Close Menu
Kodagu News
    ಹೊಸ ಸುದ್ದಿ

    ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ

    July 26, 2026

    ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ

    July 26, 2026

    ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    July 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    • ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    • ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ
    • ನೀಟ್ ವಿವಾದದ ಬೆನ್ನಲ್ಲೇ ಧರ್ಮೇಂದ್ರ ಪ್ರಧಾನ ರಾಜೀನಾಮೆ
    • ಪುರಸಭೆ ಆಸ್ತಿ ಸ್ವಚ್ಛತೆಗೆ 10 ದಿನಗಳ ಗಡುವು
    • ಕೆ.ಜಿ. ಬೋಪಯ್ಯ ಎಸ್‌ಐಆರ್ ಮಹಾಸಂಪರ್ಕ ಅಭಿಯಾನದಲ್ಲಿ ಭಾಗಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಫೆ.28 ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ….!!! ಸುಗಮ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಿ: ಎಸ್.ಜೆ.ಸೋಮಶೇಖರ್
    ಜಿಲ್ಲೆ

    ಫೆ.28 ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ….!!! ಸುಗಮ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಿ: ಎಸ್.ಜೆ.ಸೋಮಶೇಖರ್

    ಫೆ.28 ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ….!!!

    ಸುಗಮ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಿ: ಎಸ್.ಜೆ.ಸೋಮಶೇಖರ್

    KODAGU NEWS

     

    ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಇದೇ ಫೆಬ್ರವರಿ, 28 ರಿಂದ ಮಾರ್ಚ್, 17 ರವರೆಗೆ ನಡೆಯಲಿದ್ದು., ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ನಿರ್ದೇಶನ ನೀಡಿದ್ದಾರೆ.

    ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಸಿದ್ಧತೆ ಸಂಬಂಧ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಯಾವುದೇ ರೀತಿ ಗೊಂದಲ ಉಂಟಾಗದೆ ಸುಗಮ ಹಾಗೂ ಸುವ್ಯವಸ್ಥಿತವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

    ಪರೀಕ್ಷೆಗೆ ಮೇಲ್ವಿಚಾರಕರ ನಿಯೋಜನೆ, ಪೊಲೀಸರು ಹಾಗೂ ಆರೋಗ್ಯ ಸಿಬ್ಬಂದಿಗಳ ನಿಯೋಜನೆ ಸೇರಿದಂತೆ ಪಿಯು ಪರೀಕ್ಷಾ ಪ್ರಾಧಿಕಾರದ ನಿರ್ದೇಶನವನ್ನು ಚಾಚೂ ತಪ್ಪದೆ ಪಾಲಿಸುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.

    ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಬೇಕು. ಪರೀಕ್ಷಾ ಕೊಠಡಿಗಳಲ್ಲಿ ಸಿಸಿಟಿವಿ ಅಳವಡಿಸುವುದು ಸೇರಿದಂತೆ ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

    ಪರೀಕ್ಷಾ ಕೇಂದ್ರಗಳ ಚಲನವಲನ ಸಂಬಂಧಿಸಿದಂತೆ ವೆಬ್‍ಕಾಸ್ಟಿಂಗ್ ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿಗಳು ನೋಂದಣಿ ಸಂಖ್ಯೆ ಹಾಗೂ ಕೊಠಡಿ ಸಂಖ್ಯೆ ಖಾತರಿ ಪಡಿಸಿಕೊಳ್ಳಲು ಪರೀಕ್ಷಾ ಕೇಂದ್ರದ ನಾಲ್ಕೈದು ಕಡೆಗಳಲ್ಲಿ ಮಾಹಿತಿ ಒದಗಿಸುವಂತಾಗಬೇಕು ಎಂದು ಎಸ್.ಜೆ.ಸೋಮಶೇಖರ್ ಅವರು ಸಲಹೆ ಮಾಡಿದರು.

    ಪರೀಕ್ಷಾ ದಿನಗಳಲ್ಲಿ ಅಗತ್ಯ ವಾಹನ ನಿಯೋಜಿಸುವುದು, ಜೊತೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳುವುದು, ಶುಶ್ರೂಷಕರನ್ನು ನೇಮಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

    ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಮಾತನಾಡಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಕಳೆದ ಬಾರಿಯಂತೆ ಸುಗಮವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.

    ಪದವಿ ಪೂರ್ವ ಶಿಕ್ಷಣ, ಕಂದಾಯ, ಪೊಲೀಸ್, ಖಜಾನೆ, ಸಾರಿಗೆ, ಸೆಸ್ಕ್, ಆರೋಗ್ಯ ಹೀಗೆ ವಿವಿಧ ಇಲಾಖೆಗಳು ತಂಡವಾಗಿ ಕಾರ್ಯನಿರ್ವಹಿಸಲಾಗುತ್ತದೆ ಎಂದು ಹೇಳಿದರು.

    ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ವಿಜಯ್ ಅವರು ಮಾತನಾಡಿ ಜಿಲ್ಲೆಯಲ್ಲಿ ಈ ಬಾರಿ 5255 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆಯಲಿದ್ದು, ಮೊದಲ ಬಾರಿಗೆ 4,809 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 250 ಖಾಸಗಿಯಾಗಿ ಹಾಗೂ 196 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ವಿಜಯ್ ಅವರು ಮಾಹಿತಿ ನೀಡಿದರು.

    ಕಲಾ ವಿಭಾಗದಲ್ಲಿ 1,054 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2603 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 1598 ವಿದ್ಯಾರ್ಥಿಗಳು ಒಟ್ಟು 5,255 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ವಿಜಯ್ ಅವರು ತಿಳಿಸಿದ್ದಾರೆ.

    ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರದ ಸುತ್ತ 200 ಮೀ ವ್ಯಾಪ್ತಿಯಲ್ಲಿ ಪ್ರತಿಬಂಧಕ ಜಾರಿಗೊಳಿಸಬೇಕಿದೆ. ಹಾಗೆಯೇ ಪರೀಕ್ಷಾ ದಿನಗಳಂದು ಜೆರಾಕ್ಸ್ ಅಂಗಡಿಗಳನ್ನು ಸಹ ಮುಚ್ಚಿಸಲಾಗುತ್ತದೆ ಎಂದರು.

    ಜಿಲ್ಲೆಯ 18 ಕೇಂದ್ರಗಳಲ್ಲಿ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದೆ, ಮಡಿಕೇರಿ ತಾಲ್ಲೂಕಿನ 5, ಸೋಮವಾರಪೇಟೆ ತಾಲ್ಲೂಕಿನ 8 ಮತ್ತು ವಿರಾಜಪೇಟೆ ತಾಲ್ಲೂಕಿನ 5 ಕಡೆಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.

    ಪರೀಕ್ಷಾ ಕೇಂದ್ರಗಳ ವಿವರ: ಮಡಿಕೇರಿ ತಾಲ್ಲೂಕಿನ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಪದವಿ ಪೂರ್ವ ಕಾಲೇಜು, ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜು, ಮೂರ್ನಾಡು ಪದವಿ ಪೂರ್ವ ಕಾಲೇಜು, ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜು.

    ಸೋಮವಾರಪೇಟೆ ತಾಲ್ಲೂಕಿನ ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಸುಂಟಿಕೊಪ್ಪ, ಕುಶಾಲನಗರ, ಕೂಡಿಗೆ ಹಾಗೂ ನೆಲ್ಯಹುದಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು, ಕೊಡ್ಲಿಪೇಟೆ ಮತ್ತು ಶನಿವಾರಂತೆ ಪದವಿ ಪೂರ್ವ ಕಾಲೇಜು ಹಾಗೂ ಕುಶಾಲನಗರ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದೆ.

    ವಿರಾಜಪೇಟೆ ತಾಲ್ಲೂಕಿನಲ್ಲಿ ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು. ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜು, ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜು, ಪೊನ್ನಂಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಗೋಣಿಕೊಪ್ಪ ವಿದ್ಯಾನಿಕೇತನ ಪದವಿ ಪೂರ್ವ ಕಾಲೇಜು ಈ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಮಾಹಿತಿ ನೀಡಿದರು.

    ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ.ಜೆ.ದಿವಾಕರ, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್, ಸಿದ್ಧರಾಜು ಬೆಳ್ಳಯ್ಯ, ಹಂಡ್ರಂಗಿ ನಾಗರಾಜು ಅವರು ಮಾತನಾಡಿದರು.

    ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ್, ತಹಶೀಲ್ದಾರರಾದ ಶ್ರೀಧರ, ಕಿರಣ್ ಗೌರಯ್ಯ, ಪೊಲೀಸ್ ಇನ್ಸ್‍ಪೆಕ್ಟರ್ ರಾಜು, ವಿವಿಧ ಕಾಲೇಜಿನ ಪ್ರಾಂಶುಪಾಲರು, ಮೇಲ್ವಿಚಾರಕರು ಇತರರು ಇದ್ದರು.

    Previous Articleಐನ್ ಆಪ್ಟಿಕಲ್ಸ್ ಆಪ್ರೋಮೆಟ್ರಿ ಕ್ಲಿನಿಕ್ ಇವರ ಆಶ್ರಯದಲ್ಲಿ ಏರ್ಪಡಿಸಲಾದ ಉಚಿತ ನೇತ್ರ ತಪಾಸಣಾ ಶಿಬಿರ ವನ್ನು ಜಿಲ್ಲಾ ಜೆ ಡಿ ಎಸ್ ಘಟಕದ ಮುಖಂಡರಿಂದ ಉದ್ಘಾಟಿಸಲಾಯಿತು
    Next Article ಫೆ.19 ರಂದು ಛತ್ರಪತಿ ಶಿವಾಜಿ ಮಹಾರಾಜ ಜಯಂತಿ

    Related Posts

    ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ

    July 26, 2026

    ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ

    July 26, 2026

    ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    July 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ

    July 26, 2026

    ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ

    July 26, 2026

    ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    July 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.