ನಿರೂಪಕಿ ಹರ್ಷಿತಾ ಶೆಟ್ಟಿ ಮನವಳಿಕೆ ಗುತ್ತು ಇವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ “2026.

 

ಕೊಡಗಿನ ಬಹಳಷ್ಟು ಕಾರ್ಯಕ್ರಮಗಳಲ್ಲಿ, ಕಾರ್ಯಕ್ರಮದ ನಿರೂಪಣೆಯ ಮೂಲಕ ಜನಮನಗೆದ್ದಿರುವ ಯುವ ಪ್ರತಿಭೆ ನಿರೂಪಕಿ ಹರ್ಷಿತಾ ಶೆಟ್ಟಿ ಮನವಳಿಕೆ ಗುತ್ತು

ಇವರಿಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.” ಯನ್ನು

ಜನವರಿ 18ಕ್ಕೆ ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮ ದಲ್ಲಿ, ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿ ನಲ್ಲಿ ನೀಡಿ ಗೌರವಿಸಲಾಗುವುದು ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಘೋಷಿಸಿದ್ದಾರೆ ಎಂದು ಕೊಡಗು ಕನ್ನಡ ಭವನದ ಪ್ರಧಾನ ಕಾರ್ಯದರ್ಶಿ ಚಂದನ್ ನಂದರಬೆಟ್ಟು ಪತ್ರಿಕಾ ಹೇಳಿಕೆ ನೀಡಿದ್ದಾರೆ.

Exit mobile version