ಕಲ್ಕಂದೂರಿನಲ್ಲಿ ಅಕ್ರಮ ಗೋಮಾಂಸ ಸಾಗಾಟ: ಗೋಮಾಂಸ & ಆರೋಪಿಗಳ ಸಮೇತ ವಾಹನ ಮುಟ್ಟುಗೋಲು

ಸೋಮವಾರಪೇಟೆ ತಾಲ್ಲೂಕಿನ ಕಲ್ಕಂದೂರಿನಲ್ಲಿ KA50 M 6232 ನೋಂದಣಿ ಸಂಖ್ಯೆಯ ಆಲ್ಟೋ ಕಾರಿನಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯನ್ನಾಧರಿಸಿ ಕಾರ್ಯಾಚರಣೆ ನಡೆಸಿದ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಕಲ್ಕಂದೂರಿನ ಅದ್ರಾಮ ಮತ್ತು ನಾಲ್ವರು ಅಸ್ಸಾಂ ಕಾರ್ಮಿಕರೂ ಸೇರಿದಂತೆ ಗೋಮಾಂಸ ಸಾಗಾಟ ಮಾಡುತ್ತಿದ್ದ ಒಟ್ಟು 5 ಆರೋಪಿಗಳ ಸಮೇತ ಆಲ್ಟೋ ಕಾರನ್ನು ಪೋಲೀಸರಿಗೆ ಒಪ್ಪಿಸಿದ್ದಾರೆ.
ಕೊಡಗು ಜಿಲ್ಲೆಯಾದ್ಯಂತ ವ್ಯಾಪಕವಾಗಿ ನಡೆಯುತ್ತಿರುವ ಗೋಹತ್ಯೆ- ಗೋಕಳ್ಳಸಾಗಾಟ- ಗೋಮಾಂಸ ಮಾರಾಟಗಳನ್ನು ತಡೆಗಟ್ಟಲು ಪೋಲೀಸರು ಸೂಕ್ತ ಕಠಿಣ ಕಾನೂನು ಕ್ರಮ ಕೈಗೊಳ್ಳದೇ ಇರುವುದರಿಂದಾಗಿ ಬಹುಸಂಖ್ಯಾತ ಹಿಂದುಗಳು ಪೂಜಿಸುವ ಗೋವುಗಳ ಹತ್ಯೆ ನಿರಂತರವಾಗಿ ನಡೆಯುತ್ತಿದ್ದು ಹಿಂದೂ ಧಾರ್ಮಿಕ ನಂಬಿಕೆಗಳಿಗೆ ಘಾಸಿಯಾಗುತ್ತಿದೆಯೆಂದು ಹಿಂದು ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ್ ಬೋಜೇಗೌಡ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಕೊಡಗು ನ್ಯೂಸ್

