ಮೂರ್ನಾಡಿನಲ್ಲಿ ಲೆವಿಷ್ಟಾ ಚಾಂಪಿಯನ್ ಟ್ರೋಫಿ ಹಾಕಿ ಪಂದ್ಯಾವಳಿಯ ಫೈನಲ್:- ಮುಖ್ಯ ಅತಿಥಿಗಳಾಗಿ ಎ ಎಸ್ ಪೊನ್ನಣ್ಣ 
ಕೊಡವ ಹಾಕಿ ಅಕಾಡೆಮಿ ವತಿಯಿಂದ ಆಯೋಜನೆಗೊಂಡಿರುವ, ಲೆವಿಷ್ಟಾ ಚಾಂಪಿಯನ್ಸ್ ಟ್ರೋಫಿ ಹಾಕಿ ಪಂದ್ಯಾವಳಿಯ ಫೈನಲ್ ಪಂದ್ಯದ ಮುಖ್ಯ ಅತಿಥಿಯಾಗಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣರವರು ಭಾಗವಹಿಸಿದರು.
ಮೂರ್ನಾಡಿನ ಬಾಚೆಟ್ಟೀರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಕಳೆದ ಹಲವು ದಿನಗಳಿಂದ ನಡೆಯುತ್ತಿರುವ ಈ ಪಂದ್ಯಾಟದ ಫೈನಲ್ ಪಂದ್ಯದ ವೀಕ್ಷಣೆಗೆ ಹಾಗೂ ಪ್ರಶಸ್ತಿ ವಿತರಣೆಗೆ ಮಾನ್ಯ ಶಾಸಕರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು.
ಫೈನಲ್ ಪಂದ್ಯಕ್ಕೆ ಶುಭ ಕೋರುತ್ತಾ ಮಾತನಾಡಿದ ಮಾನ್ಯ ಶಾಸಕರು, ಕೊಡಗಿನ ಅದರಲ್ಲೂ ವಿಶೇಷವಾಗಿ ಕೊಡವ ಜನರ ಉಸಿರಾಗಿರುವ ಹಾಕಿ ಪಂದ್ಯಾಟ ಇತ್ತೀಚಿನ ದಿನಗಳಲ್ಲಿ ಮತ್ತಷ್ಟು ಖ್ಯಾತಿ ಪಡೆಯುತ್ತಿದ್ದು ಇಂತಹ ಪಂದ್ಯಾವಳಿಗಳು ಯುವ ಪ್ರತಿಭೆಯನ್ನು ಲೋಕಕ್ಕೆ ಪರಿಚಯಿಸಲು ತುಂಬಾ ಸಹಕಾರಿಯಾಗುತ್ತದೆ.
ಕೊಡವ ಹಾಕಿ ಅಕಾಡೆಮಿಯ ಈ ಪ್ರಯತ್ನವು ಅತ್ಯಂತ ಮಹತ್ವದ್ದಾಗಿದ್ದು ನಾಡಿನ ಯುವ ಪ್ರತಿಭೆಯನ್ನು ಲೋಕಕ್ಕೆ ಪರಿಚಯಿಸುತ್ತಿರುವುದು ಹೆಮ್ಮೆ ಅನಿಸುತ್ತಿದೆ. ಪಂದ್ಯಾಟದಲ್ಲಿ ಭಾಗವಹಿಸಿದ ಎಲ್ಲಾ ತಂಡದವರಿಗೂ ಹಾಗೂ ತಮ್ಮ ವಿಶೇಷ ಪ್ರತಿಭೆಯನ್ನು ಪ್ರದರ್ಶಿಸಿದ ಎಲ್ಲಾ ಆಟಗಾರರಿಗೂ ಶುಭ ಕೋರುತ್ತಾ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸಿದರು.
ಇದೇ ಸಂದರ್ಭದಲ್ಲಿ ಒಲಂಪಿಯನ್ ಚೆಪ್ಪುಡೀರ ಕಾರ್ಯಪ್ಪ ರವರನ್ನು ಮಾನ್ಯ ಶಾಸಕರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ವೇದಿಕೆ ಮೇಲೆ ಉಪಸ್ಥಿತರಿರುವ ಎಲ್ಲಾ ಗಣ್ಯರು ವಿಧಾನ ಪರಿಷತ್ ಸದಸ್ಯರು ಸುಜಾ ಕುಶಾಲಪ್ಪ, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರು ಅರುಣ್ ಮಾಚಯ್ಯ, ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷರಾದ ಪಾಂಡಾಂಡ ಬೋಪಣ್ಣ, ಎಸ್ ಎಲ್ ಎನ್ ಸಾತಪ್ಪನ್, ವಿಶ್ವನಾಥನ್, ಒಲಂಪಿಯನ್ ಚೆಪ್ಪುಡೀರ ಪೂಣಚ್ಚ, ರಮೇಶ್ ಮುದ್ದಯ್ಯ, ಸುರೇಶ್ ಅಪ್ಪಯ್ಯ, ಅರುಣ್ ಬೇಬ, ದೀಪಕ್ ಚೆಂಗಪ್ಪ, ಕಲಿಯಂಡ ಸಂಪನ್ ಅಯ್ಯಪ್ಪ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಕೊಡಗು ನ್ಯೂಸ್

