Close Menu
Kodagu News
    ಹೊಸ ಸುದ್ದಿ

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
    • ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
    • ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
    • ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
    • ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    • ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    • ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಮರಗೋಡುವಿನಲ್ಲಿ ಐತಿಹಾಸಿಕ ಹಿಂದು ಸಂಗಮಕ್ಕೆ ಭರ್ಜರಿ ಸಿದ್ಧತೆ
    ಜಿಲ್ಲೆ

    ಮರಗೋಡುವಿನಲ್ಲಿ ಐತಿಹಾಸಿಕ ಹಿಂದು ಸಂಗಮಕ್ಕೆ ಭರ್ಜರಿ ಸಿದ್ಧತೆ

    ಮರಗೋಡುನಲ್ಲಿ ಐತಿಹಾಸಿಕ ಹಿಂದು ಸಂಗಮಕ್ಕೆ ಭರ್ಜರಿ ಸಿದ್ಧತೆ

    ಶೋಭಾಯಾತ್ರೆ, ಟ್ಯಾಬ್ಲೋ, ಚಂಡೆ ನಾದದೊಂದಿಗೆ ಇಂದು ಸಾವಿರಾರು ಜನರ ಮಹಾ ಸಂಗಮ

    ASHOK MADIKERI

    ಮರಗೋಡು:

    ಧರ್ಮ, ಸಂಸ್ಕೃತಿ, ಕುಟುಂಬ ಮೌಲ್ಯಗಳು ಹಾಗೂ ರಾಷ್ಟ್ರಭಕ್ತಿಯ ಸಂದೇಶವನ್ನು ಜನತೆಗೆ ತಲುಪಿಸುವ ಮಹತ್ವದ ಉದ್ದೇಶದೊಂದಿಗೆ ಹಿಂದು ಸಂಗಮ ಆಯೋಜನಾ ಸಮಿತಿಯ ವತಿಯಿಂದ ಫೆಬ್ರವರಿ 21ರಂದು ಮರಗೋಡುನಲ್ಲಿ ಭವ್ಯ ಹಿಂದು ಸಂಗಮ ಮಹಾಸಮಾವೇಶ ನಡೆಯಲಿದೆ. ಈ ಐತಿಹಾಸಿಕ ಧಾರ್ಮಿಕ–ಸಾಂಸ್ಕೃತಿಕ ಉತ್ಸವಕ್ಕೆ ಮರಗೋಡು ಮಾತ್ರವಲ್ಲದೆ ಸುತ್ತಮುತ್ತಲ ಗ್ರಾಮಗಳು ಹಾಗೂ ವಿವಿಧ ಭಾಗಗಳಿಂದ ಸಾವಿರಾರು ಜನರು ಆಗಮಿಸುವ ನಿರೀಕ್ಷೆಯಿದೆ.

    ಬೆಳಿಗ್ಗೆ 9.30 ಗಂಟೆಗೆ ಮರಗೋಡು ಪ್ರೌಢ ಶಾಲಾ ಮೈದಾನದಿಂದ ಭವ್ಯ ಶೋಭಾಯಾತ್ರೆ ಆರಂಭವಾಗಲಿದ್ದು, ವಿವಿಧ ಸ್ಥಳಗಳಿಂದ ಜನರು ಸೇರಿಕೊಂಡು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ವಿವಿಧ ಸಂಘ ಸಂಸ್ಥೆಗಳ ಮಹಿಳೆಯರು ಕಳಸ ಹೊತ್ತು ಸಂಪ್ರದಾಯಬದ್ಧವಾಗಿ ಸಾಗಲಿದ್ದು, ಸಮಾಜದ ಏಕತೆ ಹಾಗೂ ಸಂಸ್ಕೃತಿಯ ಶಕ್ತಿಯನ್ನು ಪ್ರತಿಬಿಂಬಿಸಲಿದ್ದಾರೆ.

