Close Menu
Kodagu News
    ಹೊಸ ಸುದ್ದಿ

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
    • ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
    • ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
    • ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
    • ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    • ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    • ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ವಿರಾಜಪೇಟೆಯಲ್ಲಿ ಗ್ರಾಮೀಣ ಕ್ರೀಡಾಕೂಟಕ್ಕೆ ಶಾಸಕ ಎ. ಎಸ್ ಪೊನ್ನಣ್ಣನಿಂದ ಚಾಲನೆ
    ಜಿಲ್ಲೆ

    ವಿರಾಜಪೇಟೆಯಲ್ಲಿ ಗ್ರಾಮೀಣ ಕ್ರೀಡಾಕೂಟಕ್ಕೆ ಶಾಸಕ ಎ. ಎಸ್ ಪೊನ್ನಣ್ಣನಿಂದ ಚಾಲನೆ

    ವಿರಾಜಪೇಟೆಯಲ್ಲಿ ಗ್ರಾಮೀಣ ಕ್ರೀಡಾಕೂಟಕ್ಕೆ ಶಾಸಕ ಎ. ಎಸ್ ಪೊನ್ನಣ್ಣನಿಂದ ಚಾಲನೆ

     

    ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು ಜಿಲ್ಲಾ ಜಾನಪದ ಪರಿಷತ್ ವಿರಾಜಪೇಟೆ ಘಟಕ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿರಾಜಪೇಟೆ ತಾಲೂಕು, ಪೊನ್ನಂಪೇಟೆ ಇವರ ಸಹಯೋಗದಲ್ಲಿ ನಗರದ ತಾಲೂಕು ಮೈದಾನದಲ್ಲಿ ಆಯೋಜಿಸಲಾಗಿದ್ದ ಗ್ರಾಮೀಣ ಕ್ರೀಡಾಕೂಟವನ್ನು ಕಂಜರ ಬಾರಿಸುವ ಹಾಗೂ ದೀಪ ಬೆಳಗುವ ಮೂಲಕ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಪೊನ್ನಣ್ಣ ಅವರು ಸಭೆಯನ್ನುದ್ದೇಶಿಸಿ ಮಾತನಾಡಿ ನಮ್ಮ ಸಂಸ್ಕøತಿಯಲ್ಲಿ ಗ್ರಾಮೀಣ ಕ್ರೀಡೆಯು ಒಂದು ಭಾಗವಾಗಿದ್ದು ಅದನ್ನು ಉಳಿಸಿ ಬೆಳೆಸಬೇಕು. ಕ್ರೀಡೆಯು ಜೀವನದಲ್ಲಿ ಸೋಲು ಗೆಲುವನ್ನು ನಿರ್ಧಾರ ಮಾಡುತ್ತದೆ. ಆರೋಗ್ಯವಂತ ಸಮಾಜದಲ್ಲಿ ನೂರು ಸಾರಿ ಸೋತರೆನಂತೆ ಮತ್ತೆ ಗೆಲ್ಲುವ ಪ್ರಯತ್ನ ಮಾಡುವಂತಾಗಬೇಕು. ಗ್ರಾಮೀಣ ಕ್ರೀಡಾಕೂಟ ಸಂಸ್ಕøತಿ ಉಳಿಯಲು ನಾವುಗಳು ಅದಕ್ಕೆ ಉತ್ತೇಜನ ನೀಡುವ ಮೂಲಕ ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸಿಕೊಂಡು ಹೋಗುವಂತಾಗಬೇಕು. ಇಂದಿನ ಯುವ ಜನಾಂಗ ಕ್ರೀಡಾ ಮನೋಭಾವನೆ ಬೆಳಿಸಿಕೊಳ್ಳಬೇಕು, ಕ್ರೀಡೆ ಎಲ್ಲರ ಚೇತನವಾಗಬೇಕು ಎಂದು ಹೇಳಿದರು.

    ಬಳಿಕ ಕ್ರೀಡಾ ಕೂಟದಲ್ಲಿ ಭಾಗವಹಿಸಿ ಭಾರದಗುಂಡು ಎಸೆದರು.

    ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷರಾದ ಬಿ.ಜಿ.ಅನಂತ ಶಯನ ಅವರು ಸಬೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಗ್ರಾಮೀಣ ಭಾಗದಲ್ಲಿ ಎಲೆ ಮರೆಯ ಕಾಯಿಯಂತಿರುವ ಕಲಾವಿದರನ್ನು ಗುರುತಿಸಿ ಕಳೆದ 10 ವರ್ಷಗಳಿಂದಲೂ ರಾಜ್ಯ ಮಟ್ಟದ ಪ್ರಶಸ್ತಿಯನ್ನು ನೀಡುತ್ತಿದೆ. ಜಾನಪದದಲ್ಲಿ ಅಹಂ ಇರಬಾರದು. ಒಂದು ಕುಟುಂಬದವರಂತೆ ಇರುವಂತಾಗಬೇಕು. ಕಲಾವಿದರು ಸಿಗುವಂತಹ ವೇದಿಕೆಯ ಅವಕಾಶವನ್ನು ಬಳಸಿಕೊಂಡು ರಾಜ್ಯ ಮಟ್ಟದಲ್ಲಿ ಭಾಗವಹಿಸುವಂತಾಗಬೇಕು. ವಿರಾಜಪೇಟೆ ಕ್ಷೇತ್ರದ ಶಾಸಕರು ಕ್ರೀಡೆಗಳಿಗೆ ಉತ್ತಮ ಸಹಕಾರವನ್ನು ನೀಡುತ್ತಿರುವುದು ಉತ್ತಮ ಕಾರ್ಯ ಎಂದರು.

    ಕನ್ನಡ ಸಾಹಿತ್ಯ ಪರಿಷತ್ ಕೊಡಗು ಅಧ್ಯಕ್ಷರಾದ ಕೇಶವ ಕಾಮತ್ ಮಾತನಾಡಿ ಹಿಂದಿನ ಕಾಲದಲ್ಲಿ ಗ್ರಾಮೀಣ ಪ್ರದೇಶದ ಬದುಕಿನಲ್ಲಿ ಕ್ರೀಡೆಯ ರೂಪದಲ್ಲಿ ಹಾಡುತ್ತ ಬಂದ ಗೀತೆಗಳು ಬಾಯಿಂದ ಬಾಯಿ ಹಾಡುತ್ತ ಇಂದು ಜಾನಪದ ಗೀತೆಗಳು ಬೆಳೆದು ಅತ್ಯಂತ ಶ್ರೀಮಂತ ಕಲೆಯಾಗಿದೆ ಎಂದರು.

    ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷರಾದ ಲೋಕೇಶ್ ಸಾಗರ್ ಮಾತನಾಡಿ ಕರ್ನಾಟಕದಲ್ಲಿರುವ ಎಲ್ಲಾ ತರಹದ ಜಾನಪದ ಕಲೆ, ಕ್ರೀಡೆಗಳು ಕೊಡಗಿನಲ್ಲಿ ಮಾತ್ರ ಕಂಡುಬರಲು ಸಾಧ್ಯ ಬೇರೆ ಜಿಲ್ಲೆಗಳಲ್ಲಿ ಇಷ್ಟು ಕಲೆ ಕ್ರೀಡೆ ಇಲ್ಲ. ಜಾನಪದ ಅಕಾಡೆಮಿ ಸ್ಥಾಪನೆ ಮಾಡುವ ಮೂಲಕ ಕೊಡಗಿನ ಕಲೆ ಅನಾವರಣ ಹಾಗೂ ಕಲೆಗೆ ಪ್ರೋತ್ಸಾಹ ನೀಡುವಂತಾಗಲು ಶಾಸಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

    ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕರಾದ ಲೀಲಾವತಿ ಅವರು ಮಾತನಾಡಿ ಮಹಿಳೆಯರು ಮನೆಯಲ್ಲಿ ಬಿಡುವಿಲ್ಲದೆ ಕೆಲಸದಲ್ಲಿ ತೋಡಗಿರುತ್ತಾರೆ. ಆದgರೂ ಇಂತಹ ಗ್ರಾಮೀಣ ಕ್ರೀಡಾಕೂಟದಲ್ಲಿ ಭಾಗವಹಿಸುವಂತ ಅವಕಾಶವನ್ನು ಸರಕಾರ ಮತ್ತು ಸಂಘ ಸಂಸ್ಥೆಗಳು ಮಾಡಿಕೊಟ್ಟಿರುವುದು ಉತ್ತಮ ಕಾರ್ಯ ಎಂದು ಹೇಳಿದರು.

