ನಾಪೋಕ್ಲುವಿನ ಸೇಕ್ರೆಡ್ ಹಾರ್ಟ್ಸ್ ಶಾಲೆಯ ಶಿಕ್ಷಕಿ ಅಜ್ಜೇಟಿರ ಯಮುನಾ ಗಣಪತಿ ಅವರಿಗೆ ಬೀಳ್ಕೊಡುಗೆ

ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು :ನಾಪೋಕ್ಲುವಿನ ಸೇಕ್ರೆಡ್ ಹಾರ್ಟ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸುದೀರ್ಘ 23 ವರ್ಷಗಳ ಕಾಲ ಸೇವೆ ಸಲ್ಲಿಸಿ ಸ್ವಯಂ ನಿವೃತ್ತರಾದ ಶಿಕ್ಷಕಿ ಅಜ್ಜೇಟಿರ ಯಮುನಾ ಗಣಪತಿ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.
ಶಾಲೆಯಲ್ಲಿ ಆಯೋಜಿಸಲಾದ ಸರಳ ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದವರಿಂದ ಶಿಕ್ಷಕಿ ಯಮುನಾ ಅವರಿಗೆ ಶಾಲು ಹೊದಿಸಿ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಡಲಾಯಿತು.
ಈ ಸಂದರ್ಭ ಶಾಲೆಯ ಆಡಳಿತ ಮಂಡಳಿ ಪದಾಧಿಕಾರಿಗಳು, ಶಿಕ್ಷಕ ವೃಂದದವರು,ವಿದ್ಯಾರ್ಥಿಗಳು ಹಾಜರಿದ್ದರು.
ಕೊಡಗು ನ್ಯೂಸ್

