Close Menu
Kodagu News
    ಹೊಸ ಸುದ್ದಿ

    ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ

    August 27, 2026

    ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ

    August 27, 2026

    ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ

    August 27, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ
    • ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ
    • ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ
    • ಕಸ್ತೂರಿರಂಗನ್ ವರದಿ ಬಗ್ಗೆ ಕೊಡಗಿನ ಜನತೆ ಆತಂಕಪಡಬೇಕಿಲ್ಲ: ಸಂಸದ ಯದುವೀರ್
    • ಮಾನವ–ಪ್ರಾಣಿ ಸಂಘರ್ಷದ ಬಗ್ಗೆ ನಾಳೆ ಮಡಿಕೇರಿಯಲ್ಲಿ ಮಹತ್ವದ ಸಭೆ
    • ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರಸುದಾರರ ಪತ್ತೆಗೆ ಪೊಲೀಸರ ಮನವಿ
    • ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?
    • ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಇಸ್ಲಾಮಿನ ಆದರ್ಶ ತತ್ವವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ – ಚೆರಿಯಪರಂಬು ಮಖಾಂ ವಾರ್ಷಿಕ ಉರೂಸ್ ಸಾರ್ವಜನಿಕ ಸಮ್ಮೇಳನದಲ್ಲಿ -ಹಾಫಿಜ್ ಸಿರಾಜುದ್ದೀನ್ ಖಾಸಿಮಿ ಕರೆ
    ಜಿಲ್ಲೆ

    ಇಸ್ಲಾಮಿನ ಆದರ್ಶ ತತ್ವವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ – ಚೆರಿಯಪರಂಬು ಮಖಾಂ ವಾರ್ಷಿಕ ಉರೂಸ್ ಸಾರ್ವಜನಿಕ ಸಮ್ಮೇಳನದಲ್ಲಿ -ಹಾಫಿಜ್ ಸಿರಾಜುದ್ದೀನ್ ಖಾಸಿಮಿ ಕರೆ

    ಇಸ್ಲಾಮಿನ ಆದರ್ಶ ತತ್ವವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ – ಚೆರಿಯಪರಂಬು ಮಖಾಂ ವಾರ್ಷಿಕ ಉರೂಸ್ ಸಾರ್ವಜನಿಕ ಸಮ್ಮೇಳನದಲ್ಲಿ -ಹಾಫಿಜ್ ಸಿರಾಜುದ್ದೀನ್ ಖಾಸಿಮಿ ಕರೆ

    ವರದಿ:ಝಕರಿಯ ನಾಪೋಕ್ಲು

     

    ನಾಪೋಕ್ಲು : ಇಸ್ಲಾಮಿನ ಆದರ್ಶ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಅಂತರರಾಷ್ಟ್ರೀಯ ಪ್ರಭಾಷಣಗಾರ ಯುವವಾಗ್ಮಿ ಸಿರಾಜುದ್ದೀನ್ ಖಾಸಿಮಿ ಅವರು ಕರೆ ನೀಡಿದರು

     

    ಇತಿಹಾಸ ಪ್ರಸಿದ್ಧ ನಾಪೋಕ್ಲು ಬಳಿಯ ಚೆರಿಯಪರಂಬು ಮಖಾಂ ವಾರ್ಷಿಕ ಉರೂಸ್ ಸಮಾರಂಭದ ಸಾರ್ವಜನಿಕ ಸಮ್ಮೇಳನ ಹಾಗೂ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಗಾರರಾಗಿ ಪಾಲ್ಗೊಂಡು ಮಾತನಾಡಿದ ಅವರು ಇತ್ತೀಚಿನ ಯುಗದಲ್ಲಿ ಯುವ ಪೀಳಿಗೆ ಇಸ್ಲಾಮಿನ ಆದರ್ಶ ತತ್ವಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವುದು ಕಂಡು ಬರುತ್ತಿದೆ. ಪ್ರವಾದಿ ಮಹಮ್ಮದ್ ಪೈಗಂಬರ್ ಅವರು ಕಲಿಸಿಕೊಟ್ಟಂತೆ ಗುರು, ಹಿರಿಯರಿಗೆ ಗೌರವವನ್ನು ಕೊಡುತ್ತ ಇಸ್ಲಾಮಿನ ಆದರ್ಶ ತತ್ವಗಳನ್ನು ಪೋಷಕರು ತಮ್ಮ ಮಕ್ಕಳ ಜೀವನದಲ್ಲಿ ಅಳವಡಿಸಿ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಬೆಳೆಸಬೇಕೆಂದು ಕರೆ ನೀಡಿದರು.

