Close Menu
Kodagu News
    ಹೊಸ ಸುದ್ದಿ

    ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ

    July 29, 2026

    ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು

    July 28, 2026

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ
    • ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು
    • ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ
    • ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
    • ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ
    • ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
    • ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
    • ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ನವದೆಹಲಿಯಲ್ಲಿ ಕೆಜಿಎಫ್ ನಿಯೋಗದಿಂದ ಅರಣ್ಯ ಸಚಿವರ ಭೇಟಿ
    ಜಿಲ್ಲೆ

    ನವದೆಹಲಿಯಲ್ಲಿ ಕೆಜಿಎಫ್ ನಿಯೋಗದಿಂದ ಅರಣ್ಯ ಸಚಿವರ ಭೇಟಿ

    ನವದೆಹಲಿಯಲ್ಲಿ ಕೆಜಿಎಫ್ ನಿಯೋಗದಿಂದ ಅರಣ್ಯ ಸಚಿವರ ಭೇಟಿ

    ಆನೆ ಮಾನವ ಸಂಘಷ೯ಕ್ಕೆ ಪರಿಹಾರ ಸಂಬಂಧಿತ ಮೇನಲ್ಲಿ ಕೇಂದ್ರ – ರಾಜ್ಯದಿಂದ ಬೆಂಗಳೂರಿನಲ್ಲಿ ಸಭೆ

    KODAGU NEWS

    ಕರ್ನಾಟಕ ಬೆಳೆಗಾರರ ಒಕ್ಕೂಟದ ನಿಯೋಗವು ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ಸಚಿವರಾದ ಭೂಪೇಂದ್ರ ಯಾದವ್ರವರನ್ನು ಭೇಟಿ ಮಾಡಿ .ದಶಕಗಳಿಂದ ಕೊಡಗು , ಚಿಕ್ಕಮಗಳೂರು, ಹಾಸನ ಭಾಗಗಳಲ್ಲಿ ಅತ್ಯಂತ ಗಂಭೀರ ಪಿಡುಗಾಗಿರುವ ಆನೆ-ಮಾನವ ಸಂಘರ್ಷದ ಬಗ್ಗೆ ಗಮನ ಸೆಳೆಯಿತು.

     

    ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಹಳಸೆ ಶಿವಣ್ಣ ನೇತೃತ್ವದ ಕರ್ನಾಟಕ ಬೆಳೆಗಾರರ ಒಕ್ಕೂಟದ ನಿಯೋಗ ಕೇಂದ್ರ ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿತು. ತಮ್ಮ ಸಚಿವಾಲಯಕ್ಕೆ ಈ ಸಮಸ್ಯೆ ಕುರಿತು ಸಂಪೂರ್ಣ ಅರಿವಿರುವುದಾಗಿಯೂ ಇದರ ನಿವಾರಣೆಗಾಗಿ ಕೇಂದ್ರ ಸರ್ಕಾರದ ಎಲ್ಲ ರೀತಿಯ ಸಹಕಾರವನ್ನು ನೀಡುವುದಲ್ಲದೇ, ಅಗತ್ಯವಾದ ಆಥಿ೯ಕ ನಿಧಿಯನ್ನು ಕೂಡಾ ಮೀಸಲಿಟ್ಟಿರುವುದಾಗಿ ತಿಳಿಸಿದರು.

     

     

    ಒಕ್ಕೂಟದ ನಿಯೋಗವು ಕೇಂದ್ರ ಸರ್ಕಾರದ ಹೆಚ್ಚುವರಿ ಮಹಾನಿರ್ದೇಶಕ ರಮೇಶ್ ಕೆ.ಪಾಂಡೆಯವರನ್ನು ಭೇಟಿ ಮಾಡಿ ಚರ್ಚಿಸಿತು. ಈ ಸಂದಭ೯ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆಯು ಈಗಾಗಲೇ ಭಾರತದ ಸುಮಾರು 8 ರಾಜ್ಯಗಳಲ್ಲಿ ವ್ಯಾಪಿಸಿರುವ ಮಾನವ-ಆನೆ ಸಂಘರ್ಷದ ಕುರಿತು ಮಾಹಿತಿ ಹೊಂದಿರುವುದಾಗಿಯೂ ಈ ಸಮಸ್ಯೆಗೆ ಆದಷ್ಟು ಶೀಘ್ರವಾಗಿ ಪರಿಹಾರ ಕಂಡುಕೊಳ್ಳಲು ಸಮಗ್ರವಾದ ಕ್ರಿಯಾಯೋಜನೆ ಸಿದ್ದವಿರುವುದಾಗಿ ಅವರು ತಿಳಿಸಿದರು.

