Close Menu
Kodagu News
    ಹೊಸ ಸುದ್ದಿ

    ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ

    August 24, 2026

    ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

    August 24, 2026

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    • ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
    • ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ
    • ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
    • ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ
    • ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ
    • ಗೌಡ ಸಮಾಜಗಳ ಪ್ರಮುಖರಿಂದ ಶಾಸಕ ಪೊನ್ನಣ್ಣರಿಗೆ ಅಭಿನಂದನೆ
    • ಲಾರಿ ಡಿಕ್ಕಿ: ಟ್ಯಾಕ್ಸಿ ಚಾಲಕ ಸಾಹಿಲ್ ಸಾವು
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಆರೋಗ್ಯ»ಎಸ್. ಎಸ್.ಎಲ್.ಸಿ ಪರೀಕ್ಷೆಗೆ ಹೊಸ ಗೈಡ್ಲೈನ್ಸ್ ಪ್ರಕಟ
    ಆರೋಗ್ಯ

    ಎಸ್. ಎಸ್.ಎಲ್.ಸಿ ಪರೀಕ್ಷೆಗೆ ಹೊಸ ಗೈಡ್ಲೈನ್ಸ್ ಪ್ರಕಟ

    SSLC ಪರೀಕ್ಷೆಗೆ ಹೊಸ ಗೈಡ್​ಲೈನ್ಸ್ ಪ್ರಕಟ

    ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಖಡಕ್ ಸೂಚನೆ

    ಎಸ್​​ಎಸ್​​ಎಲ್​​ಸಿ ಪೂರ್ವ ಸಿದ್ಧತೆ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಮ್ಮ ಶಾಲೆಗಳ ಫಲಿತಾಂಶ ಹೆಚ್ಚಳಕ್ಕೆ ಕೆಲ ಶಾಲಾ ಮುಖ್ಯಶಿಕ್ಷಕರು ಪ್ರಯತ್ನಿಸಿದ್ದರು. ಇದಕ್ಕಾಗಿ ಪೂರಕವಾಗಿ ವಿದ್ಯಾರ್ಥಿಗಳನ್ನು ತಯಾರಿಗೊಳಿಸುತ್ತಿದ್ದ ಶಾಲೆಗಳು, ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ತಾವಾಗಿಯೇ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಿದ್ದರು ಎಂದು ತಿಳಿದು ಬಂದಿದೆ. ಈ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಶಿಕ್ಷಣ ಇಲಾಖೆ ಅಲರ್ಟ್​ ಆಗಿದ್ದು, ಪರೀಕ್ಷೆಯ ಹೊಸ ಗೈಡ್​ಲೈನ್ಸ್ ಬಿಡುಗಡೆ ಮಾಡಿದೆ.

     

    ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿರುವ ಬೆನ್ನಲ್ಲೇ ರಾಜ್ಯ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದ್ದು, ಮುಖ್ಯ ಪರೀಕ್ಷೆಗೆ ಹೊಸ ಗೈಡ್​ಲೈನ್ಸ್ ಬಿಡುಗಡೆ ಮಾಡಿದೆ. ಎಸ್ಎಸ್ಎಲ್​ಸಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಗೆ ಮೊಬೈಲ್ ನಿರ್ಬಂಧಿಸಲಾಗಿದೆ. ಇದೀಗ ಶಿಕ್ಷಕರು ಸಹ ಪರೀಕ್ಷೆ ವೇಳೆ ಮೊಬೈಲ್ ಬಳಸುವಂತಿಲ್ಲ ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಅಲ್ಲದೇ 2 ಹಾಗೂ 3ನೇ ಪರೀಕ್ಷೆ ಆಯುಕ್ತರ ನೇತೃತ್ವದಲ್ಲಿ ನಡೆಯಲಿವೆ.

     

    *ಹೊಸ ಮಾರ್ಗಸೂಚಿಯಲ್ಲಿ ಏನೇನಿದೆ?*

    ಈ ಹಿಂದಿನ ಪರೀಕ್ಷೆಗಳನ್ನು ಕರ್ನಾಟಕ ಪರೀಕ್ಷಾ ಮಂಡಳಿ ಮೌಲ್ಯ ನಿರ್ಣಯ ಮಂಡಳಿ ನೇತೃತ್ವದಲ್ಲಿ ನಡೆಸಲಾಗಿತ್ತು. ಆದ್ರೆ, ಇದೀಗ ಹೊಸ ಗೈಡ್​​ಲೈನ್ಸ್​ ಪ್ರಕಾರ 2 ಹಾಗೂ 3ನೇ ಪರೀಕ್ಷೆ ಆಯುಕ್ತರ ನೇತೃತ್ವದಲ್ಲಿ ನಡೆಯಲಿದ್ದು, ಡಿಡಿಪಿಐ ಹಾಗೂ ಬಿಇಒಗಳಿಗೆ ಪರೀಕ್ಷೆಯ ಜವಾಬ್ದಾರಿ ನೀಡಲಾಗಿದೆ.

