14ನೇ ವರ್ಷದ ಗ್ರಾಮೀಣ ಮಟ್ಟದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಸುಶಾಸನಾ ದಿನದ (ಉತ್ತಮ ಆಡಳಿತ ದಿನ) ಪ್ರಯುಕ್ತ 14ನೇ ವರ್ಷದ ಗ್ರಾಮೀಣ ಮಟ್ಟದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ,ಮೈಬಾರತ್ ಕೊಡಗು ಜಿಲ್ಲೆ, ಜಿಲ್ಲಾ ಯುವ ಒಕ್ಕೂಟ ಕೊಡಗು,ತಾಲ್ಲೂಕು ಯುವ ಒಕ್ಕೂಟ ಮಡಿಕೇರಿ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಲಯನ್ಸ್ ಕ್ಲಬ್ ಮಡಿಕೇರಿ, ರೋಟರಿ ಕ್ಲಬ್ ಆಫ್ ಮಡಿಕೇರಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕೊಡಗು ರೋಟರಿ ಮಡಿಕೇರಿ, ಕಾರ್ಮಿಕ ಇಲಾಖೆ ಮಡಿಕೇರಿ, ಜಿಲ್ಲಾ ಆಸ್ಪತ್ರೆ ಮಡಿಕೇರಿ, ಮೇಕೆರಿ ಗ್ರಾಮ ಪಂಚಾಯಿತಿ, ಸ್ವಾಗತ ಯುವಕ ಸಂಘ ಮೇಕೆರಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್ 26 ರಂದು 9:30 ರಿಂದ 2 ಗಂಟೆಯವರೆಗೆ ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆಯಲ್ಲಿ ಅಸಂಘಟಿತ ಕಾರ್ಮಿಕರ ನೋಂದಣಿ ಮತ್ತು ಸ್ಮಾರ್ಟ್ ಕಾರ್ಡ್ ವಿತರಣೆ. ಕರ್ನಾಟಕ ರಾಜ್ಯ ಮೋಟಾರ್ ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿಯಿಂದ ನೋಂದಣಿ ಮತ್ತು ಸ್ಮಾರ್ಟ್ ಕಾರ್ಡ್ ವಿತರಣೆ ಕಾರ್ಯಕ್ರಮವನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇಕೆರಿಯಲ್ಲಿ ಆಯೋಜಿಸಲಾಗಿದೆ.
ಕೊಡಗು ಜಿಲ್ಲೆ