    ವೇದಿಕೆಯಲ್ಲಿ ಪುರಸಭೆ ನಿಕಟಪೂರ್ವ ಅಧ್ಯಕ್ಷರಾದ ಮನೆಯಪಂಡ ದೇಚಮ್ಮ ಕಾಳಪ್ಪ, ಜಾನಪದ ಪರಿಷತ್ ಕೊಡಗು ಕಾರ್ಯದರ್ಶಿ ಉಜ್ವಲ್ ರಂಜಿತ್, ವಿರಾಜಪೇಟೆ ಘಟಕದ ಅಧ್ಯಕ್ಷ ಟೋಮಿ ಥಾಮಸ್, ಪ್ರಧಾನ ಕಾರ್ಯದರ್ಶಿ ರಜಿತಾ ಕಾರ್ಯಪ್ಪ, ಪೊನ್ನಂಪೇಟೆ ಘಟಕದ ಅಧ್ಯಕ್ಷ ದಿಲನ್ ಚೆಂಗಪ್ಪ, ಪ್ರಧಾನ ಕಾರ್ಯದರ್ಶಿ ಗೀತಾ ನಾಯ್ಡು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಪಿ. ಹರಿಶ್, ಕುಶಾಲನಗರ ಘಟಕದ ಅಧ್ಯಕ್ಷ ಚಂದ್ರಮೋಹನ್, ಜಿಲ್ಲಾ ಘಟಕದ ಖಜಾಂಚಿ ಸಂಪತ್ ಕುಮಾರ್, ನವೀನ್ ಅಂಬೇಕಲ್, ಮುಂತಾದವರು ಉಪಸ್ಥಿತರಿದ್ದರು.

    ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೇಲ್ವಿಚಾರಕ ಶಿವಕುಮಾರ್, ಸೇವಾ ಪ್ರತಿನಿಧಿಗಳಾದ ಮೀನಾಕ್ಷಿ, ವೀಣಾ, ಜೇಮ್ಸ್, ಬಿಂದು, ಜಾನಪದ ಪರಿಷತ್ತಿನ ಪದಾಧಿಕಾರಿಗಳಾದ ವೀಣಾ ರವಿ, ಪ್ಯಾನ್ಸಿ ಮುತ್ತಣ್ಣ, ರಂಜಿತ ಕವಲಪಾರ, ರಂಜಿತ್ ಕಿಗ್ಗಾಲು, ರಂಜಿನಿ, ಪ್ರಮಿಳಾ ನಾಚಯ್ಯ, ಗೌರು ನಂಜಪ್ಪ, ಶೋಬಾ ಸುಬ್ಬಯ್ಯ, ಕೃಪಾ ದೇವರಾಜ್, ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಅಂಬೇಕಲ್ ಕುಶಾಲಪ್ಪ, ಪದಾಧಿಕಾರಿಗಳಾದ ನಳಿನಾಕ್ಷಿ, ಅನಿತಾ, ರಾಜೇಶ್, ಟಿ.ಡಿ. ಮೋಹನ್, ಚಂಬಂಡ ಮುದ್ದಪ್ಪ, ಗಿರೀಶ್ ಕಿಗ್ಗಾಲು, ಹರೀಶ್ ಕಿಗ್ಗಾಲು, ಹಾತಿ ಜಯಪ್ರಕಾಶ್, ಸಿದ್ದರಾಜು ಬೆಳ್ಳಯ್ಯ, ಪ್ರೇಮ ರಾಘವಯ್ಯ, ವೈಲೇಶ್, ವಾಂಚೀರ ನಾಣಯ್ಯ ಸೇರಿದಂತೆ ಹಲವರಿದ್ದರು.

    ಗೌರಮ್ಮ ದತ್ತಿನಿಧಿ ಪ್ರಶಸ್ತಿ ವಿಜೇತರಾದ ಸಾಹಿತಿ ಕೃಪಾ ದೇವರಾಜು ಅವರಿಗೆ ವೇದಿಕೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

    ಬಳಿಕ ವಿವಿಧ ಗ್ರಾಮೀಣ ಕ್ರೀಡಾಕೂಟ ನಡೆಯಿತು.

    Previous Articleಕೊಡವ ವೆಲ್‌ಫೇರ್ ಐಂಡ್ ರಿಕ್ರಿಯೇಷನ್ ಅಸೋಸಿಯೇಶನ್‌ನ ನೂತನ ಕಟ್ಟಡ ‘ಕೊಡವ ಭವನ’ ಉದ್ಘಾಟನೆಯನ್ನು ಎ. ಎಸ್ ಪೊನ್ನಣ್ಣ ನೆರವೇರಿಸಿದರು
    Next Article ರಸ್ತೆಯಲ್ಲಿನ ಜೆಲ್ಲಿಕಲ್ಲಿಗೆ ಜೀವಗಳು ಬಲಿಯಾಗದಿರಲಿ

    Related Posts

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.