ಶಾಸಕ ಪೊನ್ನಣ್ಣನವರ ಸೂಚನೆ ಮೇರೆಗೆ ಕೀರೆ ಪೊಳೆಗೆ ಸೇತುವೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕು ಗೋಣಿಕೊಪ್ಪ ಪಂಚಾಯಿತಿ ವ್ಯಾಪ್ತಿಯ ಕೀರೆ ಪೊಳೆಗೆ ಸೇತುವೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ಕಾಮಗಾರಿಯನ್ನು ಕೈಗೊಳ್ಳಲು ಇಂದು ಶಾಸಕರು ಹಾಗೂ ಮುಖ್ಯಮಂತ್ರಿಗಳು ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರ ಸೂಚನೆ ಮೇರೆಗೆ ವೀಕ್ಷಣೆಯನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮಿದೇರೀರ ನವೀನ್, ಗೋಣಿಕೊಪ್ಪ ಪಂಚಾಯಿತಿ ಅಧ್ಯಕ್ಷರು ಹಾಗೂ ವಲಯ ಅಧ್ಯಕ್ಷರಾದ ಶ್ರೀ ಕುಲಚಂಡ ಪ್ರಮೋದ್ ಗಣಪತಿ, ಪಂಚಾಯಿತಿ ಸದಸ್ಯರಾದ ಚೆಪ್ಪುಡೀರ ಧ್ಯಾನ್, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರಾದ ಆಲೀರ ರಶೀದ್ ಹಾಗೂ ಪಿಡಬ್ಲ್ಯೂಡಿ ಇಂಜಿನಿಯರ್ ಸತೀಶ್ ಉಪಸ್ಥಿತರಿದ್ದರು.

ಕೊಡಗು ನ್ಯೂಸ್

Exit mobile version