ನಾಪೋಕ್ಲು ಗ್ರಾಮ ಪಂಚಾಯಿತಿಯಲ್ಲಿ ಯಶಸ್ವಿಯಾಗಿ ನಡೆದ ಮಹಿಳಾ ಮತ್ತು ಮಕ್ಕಳ ರಕ್ಷಣಾ ಸಮಿತಿ ಸಭೆ

ವರದಿ:-ಝಕರಿಯ ನಾಪೋಕ್ಲು

ನಾಪೋಕ್ಲು :ನಾಪೋಕ್ಲು ಗ್ರಾಮ ಪಂಚಾಯಿತಿಯಲ್ಲಿ ಮಹಿಳಾ ಮತ್ತು ಮಕ್ಕಳ ರಕ್ಷಣಾ ಸಮಿತಿ ಸಭೆಯು ಯಶಸ್ವಿಯಾಗಿ ನಡೆಯಿತು.

ಪಂಚಾಯಿತಿ ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷರಾದ ವನಜಾಕ್ಷಿ ರೇಣುಕೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕದ ಅಧಿಕಾರಿ ಸುಮತಿ ಅವರು ಪಾಲ್ಗೊಂಡು ಮಾತನಾಡಿ ಬಾಲ್ಯವಿವಾಹ ನಿಷೇಧ ಕಾಯ್ದೆ, ಫೋಕ್ಸೋ ಕಾಯಿದೆ, ಬಾಲಕಾರ್ಮಿಕ ನಿರ್ಮೂಲನ ಹಾಗೂ ಆತ್ಮಹತ್ಯೆ ತಡೆಯ ಬಗ್ಗೆ ತೆಗೆದುಕೊಳ್ಳಬೇಕಾದ ಮುನ್ನೆಚರಿಕಾ ಕ್ರಮದ ಕುರಿತು ಸಮಗ್ರ ಮಾಹಿತಿ ನೀಡಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಕಾಧಿಕಾರಿ ತುಳಸಿ ಅವರು ಮಾತನಾಡಿ ಪ್ರಾಯೋಜಕೃತ್ ಯೋಜನೆಯ ಮಾಹಿತಿ ಮತ್ತು ಸಮುದಾಯದ ವ್ಯಾಪ್ತಿಯಲ್ಲಿ ದೌರ್ಜನ್ಯ ಅನೈತಿಕ ಚಟುವಟಿಕೆಗಳು ಕಂಡುಬಂದಲ್ಲಿ ಅದನ್ನು ತಡೆಗಟ್ಟುವಲ್ಲಿ ಪ್ರತಿಯೊಬ್ಬರು ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.

ಕಂದಾಯ ಪರಿವೀಕ್ಷಕರಾದ ರವಿಕುಮಾರ್ ರವರು ಮಾತನಾಡಿ ಚುನಾವಣಾ ಆಯೋಗದ ನಿರ್ದೇಶನದಂತೆ ಎಸ್ ಐ ಆರ್ ಮ್ಯಾಪಿಂಗ್ ಕಾರ್ಯವನ್ನು ವ್ಯಾಪ್ತಿಯ ಎಲ್ಲಾ ಮತಗಟ್ಟೆ ಅಧಿಕಾರಿಗಳು ಮಾಡುತ್ತಿದ್ದಾರೆ. ಪ್ರತಿಯೊಬ್ಬ ಮತದಾರರು ಎಸ್ ಐ ಆರ್ ಮ್ಯಾಪಿಂಗ್ ಕಡ್ಡಾಯವಾಗಿ ಮಾಡಿಸಿಕೊಳ್ಳುವಂತೆ ಮಾಹಿತಿ ನೀಡಿದರು.

ಸಭೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಮಾಚೆಟ್ಟಿರ ಕುಸು ಕುಶಾಲಪ್ಪ,ಬಿ. ಎಂ.ಪ್ರತೀಪ್, ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ, ನಾಪೋಕ್ಲು ಠಾಣೆಯ ಸಹಾಯಕ ಠಾಣಾಧಿಕಾರಿ ಮೋಹನ್, ಸಿಬ್ಬಂದಿ ಜೋಸೆಫ್,ಸ್ವಸಹಾಯ ಸಂಘದ ಅಧ್ಯಕ್ಷೆ ಟಿ. ವಿ.ಭವಾನಿ, ಆರೋಗ್ಯ ಇಲಾಖೆಯ ಸಿಬ್ಬಂದಿಗಳು,ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು,ವಿವಿಧ ಶಾಲೆಯ ಶಿಕ್ಷಕರುಗಳು, ಪಂಚಾಯಿತಿ ಸಿಬ್ಬಂದಿಗಳು ಹಾಜರಿದ್ದರು. ಕಾರ್ಯಕ್ರಮವನ್ನು ಸಮಿತಿ ಸಂಚಾಲಕರಾದ ಆಶಲತಾ ನಿರೂಪಿಸಿದರು. ಪಂಚಾಯತ್ ಅಬಿವೃದ್ಧಿ ಅಧಿಕಾರಿ ಚೋಂದಕ್ಕಿ ಸ್ವಾಗತಿಸಿ, ವಂದಿಸಿದರು.

Exit mobile version