Close Menu
Kodagu News
    ಹೊಸ ಸುದ್ದಿ

    ಕೊಡಗಿಗೆ ಮತ್ತೆ ಶುರುವಾಯಿತು ಕಸ್ತೂರಿರಂಗನ್ ಕಾಟ

    August 1, 2026

    2ನೇ ಮೊಣ್ಣಂಗೇರಿ ಸಂಪರ್ಕ ರಸ್ತೆಯಲ್ಲಿ ಭೂಕುಸಿತ: ಸಂಚಾರಕ್ಕೆ ಅಡಚಣೆ

    August 1, 2026

    ಮಡಿಕೇರಿಯನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ: ಶಾಸಕ ಡಾ.ಮಂತರ್ ಗೌಡ

    July 31, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಡಗಿಗೆ ಮತ್ತೆ ಶುರುವಾಯಿತು ಕಸ್ತೂರಿರಂಗನ್ ಕಾಟ
    • ಬಲ್ಲಮಾವಟಿ ಪೇರೂರು ಗ್ರಾಮದಲ್ಲಿ ಭಾರಿ ಮಳೆಗೆ ಅಡುಗೆಮನೆ ಗೋಡೆ ಕುಸಿದು ಹಾನಿ
    • 2ನೇ ಮೊಣ್ಣಂಗೇರಿ ಸಂಪರ್ಕ ರಸ್ತೆಯಲ್ಲಿ ಭೂಕುಸಿತ: ಸಂಚಾರಕ್ಕೆ ಅಡಚಣೆ
    • ಮಡಿಕೇರಿಯನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ: ಶಾಸಕ ಡಾ.ಮಂತರ್ ಗೌಡ
    • ಶೌಚಾಲಯಕ್ಕೆ ಬೀಗ: ಪುರಸಭೆ ಅಧಿಕಾರಿಗಳಿಗೆ ಕರವೇ ಎಚ್ಚರಿಕೆ
    • ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ
    • ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ
    • ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಮಡಿಕೇರಿ:-ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಶಾಸಕರಾದ ಡಾ. ಮಂತರ್ ಗೌಡ ಚಾಲನೆ
    ಜಿಲ್ಲೆ

    ಮಡಿಕೇರಿ:-ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಶಾಸಕರಾದ ಡಾ. ಮಂತರ್ ಗೌಡ ಚಾಲನೆ

    ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಶಾಸಕರಾದ ಡಾ.ಮಂತರ್ ಗೌಡ ಚಾಲನೆ

    ತೋಟಗಾರಿಕೆ ಇಲಾಖೆಯು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಇತರೆ ಅಭಿವೃದ್ದಿ ಇಲಾಖೆಗಳ ಸಹಯೋಗದೊಂದಿಗೆ ಭಾರತ ದೇಶದ ಗಣರಾಜ್ಯೋತ್ಸವದ ಪ್ರಯುಕ್ತ ನಗರದ ರಾಜಸೀಟು ಉದ್ಯಾನವನದಲ್ಲಿ ಮೂರು ದಿನಗಳ ಕಾಲ ಆಯೋಜಿಸಿರುವ ಫಲಪುಷ್ಪ ಪ್ರದರ್ಶನಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು ಶನಿವಾರ ಚಾಲನೆ ನೀಡಿದರು.

    ಬಳಿಕ ಮಾತನಾಡಿದ ಶಾಸಕರು ರಾಜಸೀಟು ಉದ್ಯಾನವನದ ಒಳಭಾಗದಲ್ಲಿ ಹೈಟೆಕ್ ಮಾದರಿಯ ಕ್ಯಾಂಟೀನ್ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

    ರಾಜಸೀಟು ಉದ್ಯಾನವನಲ್ಲಿ ಈ ಬಾರಿ ಪ್ರಸಿದ್ಧ ಶ್ರೀ ಭಗಂಡೇಶ್ವರ ದೇವಾಲಯ ಮಾದರಿಯಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಿರುವುದು ಆಕರ್ಷಣಿಯವಾಗಿದೆ. ಹಾಗೆಯೇ ಮಕ್ಕಳಿಗಾಗಿ ಕನ್ನಡ ಅಕ್ಷರ ಮಾಲೆಯ ಪುಷ್ಪ ಪ್ರದರ್ಶನ ಏರ್ಪಡಿಸಿರುವುದು ವಿಶೇಷವಾಗಿದೆ ಎಂದರು.

