ಇತಿಹಾಸ ಪ್ರಸಿದ್ಧ ನಾಪೋಕ್ಲು ಬಳಿಯ ಚೆರಿಯಪರಂಬು ಮಖಾಂ ಉರೂಸ್ ಗೆ ಶ್ರದ್ದಾ ಭಕ್ತಿಯ ಚಾಲನೆ

ವರದಿ :ಝಕರಿಯ ನಾಪೋಕ್ಲು

 

ನಾಪೋಕ್ಲು :ಇತಿಹಾಸ ಪ್ರಸಿದ್ಧ ನಾಪೋಕ್ಲು ಬಳಿಯ ಚೆರಿಯಪರಂಬು ದರ್ಗಾದಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಅಬ್ದುಲ್ ರಹ್ಮಾನ್ ವಲಿವುಲ್ಲಾಹಿ ಹಾಗೂ ಇತರ ಮಹಾನುಭಾವರ ವಾರ್ಷಿಕ ಉರೂಸ್ ಸಮಾರಂಭಕ್ಕೆ ಗಣ್ಯರು ಶ್ರದ್ಧಾಭಕ್ತಿಯ ಚಾಲನೆ ನೀಡಿದರು.

ಶುಕ್ರವಾರ ಜುಮಾ ನಮಾಜಿನ ಬಳಿಕ ದಫ್ ಪ್ರದರ್ಶನದೊಂದಿಗೆ ದರ್ಗಾಗೆ ತೆರಳಿದ ಸಮುದಾಯ ಬಾಂಧವರು ಮಸೀದಿಯ ಖತೀಬರಾದ ಮುಹಮ್ಮದ್ ಶಫೀಕ್ ಅಲಿ ಸಿರಾಜಿ ಅವರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಚೆರಿಯಪರಂಬು ಮೊಹಿಯುದ್ದೀನ್ ಜುಮಾ ಮಸೀದಿಯ ಆಡಳಿತ ಮಂಡಳಿಯ ಅಧ್ಯಕ್ಷ ಪಿ. ಎ. ಅಹಮದ್ ಅವರು ಧ್ವಜಾರೋಹಣ ನೆರವೇರಿಸಿದರು.

ಉರೂಸ್ ಸಮಾರಂಭವು ಫೆ.10ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು ಫೆ.9 ಸೋಮವಾರದಂದು ಸಂಜೆ 4ಗಂಟೆಗೆ ಮಸೀದಿಯಲ್ಲಿ ಮೌಲೂದ್ ಪಾರಾಯಣ ಹಾಗೂ ಭಕ್ತಾದಿಗಳಿಗೆ ಅನ್ನದಾನ ಕಾರ್ಯಕ್ರಮ ನಡೆಯಲಿದೆ ಎಂದು ಜಮಾಅತ್ ಪದಾಧಿಕಾರಿಗಳು ಮಾಹಿತಿ ನೀಡಿದರು.

 

ಈ ಸಂದರ್ಭ ಜಮಾಅತ್ ಪ್ರಧಾನ ಕಾರ್ಯದರ್ಶಿ ಪರವಂಡ ಸಿರಾಜ್, ಉಪಾಧ್ಯಕ್ಷ ಪಿ.ಎಂ. ಇಬ್ರಾಹಿಂ,ಕೋಶಾಧಿಕಾರಿ ಪಿ.ಎಚ್.ಬಶೀರ್, ಜಮಾಅತ್ ಆಡಳಿತ ಮಂಡಳಿ ಸದಸ್ಯರು, ಜಮಾಅತ್ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು,ಸ್ಥಳೀಯ ಜಮಾಅತ್ ಅಧ್ಯಕ್ಷರುಗಳು, ಊರಿನ ಹಿರಿಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.

Exit mobile version