    ಧಾರ್ಮಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಬಿಂಬಿಸುವ ವೈವಿಧ್ಯಮಯ ಟ್ಯಾಬ್ಲೋ ವಾಹನಗಳು ಮೆರವಣಿಗೆಯ ಪ್ರಮುಖ ಆಕರ್ಷಣೆಯಾಗಲಿದ್ದು, ಮಕ್ಕಳ ಛದ್ಮವೇಷ ಪ್ರದರ್ಶನ ಜನಮನ ಸೆಳೆಯಲಿದೆ. ಕೇರಳದ ಪ್ರಸಿದ್ಧ ಚಂಡೆ ವಾದ್ಯದ ಗಂಭೀರ ನಾದ ಮರಗೋಡು ಪಟ್ಟಣದ ರಸ್ತೆಗಳಲ್ಲಿ ಪ್ರತಿಧ್ವನಿಸಿ ಭಕ್ತಿ ಹಾಗೂ ಸಂಭ್ರಮದ ವಾತಾವರಣ ನಿರ್ಮಿಸಲಿದೆ.

    ಸಮಾಜದ ಒಗ್ಗಟ್ಟು, ಪರಿಸರ ಸಂರಕ್ಷಣೆ, ಕುಟುಂಬ ಮೌಲ್ಯಗಳ ರಕ್ಷಣೆ, ರಾಷ್ಟ್ರೀಯ ಏಕತೆ ಹಾಗೂ ಸ್ವಾವಲಂಬಿ ಜೀವನ ಶೈಲಿಯಂತಹ ಮಹತ್ವದ ಸಂದೇಶಗಳನ್ನು ಈ ಹಿಂದು ಸಂಗಮದ ಮೂಲಕ ಜನತೆಗೆ ತಲುಪಿಸಲಾಗುವುದು ಎಂದು ಆಯೋಜನ ಸಮಿತಿಯವರು ತಿಳಿಸಿದ್ದಾರೆ.

     

    ಶೋಭಾಯಾತ್ರೆ ನಂತರ ನಡೆಯುವ ಮುಖ್ಯ ಸಭಾ ಕಾರ್ಯಕ್ರಮವು ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದ್ದು, ಇಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಧಾರ್ಮಿಕ ಸಂದೇಶಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಮಾಜದ ಏಕತೆಯನ್ನು ಬಲಪಡಿಸುವ ವಿಚಾರಗಳು ನಡೆಯಲಿವೆ.

    ಕಾರ್ಯಕ್ರಮದ ಅಂಗವಾಗಿ ಮಧ್ಯಾಹ್ನ 12.30 ಗಂಟೆಗೆ ಸಾವಿರಾರು ಜನರಿಗೆ ಅನ್ನದಾನ ವ್ಯವಸ್ಥೆ ಮಾಡಲಾಗಿದ್ದು, ಸೇವೆ ಹಾಗೂ ಸಂಸ್ಕೃತಿಯ ಸಂಯೋಜನೆಯೊಂದಿಗೆ ನಡೆಯುವ ಈ ಉತ್ಸವ ಮರಗೋಡು ಇತಿಹಾಸದಲ್ಲೇ ಸ್ಮರಣೀಯ ಧಾರ್ಮಿಕ ಕಾರ್ಯಕ್ರಮವಾಗಿ ರೂಪುಗೊಳ್ಳಲಿದೆ ಎಂಬ ವಿಶ್ವಾಸ ವ್ಯಕ್ತವಾಗಿದೆ.

    *✍🏻ಅಶೋಕ್_ಮಡಿಕೇರಿ*

    Previous Articleಶಿಕ್ಷಣ ಇಲಾಖೆಯ ಮಹತ್ವದ ಆದೇಶ…!!! ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಎ.ಐ ಆಧಾರಿತ ಹಾಜರಾತಿ
    Next Article ಸಂತ್ರಸ್ತರ ಗೌಪ್ಯತೆ ಇನ್ನು ಕಡ್ಡಾಯ: ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಮಹತ್ವದ ಬದಲಾವಣೆ ತಂದ ಡಿಜಿ-ಐಜಿಪಿ ಡಾ. ಎಂ.ಎ. ಸಲೀಂ

    Related Posts

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.