ಮಡಿಕೇರಿ :-ಚಂದನ್ ನಂದರಬೆಟ್ಟು ಅವರಿಗೆ ಕಾಸರಗೋಡು ಕನ್ನಡ ಭವನದ ಪ್ರತಿಷ್ಠಿತ ನಾಡೋಜ ಡಾ. ಕಯ್ಯಾರ ರಾಷ್ಟ್ರೀಯ ಪ್ರಶಸ್ತಿ
ಪತ್ರಕರ್ತ, ಸಮಾಜಸೇವಕ ಚಂದನ್ ನಂದರಬೆಟ್ಟು ಅವರಿಗೆ ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮ ವೇದಿಕೆಯಲ್ಲಿ ನಾಡೋಜ ಡಾ. ಕಯ್ಯಾರ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಮಡಿಕೇರಿ ತಾಲ್ಲೂಕಿನ ಗಾಳಿಬೀಡು ಗ್ರಾಮದವರಾದ ನಿವೃತ್ತ ಪೊಲೀಸ್ ಎ ಎಸ್ ಐ, ಕೃಷ್ಣ ಎನ್ ಎಂ ಹಾಗು ಜಯಲಕ್ಷ್ಮಿ ಎನ್ ಕೆ ಅವರ ಪುತ್ರರಾಗಿರುವ ಚಂದನ್ ನಂದರಬೆಟ್ಟು ಸಾಹಿತ್ಯ ಹಾಗು ಸಮಾಜಸೇವೆ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗೆ ಈ ಗೌರವ ಲಭಿಸಿದೆ.