    ರಾಜಸೀಟು ಉದ್ಯಾನವನದಲ್ಲಿ ವರ್ಷಕ್ಕೊಮ್ಮೆ ಬದಲಾಗಿ ವಿಶೇಷ ಸಂದರ್ಭಗಳಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸುವಂತಾಗಬೇಕು ಎಂದು ಸಲಹೆ ಮಾಡಿದರು.

    ರಾಜಸೀಟು ಉದ್ಯಾನವನ್ನು ಮತ್ತಷ್ಟು ಆಕರ್ಷಣೀಯ ಮಾಡುವಲ್ಲಿ ಇನ್ನಷ್ಟು ಹಸಿರುಮಯವನ್ನಾಗಿ ಮಾಡಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮವಹಿಸುವಂತೆ ಸಲಹೆ ಮಾಡಿದರು.

    ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ಹಾಪ್ ಕಾಮ್ಸ್ ಅಧ್ಯಕ್ಷರಾದ ಬಿದ್ದಾಟಂಡ ರಮೇಶ್ ಚಂಗಪ್ಪ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ಎಸ್.ಪಿ.ಪೊನ್ನಪ್ಪ, ಸರ್ವೋದಯ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ, ರಾಜೀವ್ ಗಾಂಧಿ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ತೆನ್ನಿರ ಮೈನಾ, ಅಂಬೆಕಲ್ಲು ನವೀನ್, ನಗರಸಭೆ ಸದಸ್ಯರು, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಲಿಂಗರಾಜ ದೊಡ್ಡಮನಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಶಶಿಧರ, ಹಿರಿಯ ಸಹಾಯಕ ನಿರ್ದೇಶಕರಾದ ಪಣಿಂದ್ರ, ಸಹಾಯಕ ನಿರ್ದೇಶಕರಾದ ಮುತ್ತಪ್ಪ ಇತರರು ಇದ್ದರು.

    ನೋಡುಗರನ್ನು ಆಕರ್ಷಿಸುವ ಫಲಪುಷ್ಪಗಳು:-

    ಫಲಪುಷ್ಪ ಪ್ರದರ್ಶನದ ಅಂಗವಾಗಿ ಈಗಾಗಲೇ ರಾಜಾಸೀಟು ಉದ್ಯಾನವನದಲ್ಲಿ ಸುಮಾರು 8 ಸಾವಿರ ಕುಂದಗಳಲ್ಲಿ ವಿವಿಧ ವರ್ಗದ ಹೂವುಗಳು ಹಾಗೂ ಬೆಡ್‍ಗಳಲ್ಲಿ ಸುಮಾರು 20 ಸಾವಿರ ವಿವಿಧ ಜಾತಿಯ ಹೂವುಗಳಾದ ಸಾಲ್ವಿಯ, ಸೇವಂತಿಗೆ, ಚಂಡು ಹೂ, ಜೀನಿಯಾ, ಡಯಾಂಥಸ್, ಇಂಪೇಷಿಯನ್ಸ್, ವಿಂಕಾ ರೋಸಿಯಾ, ಕಾಕ್ಸ್ ಕೋಂಬ್, ಡೇಲಿಯಾ, ಮತ್ತಿತರ ಪುಷ್ಪ ವನ್ನು ಪಾತಿಯಲ್ಲಿ ಹಾಗೂ ಕುಂದಗಳಲ್ಲಿ ಪುಷ್ಪ ಪ್ರದರ್ಶಿಸಲಾಗಿದೆ.

