ಬಾಳೆಲೆಯ ದೇವನೂರು ಮಹಾದೇವರ ದೇವಸ್ಥಾನದ ಬ್ರಹ್ಮಕಲೋಶೋತ್ಸವಕ್ಕೆ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅಹ್ವಾನ

ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಪೊನ್ನಂಪೇಟೆ ತಾಲ್ಲೂಕು ಬಾಳೆಲೆಯ ದೇವನೂರು ಗ್ರಾಮದ ಶ್ರೀ ಮಹಾದೇವರ ದೇವಸ್ಥಾನದ ಪ್ರತಿಷ್ಠೆ-ಅಷ್ಟಬಂಧ ಬ್ರಹ್ಮಕಲಶೋತ್ಸವವನ್ನು ದಿನಾಂಕ ಫೆಬ್ರವರಿ 22ನೇ ದಿನಾಂಕದಿಂದ 25ನೇ ದಿನಾಂಕದವರೆಗೆ ಹಮ್ಮಿಕೊಂಡಿದ್ದು, ಈ ಸಮಾರಂಭಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರನ್ನು, ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವರಾದ ಬೋಸರಾಜುರವರನ್ನು ಹಾಗು ಸಾರಿಗೆ ಮತ್ತು ಮುಜರಾಯಿ ಸಚಿವರಾದ ಶ್ರೀ ರಾಮಲಿಂಗಾ ರೆಡ್ಡಿ ಯವರನ್ನು, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತೀತಿರ ಧರ್ಮಜ‌ ಉತ್ತಪ್ಪ ಹಾಗೂ ಕೊಡಗು ಜಿಲ್ಲಾ ಪಂಚಾಯತಿ ಸದಸ್ಯರು ಕೊಡಗು ಜಿಲ್ಲಾ ಹಿಂದುಳಿದ ವರ್ಗದ ಅಧ್ಯಕ್ಷರಾದ ಬಾನಂಡ ಪ್ರತ್ಯು, ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷರಾದ ಆದೇಂಗಡ ವಿನು ಉತ್ತಪ್ಪ, ಉಸ್ತುವಾರಿ ಆದೇಂಗಡ ವಾಸು ಬೆಳ್ಯಪ್ಪನವರು ಮತ್ತು ಆದೇಂಗಡ ಚಿಟ್ಟಿ ರಮೇಶ್’ರವರು ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಮಾನ್ಯ ಸಚಿವರಿಗೆ ಶಾಸಕರಾದ ಶ್ರೀ ಎ.ಎಸ್ ಪೊನ್ನಣ್ಣ ರವರು, ಕಾವೇರಿ ತಾಯಿಯ ಮೂರ್ತಿಯನ್ನು ಉಡುಗೊರೆಯಾಗಿ ನೀಡಿದರು.

 

ಕೊಡಗು ನ್ಯೂಸ್

Exit mobile version