Close Menu
Kodagu News
    ಹೊಸ ಸುದ್ದಿ

    ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ

    October 21, 2026

    ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ

    October 18, 2026

    ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ

    October 18, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ
    • ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ
    • ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ
    • ಕುಶಾಲನಗರದಲ್ಲಿ 84ನೇ ಇಎಂಇ ಕಾರ್ಪ್ಸ್ ಡೇ ಸಂಭ್ರಮ
    • ಭಾಗಮಂಡಲ, ತಲಕಾವೇರಿ ದೇವಾಲಯಗಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾನಂಡ ಪ್ರಥ್ಯು ಆಯ್ಕೆ
    • ₹48 ಲಕ್ಷದ ರಸ್ತೆ ನಿರ್ಮಾಣ, ಮಳೆ ನೀರಿಗೆ ಮಾತ್ರ ದಾರಿಯಿಲ್ಲ!
    • ತುಲಾ ಸಂಕ್ರಮಣ, ವಿಜಯದಶಮಿಗೆ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಕ್ಕೆ ಸಾರ್ವಜನಿಕರ ಮನವಿ
    • ತುಲಾ ಸಂಕ್ರಮಣ, ವಿಜಯದಶಮಿಗೆ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಕ್ಕೆ ಸಾರ್ವಜನಿಕರ ಮನವಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಬಾಲಕರ ಬಾಲ ಮಂದಿರಕ್ಕೆ ಜಿಲ್ಲಾಧಿಕಾರಿ ಎಸ್ ಜೆ ಸೋಮಶೇಖರ್ ದಿಢೀರ್ ಭೇಟಿ
    ಜಿಲ್ಲೆ

    ಬಾಲಕರ ಬಾಲ ಮಂದಿರಕ್ಕೆ ಜಿಲ್ಲಾಧಿಕಾರಿ ಎಸ್ ಜೆ ಸೋಮಶೇಖರ್ ದಿಢೀರ್ ಭೇಟಿ


    ಬಾಲಕರ ಬಾಲಮಂದಿರಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ದಿಢೀರ್ ಭೇಟಿ

     

    ನಗರದ ಬಾಲಕರ ಬಾಲಮಂದಿರಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಬುಧವಾರ ಬೆಳಗ್ಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

    ಬಾಲಕರ ಬಾಲಮಂದಿರದಲ್ಲಿರುವ ಮಕ್ಕಳಿಂದ ವಿದ್ಯಾಭ್ಯಾಸ, ಊಟೋಪಚಾರ, ಬಿಸಿನೀರು ವ್ಯವಸ್ಥೆ, ಗ್ರಂಥಾಲಯ ಸೌಲಭ್ಯ ಮತ್ತಿತರ ಬಗ್ಗೆ ಮಾಹಿತಿ ಪಡೆದರು.

    ಕುಂದುಕೊರತೆಗಳಿದ್ದಲ್ಲಿ ಜಿಲ್ಲಾಡಳಿತದ ಗಮನಕ್ಕೆ ತರುವಂತೆ ಸಲಹೆ ಮಾಡಿದರು. ಮೆನು ಪ್ರಕಾರ ಗುಣಮಟ್ಟದ ಆಹಾರ ಪೂರೈಸಬೇಕು. ಸ್ವಚ್ಛತೆಗೆ ಒತ್ತು ನೀಡಬೇಕು. ಪ್ರತೀ ತಿಂಗಳು ಮಕ್ಕಳಿಗೆ ಆರೋಗ್ಯ ತಪಾಸಣೆ ನಡೆಸಬೇಕು. ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಉತ್ತೇಜಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

    ವಿದ್ಯಾರ್ಥಿಗಳು ಪ್ರತೀ ನಿತ್ಯ ದಿನಪತ್ರಿಕೆಯನ್ನು ಓದಬೇಕು. ಗ್ರಂಥಾಲಯ ಸೌಲಭ್ಯವನ್ನು ಪಡೆದು ಒಳ್ಳೆಯ ಪುಸ್ತಕಗಳನ್ನು ಅಧ್ಯಯನ ಮಾಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ವಿದ್ಯಾರ್ಥಿಗಳಿಗೆ ಪಾಠ ಮಾಡಿದರು.

