ಶಾಸಕರಾದ ಎ.ಎಸ್ ಪೊನ್ನಣ್ಣ ನವರಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸ್ಮಾರಕ ಬಳಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯವನ್ನು ಪರಿಶೀಲಿಸಲಾಯಿತು.

 

ಬೆಂಗಳೂರಿನಿಂದ ತನ್ನ ಕ್ಷೇತ್ರಕ್ಕೆ ಆಗಮಿಸುತ್ತಿರುವ ಸಂದರ್ಭ, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಮಡಿಕೇರಿಯ ಸುದರ್ಶನ ವೃತ್ತದ ಬಳಿ ಇರುವ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ರವರ ಸ್ಮಾರಕ ಸ್ಥಳಕ್ಕೆ ಭೇಟಿ ನೀಡಿ, ಅಲ್ಲಿ ಕೈಗೊಂಡಿರುವ ಅಭಿವೃದ್ಧಿ ಕೆಲಸದ ವೀಕ್ಷಣೆ ನಡೆಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಸೂರಜ್ ಹೊಸೂರು, ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯರುಗಳು ಪಪು ತಿಮ್ಮಯ್ಯ, ಸಂಜು ಕಾವೇರಪ್ಪ ಉಪಸ್ಥಿತರಿದ್ದರು.

 

ಕೊಡಗು ನ್ಯೂಸ್

Exit mobile version