    ಈ ವರ್ಷದ ಫಲಪುಷ್ಪ ಪ್ರದರ್ಶನದ ಪ್ರಮುಖ ಆಕರ್ಷಣೆಗಳು: ಕೊಡಗಿನ ಪ್ರಸಿದ್ದ ಶ್ರೀ ಭಗಂಡೇಶ್ವರ ದೇವಸ್ಥಾನದ ಕಲಾಕೃತಿಯನ್ನು 33 ಅಡಿ ಎತ್ತರದಲ್ಲಿ 18 ಅಡಿ ಉದ್ದ, 23 ಅಡಿ ಅಗಲದಲ್ಲಿ ವಿವಿಧ ಬಣ್ಣಗಳ ಗುಲಾಬಿ, ಸೇವಂತಿಗೆ, ಆಸ್ಟರ್ ವರ್ಗದ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿರುವುದು ಆಕರ್ಷಣಿಯವಾಗಿದೆ.

    ಭಾರತ ಏಕೀಕರಣದ ಸಂಕೇತವಾಗಿ ಕನ್ನಡ ಅಕ್ಷರಗಳ ಕಲಾಕೃತಿಗಳನ್ನು 2.5 ಅಡಿ ಮತ್ತು 2.0 ಅಡಿ ಎತ್ತರದಲ್ಲಿ ನಾಲ್ಕು ಕಲಾಕೃತಿಗಳು ಮತ್ತು 4.5 ಅಡಿ ಮತ್ತು 4.0 ಅಡಿ ಎತ್ತರದಲ್ಲಿ 2 ಕಲಾಕೃತಿಗಳನ್ನು ವಿವಿಧ ಬಣ್ಣಗಳ ಗುಲಾಬಿ, ಸೇವಂತಿಗೆ, ಆಸ್ಟರ್ ಜಾತಿಯ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗುವುದು ಎದ್ದು ಕಾಣುತ್ತಿದೆ.

    ಸಂಗೀತ ಕಲಾಕೃತಿಗಳಾದ 2 ಸಂಖ್ಯೆ ತಬಲಾ ಕಲಾಕೃತಿಯನ್ನು 2.5 ಅಡಿ ಎತ್ತರ ಮತ್ತು 3 ಅಡಿ ಎತ್ತರ ಕಲಾಕೃತಿಗಳು, ಪಿಯಾನೊ ಕಲಾಕೃತಿಯನ್ನು 5 ಅಡಿ ಎತ್ತರ, 4 ಅಡಿ ಅಗಲ ಮತ್ತು 3 ಅಡಿ ಉದ್ದದ ಕಲಾಕೃತಿಗಳು, ಹರ್ಪ್ ಕಲಾಕೃತಿಯನ್ನು 6 ಅಡಿ ಎತ್ತರ, 3 ಅಡಿ ಅಗಲ ಕಲಾಕೃತಿಗಳನ್ನು ವಿವಿಧ ಬಣ್ಣಗಳ ಗುಲಾಬಿ, ಸೇವಂತಿಗೆ, ಆಸ್ಟರ್ ಜಾತಿಯ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿರುವುದು ಪ್ರಮುಖ ಆಕರ್ಷನೀಯ.

    ಗಣರಾಜ್ಯೋತ್ಸವದ ಅಂಗವಾಗಿ ಅಮರ್ ಜವಾನ್ ಕಲಾಕೃತಿಯನ್ನು 8 ಅಡಿ ಎತ್ತರದಲ್ಲಿ ಕಲಾಕೃತಿಗಳನ್ನು ವಿವಿಧ ಬಣ್ಣದ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದೆ.

