ಕೊಡಗು ಜೆಡಿಎಸ್ ಅಲ್ಪಸಂಖ್ಯಾತ ಮುಖಂಡರಿಂದ ಸಂಸದರಿಗೆ ಮನವಿ ಸಲ್ಲಿಕೆ
ಕೊಡಗು ಮೈಸೂರ್ ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡಯರ್ ರವರನ್ನು ಕೊಡಗು ಜಿಲ್ಲೆಯ ಜೆಡಿಎಸ್ ಅಲ್ಪಸಂಖ್ಯಾತ ಮುಖಂಡರು ಭೇಟಿಯಾಗಿ ವಿವಿಧ ಬೇಡಿಕೆಗಳಿಗೆ ಮನವಿ ಸಲ್ಲಿಸಿದರು.
ಅಲ್ಪಸಂಖ್ಯಾತ ಸಮುದಾಯದ ಸಮುದಾಯ ಭವನ,ಮಸೀದಿ, ಕಬರ್ ಸ್ಥಾನಗಳಿಗೆ ತಡೆಗೋಡೆ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಮಾನ್ಯ ಸಂಸದರಲ್ಲಿ ಮನವಿ ಮಾಡಿಕೊಂಡರು.
ಈ ಸಂದರ್ಭ ವಿರಾಜಪೇಟೆ ತಾಲೂಕು ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸೈಫುದ್ದಿನ್ ಚಾಮಿಯಾಲ,ಕುಶಾಲನಗರ ತಾಲೂಕು ಅಲ್ಪಸಂಖ್ಯಾತ ಅಧ್ಯಕ್ಷ ಸಿಯಾಬುದ್ದೀನ್,ಮಡಿಕೇರಿ ತಾಲೂಕು ಅಲ್ಪಸಂಖ್ಯಾತ ಅಧ್ಯಕ್ಷ ಅಶ್ರಫ್ ಹಾಕತ್ತೂರ್, ಅಲ್ಪಸಂಖ್ಯಾತ ಘಟಕದ ರಾಜ್ಯ ಕಾರ್ಯದರ್ಶಿ ಅಬಿದ್ ಹುಸೈನ್ ಇದ್ದರು.
ಕೊಡಗು ನ್ಯೂಸ್