     

    ನಿಯೋಗವು ಕೇಂದ್ರದ ಅರಣ್ಯ ಮತ್ತು ಪರಿಸರ ಸಚಿವಾಲಯದ ಜೊತೆ ನಿಕಟ ಸಂಪರ್ಕದಲ್ಲಿರುವಂತೆಯೂ ಮತ್ತು ರಾಜ್ಯ ಸರ್ಕಾರಕ್ಕೆ ಈ ಯೋಜನೆ ಜಾರಿಗೊಳಿಸಲು ಹಣ ಒದಗಿಸಲು 16ನೇ ಯೋಜನೆಯಲ್ಲಿ ತೀರ್ಮಾನಕ್ಕೆ ಬರಲಾಗಿದೆ ಎಂದೂ ಅವರ ತಿಳಿಸಿದರು.

     

    ಇದೇ ಸಂದರ್ಭದಲ್ಲಿ ಕರ್ನಾಟಕ ಬೆಳೆಗಾರರ ಒಕ್ಕೂಟದಿಂದ ಸಿದ್ದಪಡಿಸಲಾದ ಮಾನವ-ಆನೆ ಸಂಘರ್ಷದ ಕುರಿತಾದ ಸಂಕ್ಷಿಪ್ತ ಸಾರಾಂಶದ ವರದಿಯ ಪ್ರತಿಯನ್ನು ಸಚಿವರಿಗೂ ಹಾಗೂ ಕೇಂದ್ರ ಸರ್ಕಾರದ ಹೆಚ್ಚುವರಿ ಮಹಾನಿರ್ದೇಶಕರಿಗೂ ನೀಡಲಾಯಿತು.

     

     

    ಮೇ ತಿಂಗಳ ಮೂರನೇ ವಾರದಲ್ಲಿ ರಾಜ್ಯ ಸರ್ಕಾರ, ಬೆಳೆಗಾರರ ಒಕ್ಕೂಟ, ಹಾಗೂ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದ ನಡುವೆ ಸಮನ್ವಯ ಸಭೆ ಬೆಂಗಳೂರಿನಲ್ಲಿ ನಡೆಸಲು ನಿರ್ಧರಿಸಿರುವುದಾಗಿಯೂ ರಮೇಶ್ ಪಾಂಡೆ ತಿಳಿಸಿದರು. ಕರ್ನಾಟಕ ರಾಜ್ಯ ಅರಣ್ಯ ಇಲಾಖೆಗೆ ಆನೆ-ಮಾನವ ಸಂಘರ್ಷ ನಿವಾರಣೆಗಾಗಿ ಕೇಂದ್ರ ಸರ್ಕಾರ ತನ್ನೆಲ್ಲಾ ಸಹಕಾರ ನೆರವನ್ನು ನೀಡುವುದಾಗಿಯೂ ಅವರು ಭರವಸೆ ನೀಡಿದರು.

     

    ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಹಳಸೆ ಶಿವಣ್ಣ, ಉಪಾಧ್ಯಕ್ಷ ಕೆ.ಕೆ.ವಿಶ್ವನಾಥ್, ಚಿಕ್ಕಮಗಳೂರು ಜಿಲ್ಲಾ ಬೆಳೆಗಾರರ ಸಂಘದ ಅಧ್ಯಕ್ಷ ಕೆ.ಯು.ರತೀಶ್, ಮೂಡಿಗೆರೆ ತಾಲ್ಲೂಕು ಬೆಳೆಗಾರರ ಸಂಘದ ಕಾರ್ಯದರ್ಶಿ ಕೆ.ಡಿ.ಮನೋಹರ್ ಹಾಗೂ ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ಖಜಾಂಚಿ ಎಂ.ಜೆ.ಸಚಿನ್ ನಿಯೋಗದಲ್ಲಿದ್ದರು.

    Previous Articleಮದೆನಾಡು :ಬೈಕ್ ಸವಾರನ ಮೇಲೆ ಕಾಡಾನೆದಾಳಿ – ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾದ ಸವಾರ
    Next Article ಮಾರ್ಚ್ ಅಂತ್ಯದೊಳಗೆ ಹೋಂ ಸ್ಟೇಗೆ ಪರವಾನಗಿ ಹಾಗೂ ನವೀಕರಣಕ್ಕೆ ಜಿಲ್ಲಾಧಿಕಾರಿ ಸೋಮಶೇಖರ್ ಸೂಚನೆ

    Related Posts

    ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ

    July 29, 2026

    ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು

    July 28, 2026

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ

    July 29, 2026

    ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು

    July 28, 2026

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.