    ಹಾರುವ ಹಕ್ಕಿಯ ಕಲಾಕೃತಿಯನ್ನು ವಿವಿಧ ಬಣ್ಣದ ಹೂವಗಳಿಂದ ಅಲಂಕರಿಸಿ ನಿರ್ಮಾಣವಾಗಲಿದೆ. ಮೀನಿನ ಕಲಾಕೃತಿಯನ್ನು ವಿವಿಧ ಬಣ್ಣದ ಹೂವುಗಳಿಂದ ನಿರ್ಮಾಣ ಮಾಡಿರುವುದು ಎಲ್ಲರನ್ನು ಗಮನ ಸೆಳೆಯುತ್ತಿದೆ. ಬಟರ್‍ಪ್ಲೈ ಕಲಾಕೃತಿಯನ್ನು ವಿವಿಧ ಬಣ್ಣದ ಹೂವಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದೆ. ಹೂವಿನಿಂದ ಕರಡಿ ಕಲಾಕೃತಿಯನ್ನು ವಿವಿಧ ಬಣ್ಣದ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗುತ್ತದೆ.

    ಮಕ್ಕಳಿಗೆ ಮನರಂಜನೆ ನೀಡುವಂತಹ ಸ್ಪೈಡರ್ ಮ್ಯಾನ್, ಬ್ಲೂವೇ, ಮಿಕ್ಕಿ ಮೌಸ್, ಡೊರೇಮ್ಯಾನ್ ಕಲಾಕೃತಿಗಳನ್ನು ವಿವಿಧ ಹೂವುಗಳಿಂದ ಅಲಂಕರಿಸಿ ನಿರ್ಮಿಸಲಾಗುವುದು.

    ಹಾರ್ಟ್ ಶೇಪ್ ಕಲಾಕೃತಿಯನ್ನು ವಿವಿಧ ಬಣ್ಣದ ಹೂವಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದೆ.

    ವಿವಿಧ ಕ್ಷೇತ್ರಗಳ ಗಣ್ಯರು ಗಳ ಕಲಾಕೃತಿಗಳನ್ನು ಹಣ್ಣು/ ತರಕಾರಿಗಳಿಂದ ಕೆತ್ತನೆ ಮಾಡಿ ಪ್ರದರ್ಶಿಸಲಾಗಿದೆ. ವಿವಿಧ ಅಲಂಕಾರಿಕ ಗಿಡಗಳು ಬೋನ್ಸಾಯ್ ಗಿಡಗಳ ಪ್ರದರ್ಶನ, ಇಕೆಬಾನೆ ಹೂವಿನ ಜೋಡನೆಯ ಪ್ರದರ್ಶನಗಳನ್ನು ಏರ್ಪಾಡಿಸಲಾಗಿದೆ..

    ಈ ರೀತಿಯಾಗಿ ಹದಿನಾರು ವಿವಿಧ ರೀತಿಯ ಹೂವಿನ ಕಲಾಕೃತಿಗಳನ್ನು ಒಟ್ಟು 8 ರಿಂದ 10 ಲಕ್ಷ ಸಂಖ್ಯೆಯ ಸೇವಂತಿಗೆ, ಆರ್ಕಿಡ್, ಡೆಸ್ಸಿ ಹಾಗೂ ವಿವಿಧ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದೆ.

