ಮೈತ್ರಿ ಪೊಲೀಸ್ ಭವನದಲ್ಲಿ ಕ್ಯಾನ್ಸರ್ ತಪಾಸಣೆ

ಜಿಲ್ಲಾ ಪೊಲೀಸ್ ಘಟಕ, ಕಿದ್ವಾಯಿ ಗ್ರಂಥಿ ಆಸ್ಪತ್ರೆ, ಬೆಂಗಳೂರು ಮತ್ತು ಲಯನ್ಸ್ ಕ್ಲಬ್, ಮೈಸೂರು ಜೀವಾಧಾರ ಇವುಗಳ ಸಹಯೋಗದಲ್ಲಿ ಜಿಲ್ಲಾ ಪೊಲೀಸ್ ಘಟಕದ ಮಹಿಳಾ ಸಿಬ್ಬಂದಿಗಳು ಮತ್ತು ಪೊಲೀಸ್ ಸಿಬ್ಬಂದಿಗಳ ಕುಟುಂಬದ ಮಹಿಳಾ ಸದಸ್ಯರುಗಳಿಗೆ ಇಂದು ಮಡಿಕೇರಿಯ ಮೈತ್ರಿ ಪೊಲೀಸ್ ಸಮುದಾಯ ಭವನದಲ್ಲಿ ಸ್ತನ ಮತ್ತು ಗರ್ಭಕೋಶ ಕ್ಯಾನ್ಸರ್ ತಪಾಸಣೆ ಮತ್ತು ರಕ್ತದಾನ ಶಿಬಿರ ನಡೆಸಲಾಯಿತು.

 

ಈ ಸಂದರ್ಭದ ನೆನಪಿಗಾಗಿ ಮಡಿಕೇರಿಯ ಡಿಎಆರ್ ಕಚೇರಿಯ ಆವರಣದಲ್ಲಿ ಹಣ್ಣಿನ ಗಿಡವನ್ನು ನೆಡಲಾಯಿತು. ಶಿಬಿರದಲ್ಲಿ ಜಿಲ್ಲೆಯ ಮಹಿಳಾ ಪೊಲೀಸ್ ಸಿಬ್ಬಂದಿಗಳು ಮತ್ತು ಕುಟುಂಬಗಳ ಮಹಿಳಾ ಸದಸ್ಯರುಗಳು ಪಾಲ್ಗೊಂಡಿದ್ದರು. ಕಿದ್ವಾಯಿ ಆಸ್ಪತ್ರೆಯ ತಜ್ಞ ವೈದ್ಯರು ಪರೀಕ್ಷೆಗಳನ್ನು ನಡೆಸಿದರು.

Exit mobile version