ಎಮ್ಮೆಮಾಡು ಭಾಗದಲ್ಲಿ ಶಾಸಕ ಪೊನ್ನಣ್ಣನವರಿಂದ ಅಭಿವೃದ್ಧಿ ಕಾರ್ಯಗಳಿಗೆ ಭೂಮಿಪೂಜೆ

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕು ನಾಪೋಕ್ಲು ಹೋಬಳಿಯ ಎಮ್ಮೆಮಾಡು ಗ್ರಾಮಕ್ಕೆ ಇಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭೇಟಿ ನೀಡಿದರು.

ಎಮ್ಮೆಮಾಡು ಭಾಗದಲ್ಲಿ ಶಾಸಕರ ರೂ 35ಲಕ್ಷ ವೆಚ್ಚದ ಅನುದಾನದಲ್ಲಿ ಪ್ರಾರಂಭವಾಗಲಿರುವ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ನೆರವೇರಿಸಿದ ಬಳಿಕ, ಈಗಾಗಲೇ ಈ ಭಾಗದಲ್ಲಿ ಪೂರ್ಣಗೊಂಡಿರುವ ಕಾಮಗಾರಿಗಳ ಲೋಕಾರ್ಪಣೆ ಕಾರ್ಯಕ್ರಮವನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಡಿಸಿಸಿ ಉಪಾಧ್ಯಕ್ಷರು ಅಬ್ದುಲ್ ರೆಹಮಾನ್, ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ವಲಯ ಅಧ್ಯಕ್ಷರು ಮೂಸಾ, ಮಾಜಿ ವಲಯ ಅಧ್ಯಕ್ಷರು ಹಂಸ, ಉಪಾಧ್ಯಕ್ಷರು ಅಯ್ಸಮ, ಸದಸ್ಯರು ಟಿ ಕೆ ಉಸಫ್, ಮಾಹಿನೇ, ಬೂತ್ ಅಧ್ಯಕ್ಷರು ಹನೀಫ್, ಅಶ್ರಫ್, ಅದ್ರಮ್, ದಯಾ ಚಿನ್ನಪ್ಪ, ಮಾಚೇಟೀರ ಕುಶಾಲಪ್ಪ, ಸಿರಾಜ್ ಪರವಂಡ, ವಾಸಿಮ್, ಬಲ್ಲಮಾವಟಿ ಬೂತ್ ಅಧ್ಯಕ್ಷರು ಮಿಥುನ್, ಕುಂಡಚ್ಚಿರ ಮಂಜು ದೇವಯ್ಯ, ಅಯೂಬ್, ಸಂತೋಷ್, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

 

ಕೊಡಗು ನ್ಯೂಸ್

Exit mobile version