Close Menu
Kodagu News
    ಹೊಸ ಸುದ್ದಿ

    ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?

    August 26, 2026

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?
    • ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
    • ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
    • ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
    • ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
    • ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    • ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ
    ಜಿಲ್ಲೆ

    ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ

    *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ*

    *ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

    ಅನಿವಾರ್ಯ ಕಾರಣಗಳಿಂದ ನನೆಗುದಿಗೆ ಬಿದ್ದಿರುವ ಮೈಸೂರು-ಕುಶಾಲ ನಗರ ಯೋಜನೆಗೆ ಮರು ಚಾಲನೆ ನೀಡಬೇಕು, ಪ್ರಮುಖವಾಗಿ ಭೂ ಸ್ವಾಧೀನ ಪ್ರಕ್ರಿಯೆ ಆರಂಭಿಸಲು ಮಧ್ಯ ಪ್ರವೇಶಿಸಬೇಕು ಎಂದು ಕೇಂದ್ರ ರೈಲ್ವೆ ಸಚಿವರಿಗೆ *ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌* ಮನವಿ ಮಾಡಿದ್ದಾರೆ.

     

    ಈ ಸಂಬಂಧ ಪತ್ರ ಬರೆದಿರುವ ಸಂಸದರು, ಕೆಲವು ಪ್ರಕ್ರಿಯೆ ಪೂರ್ಣಗೊಂಡಿದ್ದರೂ, ಯೋಜನೆ ನಿಧಾನಗತಿಯಲ್ಲಿ ಸಾಗಿದೆ ಅಥವಾ ನನೆಗುದಿಗೆ ಬಿದ್ದಿದೆ ಎಂದರು.

     

    *ಯೋಜನೆಗೆ ಚಾಲನೆ ನೀಡಬೇಕು*

    ಮೈಸೂರು (ಬೆಳಗೊಳ) – ಕುಶಾಲನಗರ (89 ಕಿಮೀ) ಯೋಜನೆಯ ಅಂತಿಮ ಸ್ಥಳ ಸಮೀಕ್ಷೆ ಪೂರ್ಣಗೊಂಡಿದ್ದರೂ ಕಾರಣಾಂತರಗಳಿಂದ ಸ್ಥಗಿತಗೊಂಡಿದೆ. ಈ ಯೋಜನೆಗೆ ಪುನರುಜ್ಜೀವನಗೊಳಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸಚಿವರು ಮಧ್ಯಪ್ರವೇಶಿಸಬೇಕು ಎಂದು ಮನವಿ ಮಾಡಲಾಗಿದೆ ಎಂದು ಯದುವೀರ್‌ ತಿಳಿಸಿದ್ದಾರೆ.

     

    ಕೊಡಗು ಜಿಲ್ಲೆಗೆ ಸೂಕ್ತ ರೈಲು ಸಂಪರ್ಕವಿಲ್ಲದೇ ಪ್ರಮುಖ ಪ್ರವಾಸೋದ್ಯಮ ಮತ್ತು ತೋಟಗಾರಿಕೆ ಕ್ಷೇತ್ರಗಳ ಆರ್ಥಿಕತೆಗೆ ಭಾರಿ ತೊಂದರೆಯಾಗುತ್ತಿದೆ. ಸಂಪೂರ್ಣವಾಗಿ ಸ್ಯಾಚುರೇಟೆಡ್ ರಸ್ತೆ ಸಂಪರ್ಕದ ಮೇಲೆ ಬೆಳೆಗಾರರು ಅವಲಂಬಿತಾಗಿದ್ದಾರೆ ಎಂದು ವಿವರಿಸಲಾಗಿದೆ ಎಂದರು.

     

    *ಸುಸ್ಥಿರ ಪ್ರವಾಸೋದ್ಯಮಕ್ಕೆ ಅವಕಾಶ*

    ಈ ಯೋಜನೆಯು ಕೊಡಗು ಜಿಲ್ಲೆಗೆ ಸುಸ್ಥಿರ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೇರಳ ಅವಕಾಶ ಒದಗಿಸುತ್ತದೆ. ಕೃಷಿ-ತೋಟಗಾರಿಕೆ ಪೂರೈಕೆ ಸರಪಳಿಗಳನ್ನು ಬಲಪಡಿಸುತ್ತದೆ ಮತ್ತು ಕೊಡಗನ್ನು ಮೈಸೂರು ಮತ್ತು ಬೆಂಗಳೂರಿನ ಬೆಳವಣಿಗೆಯ ಕಾರಿಡಾರ್‌ಗಳೊಂದಿಗೆ ಸಂಯೋಜಿಸುತ್ತದೆ ಎಂದು ಸಚಿವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಯದುವೀರ್‌ ಒಡೆಯರ್‌ ತಿಳಿಸಿದರು.