    ಗಾಂಧಿ ಮೈದಾನದಲ್ಲಿ 60 ಕ್ಕೂ ಮಳಿಗೆ ತೆರೆಯಲಾಗಿದ್ದು, ತೋಟಗಾರಿಕೆ ಇಲಾಖೆಯ‌ ವಸ್ತು ಪ್ರದರ್ಶನ ಅತ್ಯಾಕರ್ಷಣಿಕವಾಗಿದೆ. ಸಂಖ್ಯೆಯ ವಿವಿಧ ಇಲಾಖೆಗಳು, ಏಜೆನ್ಸಿಗಳು, ಸಂಸ್ಥೆಗಳು ಮಳಿಗೆಯನ್ನು ನಿರ್ಮಿಸಲಾಗಿದೆ. ಇದರಲ್ಲಿ 10 ಮಳಿಗೆಯನ್ನು ತೋಟಗಾರಿಕೆ, ಕಾಫಿ ಮಂಡಳಿ, ಕೃಷಿ, ಪಶುಪಾಲನೆ, ಮೀನುಗಾರಿಕೆ, ಹಾಫ್‍ಕಾಮ್ಸ್, ಕೈಗಾರಿಕೆ, ವಾಣಿಜ್ಯ ಇಲಾಖೆ ಹಾಗೂ ಇತರೆ ಇಲಾಖೆಗಳನ್ನು ಒಳಗೊಂಡಿದೆ. 50 ಮಳಿಗೆಯಲ್ಲಿ ನರ್ಸರಿ ಗಿಡಗಳ ಮಾರಾಟ ಮಳಿಗೆ, ಕೃಷಿ ಪರಿಕರಗಳ ಪ್ರದರ್ಶನ ಹಾಗೂ ಯಂತ್ರೋಪಕರಣಗಳ ಮಾರಾಟ ಮಳಿಗೆಗಳನ್ನು ತೆರೆಯಲಾಗಿದೆ.

    ರೈತರು ಬೆಳೆದಿರುವಂತಹ ವಿಶೇಷವಾದ ಹಣ್ಣುಗಳು, ತರಕಾರಿ, ತೋಟದ ಬೆಳೆಗಳು, ಸಾಂಬಾರು ಬೆಳೆಗಳ ಪ್ರದರ್ಶಿಕೆಗಳನ್ನು ಪ್ರದರ್ಶಿಸಲಾಗಿದೆ. ಅತ್ಯುತ್ತಮ ಪ್ರದರ್ಶಿಕೆಗಳಿಗೆ ಬಹುಮಾನ ನೀಡಲಾಗುತ್ತದೆ ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಶಶಿಧರ ಅವರು ತಿಳಿಸಿದ್ದಾರೆ.

     

    ಕೊಡಗು ನ್ಯೂಸ್

    Previous Articleರಾಜಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಶಾಸಕರಾದ ಡಾ. ಮಂತರ್ ಗೌಡ ಚಾಲನೆ
    Next Article ಶಾಸಕರಾದ ಎ.ಎಸ್ ಪೊನ್ನಣ್ಣ ನವರಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸ್ಮಾರಕ ಬಳಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯವನ್ನು ಪರಿಶೀಲಿಸಲಾಯಿತು.

    Related Posts

    ಕೊಡಗಿಗೆ ಮತ್ತೆ ಶುರುವಾಯಿತು ಕಸ್ತೂರಿರಂಗನ್ ಕಾಟ

    August 1, 2026

    ಬಲ್ಲಮಾವಟಿ ಪೇರೂರು ಗ್ರಾಮದಲ್ಲಿ ಭಾರಿ ಮಳೆಗೆ ಅಡುಗೆಮನೆ ಗೋಡೆ ಕುಸಿದು ಹಾನಿ

    August 1, 2026

    2ನೇ ಮೊಣ್ಣಂಗೇರಿ ಸಂಪರ್ಕ ರಸ್ತೆಯಲ್ಲಿ ಭೂಕುಸಿತ: ಸಂಚಾರಕ್ಕೆ ಅಡಚಣೆ

    August 1, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಡಗಿಗೆ ಮತ್ತೆ ಶುರುವಾಯಿತು ಕಸ್ತೂರಿರಂಗನ್ ಕಾಟ

    August 1, 2026

    2ನೇ ಮೊಣ್ಣಂಗೇರಿ ಸಂಪರ್ಕ ರಸ್ತೆಯಲ್ಲಿ ಭೂಕುಸಿತ: ಸಂಚಾರಕ್ಕೆ ಅಡಚಣೆ

    August 1, 2026

    ಮಡಿಕೇರಿಯನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ: ಶಾಸಕ ಡಾ.ಮಂತರ್ ಗೌಡ

    July 31, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.