     

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಅವರು ಪಾಲ್ಗೊಂಡು ಮಾತನಾಡಿ ಧರ್ಮಭೇದವಿಲ್ಲದೆ ಎಲ್ಲಾ ಧರ್ಮವೂ ಒಂದುಗೂಡಿ ಉರೂಸ್ ಕಾರ್ಯಕ್ರಮ ಆಚರಿಸುತ್ತಿರುವುದು ನಾಡಿನ ಅಭಿವೃದ್ಧಿಗೆ ಮುನ್ನುಡಿಯಾಗಿದೆ. ವಿದ್ಯಾಭ್ಯಾಸ ವಿಚಾರವಂತಿಕೆ ಅಭಿವೃದ್ಧಿ, ಎಲ್ಲಿ ಹೆಚ್ಚಾಗಿರುತ್ತದೆಯೋ ಅಂತಹ ಕಡೆಗಳಲ್ಲಿ ಕೋಮುಗಲಭೆ ಉಂಟಾಗಲು ಸಾಧ್ಯವಿಲ್ಲ.

    ಜಾತಿಭೇದವಿಲ್ಲದೆ ನಡೆಯುವ ಇಂತಹ ಉರೂಸ್ ಸಮಾಜದಲ್ಲಿ ಉತ್ತಮ ವಾತಾವರಣ ಮೂಡಿಸುತ್ತಿರುವುದು ಶ್ಲಾಘನಿಯ ಎಂದು ಕಾರ್ಯಕ್ರಮಕ್ಕೆ ಶುಭ ಕೋರಿದರು.

    ಮೊದಲಿಗೆ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ನಾಹಿಬ್ ಖಾಝಿಗಳು ಹಾಗೂ ಕೇಂದ್ರಮುಶಾವರ ಸದಸ್ಯರಾದ ಅಬ್ದುಲ್ಲಾ ಫೈಝಿ ಅವರು ಉದ್ಘಾಟಿಸಿ ಮಾತನಾಡಿದರು. ಉರೂಸ್ ಸಮಾರಂಭದ ಅಂಗವಾಗಿ ಹಿರಿಯರ ಮತ್ತು ವಿದ್ಯಾರ್ಥಿಗಳ ದಫ್ ಪ್ರದರ್ಶನ,ಬುರ್ದಾ ಮಜ್ಲಿಸ್, ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ವಾರ್ಷಿಕ ಉರೂಸ್ ಸಮಾರಂಭದ ಅಂಗವಾಗಿ ಮಸೀದಿಯಲ್ಲಿ ಮೌಲೂದ್ ಪಾರಾಯಣ ಹಾಗೂ ಭಕ್ತಾದಿಗಳಿಗೆ ಅನ್ನದಾನ ಕಾರ್ಯಕ್ರಮ ನಡೆಯಿತು.

