Close Menu
Kodagu News
    ಹೊಸ ಸುದ್ದಿ

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಫೆ.6 ರಿಂದ ಇತಿಹಾಸ ಪ್ರಸಿದ್ಧ ನಾಪೋಕ್ಲು ಬಳಿಯ ಚೆರಿಯಪರಂಬು ಮಖಾಂ ಊರುಸ್ ಆರಂಭ
    ಜಿಲ್ಲೆ

    ಫೆ.6 ರಿಂದ ಇತಿಹಾಸ ಪ್ರಸಿದ್ಧ ನಾಪೋಕ್ಲು ಬಳಿಯ ಚೆರಿಯಪರಂಬು ಮಖಾಂ ಊರುಸ್ ಆರಂಭ

    ಫೆ.6 ರಿಂದ ಇತಿಹಾಸ ಪ್ರಸಿದ್ಧ ನಾಪೋಕ್ಲು ಬಳಿಯ ಚೆರಿಯಪರಂಬು ಮಖಾಂ ಉರೂಸ್ ಆರಂಭ

    ಮಡಿಕೇರಿ:ಇತಿಹಾಸ ಪ್ರಸಿದ್ಧ ನಾಪೋಕ್ಲು ಬಳಿಯ ಚೆರಿಯಪರಂಬು ಮಖಾಂ ಉರೂಸ್ ಸಮಾರಂಭವು ಫೆ.6 ರಿಂದ 10ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಚೆರಿಯಪರಂಬು ಜಮಾಅತ್ ಪ್ರಧಾನ ಕಾರ್ಯದರ್ಶಿ ಪರವಂಡ.ಎ.ಸಿರಾಜ್ ಹೇಳಿದರು.

     

    ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚೆರಿಯಪರಂಬು ದರ್ಗಾ ಶರೀಫ್ ನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಶಹೀದ್ ಅಬ್ದುಲ್ ರಹ್ಮಾನ್ ವಲಿಯುಲ್ಲಾಹಿ (ನ.ಮ)ಹಾಗೂ ಹೌಲಿಯಾಗಳ ಹೆಸರಿನಲ್ಲಿ ಪ್ರತಿವರ್ಷ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು. ಫೆ.6 ರಂದು ಜುಮಾ ನಮಾಜ್ ನಂತರ ಉರೂಸ್‍ಗೆ ಚಾಲನೆ ದೊರೆಯಲಿದೆ. ಇದೇ ಸಂದರ್ಭ ಗ್ರಾಮಸ್ಥರೆಲ್ಲರೂ ಮಸೀದಿಯಿಂದ ನೇರವಾಗಿ ದರ್ಗಾಶರೀಫ್ ಆಗಮಿಸಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇದರ ನೇತೃತ್ವವನ್ನು ಚೆರಿಯಪರಂಬು ಜಮಾಅತ್ ಖತೀಬರಾದ ಮುಹಮ್ಮದ್ ಶಫೀಕ್ ಅಲಿ ಸಿರಾಜಿ ಉಸ್ತಾದ್ ಅವರು ವಹಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಜಮಾಅತ್ತಿನ ಅಧ್ಯಕ್ಷರಾದ ಪಿ.ಎ.ಅಹಮದ್ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದರು. ಮಗ್ರಿಬ್ ನಮಾಝಿನ ಬಳಿಕ ಮಖಾಂ ಅಲಂಕಾರ ಹಾಗೂ ಖತಂ ದುಆ ಮಜ್ಲಿಸ್ ನಡೆಯಲಿದ್ದು, ನಿಝಾರ್ ಅಹ್ಸನಿ ಕಕ್ಕಡಿಪುರಂ ಉಸ್ತಾದ್ ಅವರು ನೇತೃತ್ವ ನೀಡಲಿದ್ದಾರೆ. ಸಂಜೆ 7 ಗಂಟೆಗೆ ಝಬೈರ್ ಮಾಸ್ಟರ್ ತೋಟಿಕ್ಕಲ್ ಮತ್ತು ಸಂಗಡಿಗರು ನಡೆಸಿಕೊಡಲಿರುವ ಕಥಾ ಪ್ರಸಂಗ ಗಮನ ಸೆಳೆಯಲಿದೆ ಎಂದು ತಿಳಿಸಿದರು. ಫೆ.7 ಸಂಜೆ 7 ಗಂಟೆಗೆ ಸಿಂಸಾರುಲ್ ಹಖ್ ಹುದವಿ ಅಬುಧಾಬಿ ಪ್ರಭಾಷಣ ಮಾಡಲಿದ್ದಾರೆ. ಫೆ.8 ಸಂಜೆ 7 ಗಂಟೆಗೆ ಅಬ್ದಲ್ ಲತೀಫ್ ಸಖಾಫಿ ಕಾಂತಪುರಂ ಅವರ ನೇತೃತ್ವದಲ್ಲಿ ಮದನಿಯಂ ನಡೆಯಲಿದೆ. ಫೆ.9 ಮಧ್ಯಾಹ್ನ ಸಯ್ಯಿದ್ ಇಲ್ಯಾಸ್ ಅಲ್ ಹೈದರೂಸಿ ಎರುಮಾಡ್ ತಂಙಳ್ ನೇತೃತ್ವದಲ್ಲಿ ದುಆ ಮಸ್ಲಿಸ್ ಜರುಗಲಿದೆ ಎಂದು ಹೇಳಿದರು. ಸಂಜೆ 7 ಗಂಟೆಗೆ ಚೆರಿಯಪರಂಬು ಖತೀಬರಾದ ಮಹಮ್ಮದ್ ಶಫೀಕ್ ಅಲಿ ಸಿರಾಜಿ ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಸಂಜೆ 4 ಗಂಟೆಗೆ ಸಾರ್ವಜನಿಕರಿಗೆ ಅನ್ನದಾನ ನಡೆಯಲಿದೆ ಎಂದು ಸಿರಾಜ್ ತಿಳಿಸಿದರು. ಫೆ.10 ರಂದು ಸಂಜೆ 7 ಗಂಟೆಗೆ ಸಾರ್ವಜನಿಕ ಸಮ್ಮೇಳನ ಹಾಗೂ ಸಮಾರೋಪ ಸಮಾರಂಭ ನಡೆಯಲಿದ್ದು, ಅಧ್ಯಕ್ಷತೆಯನ್ನು ಜಮಾಅತ್ತಿನ ಅಧ್ಯಕ್ಷರಾದ ಅಹಮದ್ ವಹಿಸಲಿದ್ದಾರೆ. ಜಮಾಅತ್ ಪ್ರಧಾನ ಕಾರ್ಯದರ್ಶಿ ಪರವಂಡ ಸಿರಾಜ್ ಸ್ವಾಗತಿಸಲಿದ್ದು, ಕೊಡಗು ನಾಇಬ್ ಖಾಝಿ ಶೈಖುನಾ ಎಂ.ಎಂ.ಅಬ್ದುಲ್ಲಾ ಫೈಝಿ ಎಡಪಾಲ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಅಶ್ರಫ್ ಅಹ್ಸನಿ ಅನ್ವಾರುಲ್ ಹುದಾ ಪ್ರಾರ್ಥನೆಗೆ ನೇತೃತ್ವ ನೀಡಲಿದ್ದಾರೆ ಎಂದರು. ಹಾಫಿಝ್ ಸಿರಾಜುದ್ದೀನ್ ಖಾಸಿಮಿ ಪತ್ತನಾಪುರಂ ಮುಖ್ಯ ಪ್ರಭಾಷಣ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಸೇರಿದಂತೆ ಹಲವಾರು ರಾಜಕೀಯ ನಾಯಕರು ಧಾರ್ಮಿಕ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಪ್ರತೀ ದಿನ ರಾತ್ರಿ ಚೆರಿಯಪರಂಬು ದಫ್ ಸಂಗದ ನೇತೃತ್ವದಲ್ಲಿ ದಫ್ ಮುಟ್ ಪ್ರದರ್ಶನ ನಡೆಯಲಿದೆ ಪರವಂಡ.ಎ.ಸಿರಾಜ್ ಎಂದು ತಿಳಿಸಿದರು. ಚೆರಿಯಪರಂಬು ಜಮಾಅತ್ ಖತೀಬರಾದ ಪಿ.ಮೊಹಮ್ಮದ್ ಶಫಿಕ್ ಅಲಿ ಸಿರಾಜಿ ಅವರು ಮಾತನಾಡಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಿಕೊಡಬೇಕಾಗಿ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಚೆರಿಯಪರಂಬು ಜಮಾಅತ್‍ನ ಅಧ್ಯಕ್ಷ ಪಿ.ಎ.ಅಹಮ್ಮದ್, ಉಪಾಧ್ಯಕ್ಷ ಪಿ.ಎಂ.ಇಬ್ರಾಹಿಂ, ಕೋಶಾಧಿಕಾರಿ ಪಿ.ಹೆಚ್.ಬಶೀರ್, ಸದಸ್ಯ ಪಿ.ಎಂ.ಮೊಹಿದು ಕುಞ ಉಪಸ್ಥಿತರಿದ್ದರು.

    Previous Articleಕರ್ನಾಟಕ ರಾಜ್ಯ ಹಾಕಿ ಎಸ್ಸೋಸಿಯೇಷನ್ ಆಯೋಜಿಸಿದ ಮಿನಿ ಕ್ರೀಡಾ ಸಂಕೀರ್ಣ ಉದ್ಘಾಟನೆ
    Next Article ಪಾರಾಣೆ ಪ್ರೌಢಶಾಲೆಯಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಕುರಿತು ವಿದ್ಯಾರ್ಥಿಗಳಿಗೆ ಅರಿವು ಕಾರ್ಯಗಾರ

    Related Posts

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.