    ಪಾಠದ ಜೊತೆಗೆ ಆಟ ಇರಬೇಕು. ಹೆಚ್ಚು ಅಧ್ಯಯನ ಮಾಡುವುದರಿಂದ ಉನ್ನತ ವ್ಯಾಸಂಗ ಪಡೆಯಲು ಸಾಧ್ಯ. ಆ ನಿಟ್ಟಿನಲ್ಲಿ ಪ್ರಯತ್ನ ಇರಬೇಕು ಎಂದು ಜಿಲ್ಲಾಧಿಕಾರಿ ಅವರು ನುಡಿದರು.

    ವಿದ್ಯಾರ್ಥಿಗಳು ಲಭ್ಯವಿರುವ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಂಡು ವೃತ್ತಿಪರ ಶಿಕ್ಷಣ ಮಾಡುವತ್ತ ಗಮನಹರಿಸಬೇಕು. ಯಾವುದೇ ಕಾರಣಕ್ಕೂ ಕೊರಗಬಾರದು. ಛಲ ಮತ್ತು ಆತ್ಮವಿಶ್ವಾಸ ಇದ್ದಲ್ಲಿ ಯಶಸ್ಸುಗಳಿಸಲು ಸಾಧ್ಯ. ಆ ನಿಟ್ಟಿನಲ್ಲಿ ಸತತ ಪ್ರಯತ್ನ ಅಗತ್ಯ ಎಂದು ಹೇಳಿದರು.

    ಇಂದಿನ ಆಧುನಿಕ ಯುಗದಲ್ಲಿ ಬುದ್ದಿವಂತಿಕೆಗೆ ಆದ್ಯತೆ ಇದೆ. ಆ ನಿಟ್ಟಿನಲ್ಲಿ ಹೆಚ್ಚಿನ ಅಧ್ಯಯನ ಅಗತ್ಯ ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು.

    ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಗಿರಿಜನ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳು ಮತ್ತು ಮೊರಾರ್ಜಿ ದೇಸಾಯಿ, ಏಕಲವ್ಯ ವಸತಿ ಶಾಲೆಗಳ ವ್ಯಾಪ್ತಿಯಲ್ಲಿ ಮೆನು ಪ್ರಕಾರ ಗುಣಮಟ್ಟದ ಆಹಾರ ನೀಡಬೇಕು. ವಿದ್ಯಾರ್ಥಿ ನಿಲಯಗಳಲ್ಲಿ ದಿನಪತ್ರಿಕೆಯನ್ನು ಕಡ್ಡಾಯವಾಗಿ ತರಿಸಬೇಕು. ವಿದ್ಯಾರ್ಥಿಗಳು ದಿನಪತ್ರಿಕೆಯನ್ನು ಓದಲು ಉತ್ತೇಜಿಸಬೇಕು. ಗ್ರಂಥಾಲಯ ಬಳಕೆಗೆ ಅವಕಾಶ ಮಾಡಬೇಕು ಎಂದು ಇದೇ ಸಂದರ್ಭದಲ್ಲಿ ಹೇಳಿದರು.

    ಈ ಸಂದರ್ಭದಲ್ಲಿ ಮಕ್ಕಳ ರಕ್ಷಣಾಧಿಕಾರಿ ಎಸ್.ಹೊನ್ನೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್, ಮಕ್ಕಳ ರಕ್ಷಣಾಧಿಕಾರಿಗಳಾದ ಸಚಿನ್ ಸುವರ್ಣ, ಇರ್ಷಾದ್, ಸಂಸ್ಥೆಯ ಮೇಲ್ವಿಚಾರಕರಾದ ಸತ್ಯಭಾಮ, ಪವಿತ್ರ, ಇತರರು ಇದ್ದರು.

    Previous Articleಅಂಗವಿಕಲ ಕುಟುಂಬಗಳಿಗೆ ನೀರಿನ ಟ್ಯಾಂಕ್ ವಿತರಣೆ
    Next Article ಸಂಚಾರ ನಿಯಮ ಪಾಲಿಸಿ ಅಪಘಾತ ತಪ್ಪಿಸಿ:- ದಿನೇಶ್ ಕುಮಾರ್

    Related Posts

    ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ

    October 21, 2026

    ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ

    October 18, 2026

    ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ

    October 18, 2026
    Demo
    Demo
    ಪ್ರಮುಖ ಸುದ್ದಿ

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ

    October 21, 2026

    ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ

    October 18, 2026

    ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ

    October 18, 2026
    Big News

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.