ಗಣಿತ ಪ್ರತಿಭಾ ಪರೀಕ್ಷೆ :
ಚೇರಂಬಾಣೆ ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳ ಸಾಧನೆ

ಪುಟಾಣಿ ವಿಜ್ಞಾನ ಬಳಗದ ವತಿಯಿಂದ ಅಂತಾರಾಷ್ಟ್ರೀಯ ಗಣಿತ ಪ್ರತಿಭಾ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಪರೀಕ್ಷೆಯಲ್ಲಿ ಶ್ರೀ ರಾಜರಾಜೇಶ್ವರಿ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದಿಂದ ಒಟ್ಟು 40 ವಿದ್ಯಾರ್ಥಿಗಳು ಹಾಜರಾಗಿ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿತ್ತಾರೆ. ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಡಿಂಪನ ಬಿ.ಜೆ ಹಾಗೂ 7ನೇ ತರಗತಿ ವಿದ್ಯಾರ್ಥಿ ದುಶ್ಯಂತ್ ಎಂ.ಎಸ್ ರಾಜ್ಯಮಟ್ಟದಲ್ಲಿ ಐದನೇ ಸ್ಥಾನ, ಹಾಗೂ 6ನೇ ತರಗತಿ ವಿದ್ಯಾರ್ಥಿ ವರ್ಧನ್ ತಾಲೂಕುಮಟ್ಟದಲ್ಲಿ ಐದನೇ ಸ್ಥಾನ ಪಡೆದು ಸಾಧನೆ ಮಾಡಿರುತ್ತಾರೆ. ಶಾಲೆಯ ಗಣಿತ ಶಿಕ್ಷಕರಾಗಿರುವ ಶ್ರೀ ಅನಿಲ್ ಯು ಎಂ, ಶ್ರೀಮತಿ ಬೃಂದಾಕವನ್ ಕುದುಪಜೆ ಹಾಗೂ ಶ್ರೀಮತಿ ರಾಜೇಶ್ವರಿ ಡಿ.ಎಂ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿರುತ್ತಾರೆ. ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಕವನ್ ಕುದುಪಜೆ ಹಾಗೂ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಸ್ವರೂಪ್ ಕೆ ಬಿ ಹಾಜರಿದ್ದು ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿ ಅಭಿನಂದಿಸಿದರು.

