ಕೋಯಿನಾಡು ವಿವಿಧ ಅಂಗನವಾಡಿ ಕೇಂದ್ರಗಳಲ್ಲಿಯಶಸ್ವಿಯಾಗಿ ನಡೆದ ಅನೀಮಿಯ ಅರಿವು ಕಾರ್ಯಾಗಾರ ಮತ್ತು ಮಕ್ಕಳ ಆರೋಗ್ಯ ತಪಾಸಣಾ ಶಿಬಿರ

ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಡಿಕೇರಿ ತಾಲೂಕಿನ ಕೋಯಿನಾಡು ವ್ಯಾಪ್ತಿಯ ಚಡಾವು,ಕೋಯಿನಾಡು ಒಂದು ಮತ್ತು ಎರಡನೇ ಅಂಗನವಾಡಿ ಕೇಂದ್ರಗಳಲ್ಲಿ ಅನೀಮಿಯ ಅರಿವು ಕಾರ್ಯಗಾರ ಮತ್ತು ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮದಲ್ಲಿ ಮಡಿಕೇರಿ ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೀಲಾ ಅಶೋಕ್ ರವರು ಮಾತನಾಡಿ ಮಕ್ಕಳಲ್ಲಿನ ಅಪೌಷ್ಟಿಕತೆ,ಅಶುಚಿತ್ವ, ರಕ್ತಹೀನತೆಯನ್ನು ತಡೆಗಟ್ಟುವ ಸಲುವಾಗಿ ಅನೀಮಿಯ ತಪಾಸಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪ್ರಾರಂಭಿಸಿರುವ ಈ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪೋಷಕರು ತಮ್ಮ ಐದು ವರ್ಷದೊಳಗಿನ ಮಕ್ಕಳನ್ನು ಕರೆತಂದು ಆರೋಗ್ಯ ತಪಾಸಣೆ ನಡೆಸುವ ಮೂಲಕ ಮಕ್ಕಳ ಬೆಳವಣಿಗೆಗೆ ಸಹಕರಿಸಿ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.
ಶಿಬಿರದಲ್ಲಿ ಆರ್ ಬಿಎಸ್ ಕೆ ತಂಡದ ವೇದ್ಯಾಧಿಕಾರಿ ಡಾ.ಪೂಜಾ ಹಾಗೂ ಸಿಬ್ಬಂದಿಗಳು ಮಕ್ಕಳ ಆರೋಗ್ಯ ತಪಾಸಣೆ ನಡೆಸಿದರು.
ಈ ಸಂದರ್ಭ ಅಂಗನವಾಡಿ ಕಾರ್ಯಕರ್ತೆಯರಾದ ಕುಸುಮ, ಸತ್ಯವತಿ, ಕುಸುಮಾವತಿ,ಆಶಾ ಕಾರ್ಯಕರ್ತೆಯರು,ಅರೋಗ್ಯ ಇಲಾಖೆ ಸಿಬ್ಬಂದಿಗಳು,ಅಂಗನವಾಡಿ ಸಹಾಯಕಿಯರು, ಪೋಷಕರು ಹಾಗೂ ಮಕ್ಕಳು ಹಾಜರಿದ್ದರು.