     

    ಚೆರಿಯಪರಂಬು ಜಮಾಅತ್ ಅಧ್ಯಕ್ಷ ಪಿ.ಎ. ಅಹಮದ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದ ವೇದಿಕೆಯಲ್ಲಿ ಜಿಲ್ಲಾ ವಕ್ಸ್ ಬೋರ್ಡ್ ಅಧಿಕಾರಿ ಮಹಮ್ಮದ್ ಇರ್ಫಾನ್,ಕಕ್ಕುಂದಕಾಡು ವೆಂಕಟೇಶ್ವರ ದೇವಾಲಯ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಎಂ. ಪಿ. ಗೋಪಾಲ, ನಾಪೋಕ್ಲು ಪೊಲೀಸ್ ಠಾಣಾಧಿಕಾರಿ ಪಿ.ಜಿ. ರಾಘವೇಂದ್ರ, ಡಿಸಿಸಿ ಉಪಾಧ್ಯಕ್ಷ ಅಬ್ದುಲ್ ರೆಹ್ಮಾನ್,ಕೆ ಡಿ ಪಿ ಸದಸ್ಯ ಕೋಳುಮಂಡ ರಫೀಕ್, ಟಾಟೂ ಮೊಣ್ಣಪ್ಪ, ಮಾದಂಡ ತಿಮ್ಮಯ್ಯ, ಗ್ರಾಮ ಪಂಚಾಯಿತಿ ಸದಸ್ಯ ಇಸ್ಮಾಯಿಲ್, ಜಮಾಅತ್ ಕಾರ್ಯದರ್ಶಿ ಪರವಂಡ ಸಿರಾಜ್, ಉಪಾಧ್ಯಕ್ಷ ಪಿ.ಎಂ. ಇಬ್ರಾಹಿಂ, ಕೋಶಾಧಿಕಾರಿ ಪಿ. ಎಚ್. ಬಷೀರ್, ಸಹ ಕಾರ್ಯದರ್ಶಿ ಆಲಿ, ಸದಸ್ಯರಾದ ಅಶ್ರಫ್,ಮೊಯ್ದು ಕುಂಞಿ,ಇಸ್ಮಾಯಿಲ್ ಸಾಖಾಫಿ ಕೊಂಡಂಗೇರಿ,ಮಸೀದಿಯ ಖತೀಬರಾದ ಮೊಹಮ್ಮದ್ ಶಫೀಕ್ ಅಲಿ ಸಿರಾಜಿ,ಸೇರಿದಂತೆ ಜಮಾಅತ್ ಆಡಳಿತ ಮಂಡಳಿ ಪದಾಧಿಕಾರಿಗಳು,ಸದಸ್ಯರು,ಭಕ್ತಾಧಿಗಳು ಅಧಿಕಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

    ಕಾರ್ಯಕ್ರಮದಲ್ಲಿ ಜಮಾಅತ್ ಮಾಜಿ ಕಾರ್ಯದರ್ಶಿ ಸಿ.ಎಂ. ಉಸ್ಮಾನ್ ನಿರೂಪಿಸಿದರು. ಜಮಾಅತ್ ಕಾರ್ಯದರ್ಶಿ ಪರವಂಡ ಸಿರಾಜ್ ಸ್ವಾಗತಿಸಿ ಸರ್ವರನ್ನು ವಂದಿಸಿದರು.

    Previous Articleನಾಪೋಕ್ಲುವಿನಲ್ಲಿ ಯಶಸ್ವಿಯಾಗಿ ನಡೆದ ಮಸ್ಜಿದು ತೌಹೀದ್ ನೂತನ ಮಸೀದಿ ಉದ್ಘಾಟನೆ ಹಾಗೂ ದಅವಾ ಸಮ್ಮೇಳನ ಕಾರ್ಯಕ್ರಮ
    Next Article ಮದರಸ ಪಬ್ಲಿಕ್ ಪರೀಕ್ಷೆಯಲ್ಲಿ ಕೊಟ್ಟಮುಡಿ ಮರ್ಕಝ್ ವಿದ್ಯಾರ್ಥಿನಿ ರಈಸಾ ಜಿಲ್ಲೆಗೆ ಪ್ರಥಮ

    Related Posts

    ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ

    August 27, 2026

    ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ

    August 27, 2026

    ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ

    August 27, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ

    August 27, 2026

    ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ

    August 27, 2026

    ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ

    August 27, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.