ಪತ್ರಕರ್ತ ಅನಿಲ್ ಹೆಚ್.ಟಿ ಗೆ ಗಾಂಧಿಪ್ರಿಯ ಪ್ರಶಸ್ತಿ
ಬೆಂಗಳೂರಿನ ಸಮಥ೯ ಸಾಹಿತ್ಯ ಮತ್ತು ಸಾಂಸ್ಕೖತಿಕ ಪ್ರತಿಷ್ಠಾನವು ನೀಡುವ ವಾಷಿ೯ಕ ಪ್ರಶಸ್ತಿಗೆ ಪತ್ರಿಕೋದ್ಯಮ ಕ್ಷೇತ್ರದಿಂದ ಮಡಿಕೇರಿಯ ಅನಿಲ್ ಹೆಚ್.ಟಿ. ಆಯ್ಕೆಯಾಗಿದ್ದಾರೆ.
ಸಮಥ೯ ಸಾಹಿತ್ಯ ಮತ್ತು ಸಾಂಸ್ಕೖತಿಕ ಪ್ರತಿಷ್ಟಾನವು ವಾಷಿ೯ಕವಾಗಿ ಪತ್ರಿಕೋದ್ಯಮ, ಸಮಾಜಸೇವೆ, ಆರೋಗ್ಯ, ಶಿಕ್ಷಣ, ಸಾಹಿತ್ಯ, ಉದ್ಯಮ, ಸಂಗೀತ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿನ ಸಾಧಕರನ್ನು ಗುರುತಿಸಿ ಗಾಂಧಿ ಪ್ರಿಯ ಹೆಸರಿನ ಪ್ರಶಸ್ತಿ ನೀಡುತ್ತಿದೆ. ಈ ವಷ೯ದ ಗಾಂಧಿ ಪ್ರಿಯ ಪ್ರಶಸ್ತಿಗೆ ಪತ್ರಿಕೋದ್ಯಮ ಕ್ಷೇತ್ರದಿಂದ ಅನಿಲ್ ಹೆಚ್.ಟಿ. ಆಯ್ಕೆಯಾಗಿದ್ದಾರೆ. ಪತ್ರಿಕೋದ್ಯಮ, ವಿದ್ಯುನ್ಮಾನ, ಬಾನುಲಿ ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಸೇವೆಗಳಲ್ಲಿ ಅನಿಲ್ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಪ್ರತಿಷ್ಟಾನದ ಅಧ್ಯಕ್ಷ ಎಸ್.ಆರ್. ವಿಜಯಸಮಥ್೯ ತಿಳಿಸಿದ್ದಾರೆ.
ಪ್ರಶಸ್ತಿ ಪ್ರಧಾನ ಸಮಾರಂಭವು ನಾಳೆ ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಚಾಮರಾಜಪೇಟೆಯ ಕುವೆಂಪು ಸಭಾಂಗಣದಲ್ಲಿ ಆಯೋಜಿತವಾಗಿದ್ದು ವಿಶ್ರಾಂತ ನ್ಯಾಯಮೂತಿ೯ ಪಾಲಾಕ್ಷಪ್ಪ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.
ಮಡಿಕೇರಿಯಲ್ಲಿ ಪತ್ರಕತ೯ರಾಗಿರುವ ಅನಿಲ್ ಟಿವಿ 1 ಚಾನಲ್ ನ ಪ್ರಧಾನ ಸಂಪಾದಕರಾಗಿದ್ದು ಆಕಾಶವಾಣಿಯ ಕೊಡಗು ಜಿಲ್ಲಾ ವರದಿಗಾರರಾಗಿದ್ದಾರೆ. ವಿಶ್ವವಾಣಿ ಪತ್ರಿಕೆಯ ಹಿರಿಯ ವರದಿಗಾರರು, ಪ್ರವಾಸಿ ಪ್ರಪಂಚ ವಾರಪತ್ರಿಕೆಯ ವಿಶೇಷ ಪ್ರತಿನಿಧಿಯಾಗಿದ್ದಾರೆ. ಅನಿಲ್ ಅವರಿಗೆ ದೊರಕುತ್ತಿರುವ ಪತ್ರಿಕೋದ್ಯಮದಲ್ಲೆಯೇ ದಾಖಲೆಯ 64 ನೇ ಪ್ರಶಸ್ತಿ ಇದಾಗಿದೆ.
ಕೊಡಗು ನ್ಯೂಸ್