     

    ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಮೊಬೈಲ್​ ತರುವಂತಿಲ್ಲ. ಜೊತೆಗೆ ಶಿಕ್ಷಕರು ಸಹ ಪರೀಕ್ಷೆ ವೇಳೆ ಮೊಬೈಲ್ ಬಳಸುವಂತಿಲ್ಲ. ಇನ್ನು ಪ್ರಶ್ನೆಪತ್ರಿಕೆ ಸೋರಿಕೆ, ಅವ್ಯಹಾರ ನಡೆಸದಂತೆ ಖಡಕ್ ಸೂಚನೆ ನೀಡಲಾಗಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದವರ ವಿರುದ್ಧ ಆಯಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಬೇಕು. ಪ್ರಶ್ನೆಪತ್ರಿಕೆ ಮುಖ್ಯೋಪಾಧ್ಯಾಯರೇ ಡೌನ್​ಲೋಡ್ ಮಾಡಬೇಕು. ಜೊತೆಗೆ ಪ್ರಶ್ನೆಪತ್ರಿಕೆ ಗೌಪ್ಯತೆ ಕಾಪಾಡಬೇಕು ಹಾಗೇ ಪ್ರಾಂಶುಪಾಲರು ಸಹ ಪರೀಕ್ಷಾ ಕೇಂದ್ರಗಳಿಗೆ ಭೇಟಿ ಪರಿಶೀಲನೆ ಮಾಡಬೇಕು ಎಂದು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದ ಹೊಸ ಮಾರ್ಗಸೂಚಿಯಲ್ಲಿ ಖಡಕ್ ಆಗಿ ತಿಳಿಸಲಾಗಿದೆ.

     

    ಕಳೆದ ವಾರ ನಡೆದ ರಾಜ್ಯಮಟ್ಟದ ಪೂರ್ವಭಾವಿ ಪರೀಕ್ಷೆಯಲ್ಲಿ ಜನವರಿ 6ರಂದು ನಡೆದ ಗಣಿತ ಪರೀಕ್ಷೆ ಪ್ರಶ್ನೆಪತ್ರಿಕೆ ಲೀಕ್ ಮಾಡಲಾಗಿತ್ತು. ಶಿವಮೊಗ್ಗ ಹಾಗೂ ಕಲಬುರಗಿಯಲ್ಲಿ ಪ್ರಶ್ನೆಪತ್ರಿಕೆ ವೈರಲ್ ಮಾಡಲಾಗಿತ್ತು. ಪ್ರಶ್ನೆ ಪತ್ರಿಕೆ ಸೋರಿಕೆ ಕೃತ್ಯವನ್ನು ಹಲವು ಶಾಲೆಗಳು ಎಸಗಿವೆ. ಆದರೆ ಇದುವರೆಗೆ ಆರು ಶಿಕ್ಷಕರು ಮಾತ್ರ ಪತ್ತೆಯಾಗಿದ್ದಾರೆ. ಪರೀಕ್ಷೆಗೂ ಮೂರು ಗಂಟೆಗಳಿಗೂ ಮುನ್ನ ಪ್ರಶ್ನೆ ಪತ್ರಿಕೆಗಳ ಫೋಟೋ ಪ್ರತಿಯನ್ನು ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಿದ್ದರು.

    ಪ್ರಶ್ನೆ ಪತ್ರಿಕೆ ಮಾರಾಟಕ್ಕಾಗಿ ಇನ್‌ಸ್ಟಾಗ್ರಾಂನಲ್ಲಿ ‘ಡೆಲ್ಟಾ ಹ್ಯಾಕರ್‌ 32’ ಹಾಗೂ ‘ಡೆಲ್ಟಾ ಹ್ಯಾಕರ್‌’ ಸೇರಿದಂತೆ 8ಕ್ಕೂ ಅಧಿಕ ಖಾತೆಗಳನ್ನು ತೆರೆದಿದ್ದರು. ಅಲ್ಲದೆ ಟೆಲಿಗ್ರಾಂ ಹಾಗೂ ವಾಟ್ಸಪ್‌ನಲ್ಲಿ ಗ್ರೂಪ್ ರಚಿಸಿಕೊಂಡು ಸಹ ಕೆಲವರು ಮಾರಾಟ ಮಾಡಿದ್ದರು. ಇನ್‌ಸ್ಟಾಗ್ರಾಂ ಹಾಗೂ ಟೆಲಿಗ್ರಾಂ ಖಾತೆಗಳ ಮಾಹಿತಿ ಆಧರಿಸಿ ರಾಮನಗರ, ಉಡುಪಿ, ಶಿವಮೊಗ್ಗ ಹಾಗೂ ತುಮಕೂರು ಸೇರಿದಂತೆ 10 ವಿದ್ಯಾರ್ಥಿಗಳು ಸಿಕ್ಕಿಬಿದ್ದಿದ್ದರು.

    Previous Articleಎಮ್ಮೆಮಾಡು ಬಾಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ಪೊನ್ನಣ್ಣನವರಿಂದ ಭೂಮಿ ಪೂಜೆ
    Next Article ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ…?

    Related Posts

    ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ

    August 24, 2026

    ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

    August 24, 2026

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ

    August 24, 2026

    ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

    August 24, 2026

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.