Close Menu
Kodagu News
    ಹೊಸ ಸುದ್ದಿ

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
    • ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
    • ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
    • ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
    • ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    • ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    • ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಅನುಗ್ರಹ ಜನಸೇವಾ ಚಾರಿಟೇಬಲ್ ಟ್ರಸ್ಟ್ ನಿಂದ ಮನೆ ನಿರ್ಮಾಣದ ಶಂಕುಸ್ಥಾಪನೆ
    ಜಿಲ್ಲೆ

    ಅನುಗ್ರಹ ಜನಸೇವಾ ಚಾರಿಟೇಬಲ್ ಟ್ರಸ್ಟ್ ನಿಂದ ಮನೆ ನಿರ್ಮಾಣದ ಶಂಕುಸ್ಥಾಪನೆ

    ಎಮ್ಮೆಮಾಡುವಿನ ಬಡ ಕುಟುಂಬಕ್ಕೆ ಜಿಲ್ಲೆಯ ಅನುಗ್ರಹ ಜನಸೇವಾ ಚಾರಿಟೇಬಲ್ ಟ್ರಸ್ಟ್ ನಿಂದ ಮನೆ ನಿರ್ಮಾಣದ ಶಂಕು ಸ್ಥಾಪನೆ- ಟ್ರಸ್ಟ್ ನ ಮಾನವೀಯ ಕಾರ್ಯಕ್ಕೆ ಜನರಿಂದ ಮೆಚ್ಚುಗೆ

    ವರದಿ:ಝಕರಿಯ ನಾಪೋಕ್ಲು

    ನಾಪೋಕ್ಲು :ಸೂರಿಲ್ಲದೆ ಕೂಲಿ ಕೆಲಸ ಮಾಡಿ ಜೀವನ ಸಾಗಿಸುವ ಬಡ ಕುಟುಂಬವೊಂದಕ್ಕೆ ಶಾಶ್ವತ ಸೂರಿನ ಭಾಗ್ಯ ಕಲ್ಪಿಸಲು ಮುಂದಾಗಿರುವ ಜಿಲ್ಲೆಯ ಅನುಗ್ರಹ ಜನಸೇವಾ ಚಾರಿಟೇಬಲ್ ಟ್ರಸ್ಟ್ ನ ಸೇವಾ ಕಾರ್ಯಕ್ಕೆ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ.

    ನಾಪೋಕ್ಲು ಬಳಿಯ ಎಮ್ಮೆಮಾಡು ಪಡಿಯಾಣಿ ಗ್ರಾಮದ ಹಾರಿಸ್ ಎಂಬ ವ್ಯಕ್ತಿಯ ಕುಟುಂಬದ ಸಂಕಷ್ಟದ ಪರಿಸ್ಥಿತಿಯನ್ನು ಅರಿತು ಜಿಲ್ಲೆಯಲ್ಲಿ ಹಲವಾರು ಬಡ ಹಾಗೂ ನಿರ್ಗತಿಕರಿಗೆ ನೆರವಾಗುತ್ತಿರುವ ಅನುಗ್ರಹ ಜನಸೇವಾ ಚಾರಿಟೇಬಲ್ ಟ್ರಸ್ಟ್ ಪದಾಧಿಕಾರಿಗಳು ಕುಟುಂಬಕ್ಕೆ ಶಾಶ್ವತ ಸೂರು ಕಲ್ಪಿಸಲು ಮುಂದಾಗಿದ್ದಾರೆ. ಗುರುವಾರ ಮನೆ ನಿರ್ಮಾಣದ ಶಂಕುಸ್ಥಾಪನೆಗೆ ಕೊಡಗು ಜಿಲ್ಲಾ ನಾಇಬ್ ಖಾಝಿ ಹಾಗೂ ಸಮಸ್ತ ಮುಶಾವರ ಸದಸ್ಯರಾದ ಅಬ್ದುಲ್ಲ ಫೈಝಿ ಹಾಗೂ ಎಸ್ ವೈಎಸ್ ರಾಜ್ಯ ಉಪಾಧ್ಯಕ್ಷರಾದ ಸಯ್ಯಿದ್ ಇಲ್ಯಾಸ್ ಅಲ್ ಐದರೂಸಿ ತಂಙಳ್ ರವವರುಮನೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

    ಎಮ್ಮೆಮಾಡು ಜಮಾಅತ್ ಮಾಜಿ ಕಾರ್ಯದರ್ಶಿ ಬಿ.ಯು.ಅಶ್ರಫ್ ಮಾತನಾಡಿ ಗ್ರಾಮದಲ್ಲಿದ್ದ ಬಡ ಕುಟುಂಬವೊಂದಕ್ಕೆ ಅನುಗ್ರಹ ಜನಸೇವಾ ಚಾರಿಟೇಬಲ್ ಟ್ರಸ್ಟ್ ಸಂಘಟನೆ ಮನೆ ನಿರ್ಮಿಸಿ ಕೊಡುವ ಮೂಲಕ ಮಾನವೀಯತೆ ತೋರಿರುವುದು ಶ್ಲಾಘನೀಯ. ಸಮಾಜ ಸೇವಾ ಸಂಘಟನೆಗಳು ಸಂಕಷ್ಟದಲ್ಲಿರುವವರಿಗೆ ನೆರವಾದಲ್ಲಿ ಜಿಲ್ಲೆಯ ನಾನಾ ಭಾಗಗಳಲ್ಲಿರುವ ಬಡ ಕುಟುಂಬಗಳಿಗೆ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗಲಿದೆ.ಸೇವಾ ಮನೋಭಾವದಿಂದ ಪ್ರತಿಯೊಬ್ಬರು ಸ್ಪಂದಿಸಿದ್ದಲ್ಲಿ ಅಭಿವೃದ್ಧಿಯೊಂದಿಗೆ ಮುನ್ನಡೆಯಲು ಸಾಧ್ಯವಾಗಲಿದೆ ಎಂದರು.

    ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಹೊದ್ದೂರು ಪಂಚಾಯತ್ ಅಧ್ಯಕ್ಷರಾದ ಎಚ್. ಎ.ಹಂಸ ಕೊಟ್ಟಮುಡಿ ಮಾತನಾಡಿ ಹಲವು ವರ್ಷಗಳಿಂದ ಅನುಗ್ರಹ ಚಾರಿಟೇಬಲ್ ಟ್ರಸ್ಟ್ ಸಂಘಟನೆ ಸಮಾಜ ಸೇವೆಯಲ್ಲಿ ನಿರಂತರ ತೊಡಗಿಸಿಕೊಂಡಿದ್ದು ಅನಾರೋಗ್ಯಕ್ಕೆ ಒಳಗಾದವರು ಹಾಗೂ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ತುರ್ತು ಸಂದರ್ಭದಲ್ಲಿ ನೆರವಾಗುವ ಮೂಲಕ ಸೇವೆ ಮಾಡುತ್ತಿದ್ದು ನನ್ನ ಪಂಚಾಯತ್ ವ್ಯಾಪ್ತಿಯಲ್ಲೇ ಕಾಲೋನಿಯೊಂದಕ್ಕೆ ಬಾವಿ ನಿರ್ಮಿಸಿ ಕೊಟ್ಟು ಮಾನವೀಯತೆ ಮೆರೆದಿದ್ದಾರೆ.

    ಪಡಿಯಾಣಿ ಗ್ರಾಮದಲ್ಲಿರುವ ಬಡ ಕುಟುಂಬವೊಂದಕ್ಕೆ ಮನೆ ನಿರ್ಮಿಸಿಕೊಡಲು ದಾನಿಗಳ ಸಹಕಾರದಿಂದ ಮುಂದಾಗಿರುವುದು ಶ್ಲಾಘನೀಯ ಎಂದರು.

    ಕೊಡಗಿನ ಬಡವರ ಬೆಳಕು ಚಾರಿಟಿಯ ಅಧ್ಯಕ್ಷ ಎಂ.ಎಚ್. ಮೊಹಮ್ಮದ್ ಕುಶಾಲನಗರ ಹಾಗೂ ಸುಗ್ರಿ ಸುಬ್ರಮಣಿ, ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಮನ್ಸೂರ್ ಅಲಿ ಮಾತನಾಡಿ ಬಡವರಿಗೆ ನೇರವಾಗುವ ಟ್ರಸ್ಟ್ ನ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು.

    ಈ ಸಂದರ್ಭ ಅನುಗ್ರಹ ಜನಸೇವಾ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಫತಾಯಿ ಕಡಂಗ,ಉಪಾಧ್ಯಕ್ಷ ಉಮ್ಮರ್ ಎಡಪಾಲ,ಎಸ್ ವೈ ಎಸ್ ಜಿಲ್ಲಾಧ್ಯಕ್ಷ ಮುನೀರ್ ಮಲ್ಳರಿ,ಮೊಯ್ದು ಕುಟ್ಟಿ ಮುಸ್ಲಿಯಾರ್,ವಕ್ಫ್ ಬೋರ್ಡ್ ಸದಸ್ಯ ಹಂಝ,ಕರವಂಡ ಸುರೇಶ್,ಮೊಯಿದಿನ್ ಕಂಬಿಬಾಣೆ,ಮುಸ ಹಾಜಿ ಮಾಪಿಲತೊಡ್,ಪಡಿಯಾಣಿ ಖತೀಬ್ ಹಂಝ ರಹ್ಮನಿ,ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ರಜಾಕ್ ಸಿ.ಎ.ಚೆಯ್ಯಂಡಾಣೆ,ಕೋಶಾಧಿಕಾರಿ ಅಶ್ರಫ್,ಸೈಪುದ್ದೀನ್ ಚಾಮಿಯಾಲ,ಹಾರಿಸ್ ಕೊಂಡಂಗೇರಿ,ಸಯ್ಯಿದ್ ಅಭಿದ್ ತಂಙಳ್,ಸೈಫುದ್ದಿನ್ ತಂಙಳ್,ಗ್ರಾಮದ ಪ್ರಮುಖರು,

    ಸೇರಿದಂತೆ ಮತ್ತಿತರರು ಹಾಜರಿದ್ದರು.

    ಸಯ್ಯಿದ್ ಇಲ್ಯಾಸ್ ಅಲ್ ಐದರೂಸಿ ತಂಙಳ್ ಪ್ರಾರ್ಥಿಸಿ,ಟ್ರಸ್ಟ್ ಕೋಶಾಧಿಕಾರಿ ಅಶ್ರಫ್ ಸ್ವಾಗತಿಸಿ ವಂದಿಸಿದರು.

    ಕೊಡಗು ನ್ಯೂಸ್

    Previous Articleನಾಪೋಕ್ಲುವಿನಲ್ಲಿ ಯಶಸ್ವಿಯಾಗಿ ನಡೆದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪ್ರೇರಣಾ ಮತ್ತು ವೃತ್ತಿ ಮಾರ್ಗದರ್ಶನ ಶಿಬಿರ
    Next Article ಹರದೂರು ಹೊಳೆಯಲ್ಲಿ ಮುಳುಗಿ ಇಬ್ಬರು ಬಾಲಕರು ಮೃತ್ಯು

    Related Posts

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.