರ ಜೆಂಡರ್ ಸ್ಪೆಷಲೀಸ್ಟ್ ಕೇಶಿನಿ ಎಸ್ ಆರ್ ಇವರು ಮಾತನಾಡಿ ಮಿಷನ್ ಶಕ್ತಿ ಯೋಜನೆಯ ಸಾಮಥ್ಯ೯ದಡಿಯಲ್ಲಿ ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆ ಮತ್ತು ಡ್ಯಾಶ್ ಬೋಡ್೯ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭ ಇಲಾಖೆಯ ಹಣಕಾಸು ಸಾಕ್ಷರತೆ ಮತ್ತು ಲೆಕ್ಕಪರಿಶೋಧಕರಾದ ನಳಿನಿ, ಮಾತೃವಂದನಾ ಯೋಜನಾ ಸಹಾಯಕ ಸಂಯೋಜಕರಾದ ಗಾಯತ್ರಿ, ಪೋಷಣ್ ಅಭಿಯಾನದ ತಾಲ್ಲೂಕು ಕಾರ್ಯಕ್ರಮ ಸಹಾಯಕಿ ತೇಜಸ್ವಿನಿ,ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.
ಕೊಡಗು ನ್ಯೂಸ್

