ಖಿದ್ಮಾ ಸಾಹಿತ್ಯ ರತ್ನ ಪ್ರಶಸ್ತಿಗೆ ಕೊಡಗಿನ ಅಮ್ಮತ್ತಿಯ ತೌಸೀಫ್ ಆಯ್ಕೆ

ವರದಿ:ಝಕರಿಯ ನಾಪೋಕ್ಲು

 

ನಾಪೋಕ್ಲು :ಖಿದ್ಮಾ ಫೌಂಡೇಶನ್ ಕರ್ನಾಟಕ, ಅನ್ನದಾತ ಪ್ರಕಾಶನ ಹಾಗು ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಇವರ ಸಹಯೋಗದಲ್ಲಿ ಆಯೋಜಿಸಲಾಗಿರುವ ಖಿದ್ಮಾ ಕನ್ನಡ ಸಂಗಮ ಕಾರ್ಯಕ್ರಮದಲ್ಲಿ ನೀಡಲ್ಪಡುವ ರಾಜ್ಯ ಮಟ್ಟದ ಖಿದ್ಮಾ ಸಾಹಿತ್ಯ ರತ್ನ ಪ್ರಶಸ್ತಿಗೆ ಕೊಡಗಿನ ಯುವ ಪ್ರತಿಭೆ ಅಮ್ಮತ್ತಿಯ ಎಂ. ಎ. ತೌಸೀಫ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಖಿದ್ಮಾ ಫೌಂಡೇಶನ್ ಅಧ್ಯಕ್ಷ ಆಮಿರ್ ಅಶ್ಅರಿ ಬನ್ನೂರು ತಿಳಿಸಿದ್ದಾರೆ.

 

ತೌಸೀಫ್ ಕಳೆದ ಎಸ್ಎಸ್ಎಫ್ ಸಾಹಿತ್ಯೋತ್ಸವದಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಜನರಲ್ ವಿಭಾಗದ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದರು.ಜ25 ರಂದು ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಗೌಡರು ತೌಸೀಫ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

Exit mobile version