ಮೂರ್ನಾಡುವಿನಲ್ಲಿ ಅಕ್ರಮ ಗಾಂಜಾ ಮಾರಾಟ ಮತ್ತು ಸೇವನೆ

ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣ ವ್ಯಾಪ್ತಿಯ ಕಾಂತೂರು-ಮೂರ್ನಾಡು ಗ್ರಾಮದಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಸರಬರಾಜು ಮಾಡುತ್ತಿರುವ ವ್ಯಕ್ತಿಗಳನ್ನು ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ.
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ನಮ್ಮ ಕಚೇರಿ ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು ನಿಷೇಧಿತ ಮಾದಕ ವಸ್ತುಗಳ ಮಾರಾಟ ಸರಬರಾಜು ಬಳಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ದಿನಾಂಕ 4-01-2026 ರಂದು ಕಾಂತೂರು-ಮೂರ್ನಾಡು ಗ್ರಾಮದ ನಿವಾಸಿ ಸಂದೇಶ್ ರವರ ತೋಟದ ಲೈನ್ ಮನೆಯಲ್ಲಿ ನಿಷೇಧಿತ ಮಾದಕ ವಸ್ತು ಮಾರಾಟ ಮಾಡುವ ಕುರಿತು ಖಚಿತ ಮಾಹಿತಿ ಹಿನ್ನೆಲೆ ದಾಳಿ ನಡೆಸಿ ಅಸ್ಸಾಂ ರಾಜ್ಯದ ದಾರಂ ಜಿಲ್ಲೆಯ ಮೂಲದ ಕಾಂತೂರು-ಮೂರ್ನಾಡು ಗ್ರಾಮದ ನಿವಾಸಿ ಸಂದೇಶ ರವರ ತೋಟದ ಲೈನ್ ಮನೆಯಲ್ಲಿ ಮೂರು ಜನರನ್ನು ನಿಷೇಧಿತ ಮಾದಕ ವಸ್ತುವಿನೊಂದಿಗೆ ದಸ್ತಗಿರಿ ಮಾಡಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ.
ಕೊಡಗು ನ್ಯೂಸ್