     

    ಈ ನಿಟ್ಟಿನಲ್ಲಿ ರೈಲ್ವೆ ಸಚಿವಾಲಯವು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ. ರೈಲ್ವೆ ಸಚಿವಾಲಯ ಹಾಗೂ ಅಧಿಕಾರಿಗಳ ಜೊತೆ ನಿರಂತರ ಫಾಲೋ ಅಪ್‌ ಮಾಡಿ ಎರಡೂ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಎಲ್ಲ ರೀತಿಯಲ್ಲೂ ಕ್ರಮ ಕೈಗೊಳ್ಳಲಾಗುವುದು. ನನ್ನ ಕ್ಷೇತ್ರದ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ ಎಂದು ಸಂಸದರು ತಿಳಿಸಿದರು.

     

    ಈ ಎರಡೂ ಮನವಿಯನ್ನು ಸ್ವೀಕರಿಸಿರುವ ರೈಲ್ವೆ ಸಚಿವ ಅಶ್ವಿನ್‌ ವೈಷ್ಣವ್‌ ಕೂಡಲೇ ಪರಿಶೀಲನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಸಂಸದ ಯದುವೀರ್‌ ಒಡೆಯರ್‌ ಮಾಹಿತಿ ನೀಡಿದ್ದಾರೆ.

     

    ಚೆನ್ನೈ-ಬೆಂಗಳೂರು ಹೈಸ್ಪೀಡ್‌ ರೈಲಿಗೆ ಮೈಸೂರು ಸೇರಿಸಲು ಆಗ್ರಹ

     

    ಇದೇ ವೇಳೆ ಕೇಂದ್ರ ಬಜೆಟ್‌ನಲ್ಲಿ ಬೆಂಗಳೂರು-ಮೈಸೂರು ಹೈಸ್ಪೀಡ್‌ ರೈಲು ಯೋಜನೆ ಘೋಷಿಸಲಾಗಿದೆ. ಆದರೆ ಮೈಸೂರು ಕೈ ಬಿಡಲಾಗಿದೆ. ರೈಲ್ವೆ ಸಚಿವರು ಕೂಡಲೇ ಮಧ್ಯ ಪ್ರವೇಶಿಸಿ ಈ ಯೋಜನೆಗೆ ಸಾಂಸ್ಕೃತಿಕ ನಗರಿಯನ್ನೂ ಸೇರಿಸಬೇಕು ಎಂದು ಸಂಸದರು ಮನವಿ ಮಾಡಿದರು.

     

    ಮೈಸೂರು ಈಗ ಪ್ರಮುಖ ಪ್ರವಾಸಿ ತಾಣವಾಗಿದೆ. ಐಟಿ ಹಬ್‌ ಆಗುತ್ತಿದೆ. ರಾಜಧಾನಿ ಬೆಂಗಳೂರಿನೊಂದಿಗೆ ಸೂಕ್ತ ಸಂಪರ್ಕ ಜಾಲ ಹೊಂದಿದರೆ ಆರ್ಥಿಕ ಪ್ರಗತಿಯಾಗಲಿದೆ ಎಂದು ಸಚಿವರಿಗೆ ಮನವರಿಕೆ ಮಾಡಲಾಗಿದೆ ಎಂದು ಸಂಸದರು ವಿವರಿಸಿದರು.

     

    ಬೆಂಗಳೂರನ್ನು ಮೆಟ್ರೊ ಪಾಲಿಟನ್‌ ವಲಯದಿಂದ ದಟ್ಟಣೆ ಕಡಿಮೆ ಮಾಡಲು ಇದರು ನೆರವಾಗಲಿದೆ ಮತ್ತು ಹಲವಾರು ದಿನಗಳ ಬೇಡಿಕೆಯನ್ನು ಈಡೇರಿಸಲು ಸಚಿವರು ಮಂದಾಗಬೇಕು ಎಂದರು.

     

    ಈ ನಿಟ್ಟಿನಲ್ಲಿ ಚೆನ್ನೈ-ಬೆಂಗಳೂರು ಆರ್ಥಿಕ ಕಾರಿಡಾರ್‌ಗೆ ಮೈಸೂರು ಕೂಡ ಸೇರ್ಪಡೆ ಮಾಡಬೇಕೆಂದು ಮನವಿ ಮಾಡಿದ್ದೇನೆ ಎಂದು ಸಂಸದ ಯದುವೀರ್‌ ಒಡೆಯರ್‌ ತಿಳಿಸಿದ್ದಾರೆ.

    Previous Articleಮದೆನಾಡು ಕಾಡಾನೆ ದಾಳಿ -ಗಾಯಾಳುವಿಗೆ ಸಾಂತ್ವನ ಹೇಳಿದ ಮಾಜಿ ಶಾಸಕ ಕೆ.ಜಿ. ಬೋಪಯ್ಯ
    Next Article ಬೆಸಗೂರಿನಲ್ಲಿ ಹುಲಿ ಸೆರೆ- ಅರಣ್ಯ ಇಲಾಖೆಯಿಂದ ಯಶಸ್ವಿ ಕಾರ್ಯಾಚರಣೆ

    Related Posts

    ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?

    August 26, 2026

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?

    August 26, 2026

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.