Close Menu
Kodagu News
    ಹೊಸ ಸುದ್ದಿ

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
    • ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
    • ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
    • ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
    • ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    • ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    • ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ರಾಜ್ಯಾದ್ಯಂತ ಫೆ.19ಕ್ಕೆ KSRTC ಸೇರಿ 4 ನಿಗಮದ ಸಾರಿಗೆ ನೌಕರರ ಪ್ರತಿಭಟನೆ; ಬಸ್‌ ಸಂಚಾರದಲ್ಲಿ ವ್ಯತ್ಯಯ
    ಜಿಲ್ಲೆ

    ರಾಜ್ಯಾದ್ಯಂತ ಫೆ.19ಕ್ಕೆ KSRTC ಸೇರಿ 4 ನಿಗಮದ ಸಾರಿಗೆ ನೌಕರರ ಪ್ರತಿಭಟನೆ; ಬಸ್‌ ಸಂಚಾರದಲ್ಲಿ ವ್ಯತ್ಯಯ

    ರಾಜ್ಯಾದ್ಯಂತ ಫೆ.19ಕ್ಕೆ KSRTC ಸೇರಿ 4 ನಿಗಮದ ಸಾರಿಗೆ ನೌಕರರ ಪ್ರತಿಭಟನೆ; ಬಸ್‌ ಸಂಚಾರದಲ್ಲಿ ವ್ಯತ್ಯಯ

    ಸಾರಿಗೆ ನೌಕರರು ವಿವಿಧ ಬೇಡಿಕೆಗೆ ಒತ್ತಾಯಿಸಿ ಗುರುವಾರ ರಾಜ್ಯಾದ್ಯಂತ ಪ್ರತಿಭಟನೆಗೆ ಮುಂದಾಗಿದ್ದಾರೆ. ಬೆಂಗಳೂರು ಚಲೋಗೆ ಕೂಡ ಕರೆಕೊಟ್ಟಿದ್ದಾರೆ. ಹೀಗಾಗಿ, ಕೆಎಸ್‌ಆರ್‌ಟಿಸಿ ಬಸ್‌ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಇತ್ತ ಸಾರಿಗೆ ನಿಗಮಗಳು ನೌಕರರು ರಜೆ ತೆಗೆದುಕೊಳ್ಳ ಬಾರದು ಎಂದು ಸೂಚನೆ ನೀಡಿದೆ. ಜತೆಗೆ ವೇತನ ಕಡಿತದ ಎಚ್ಚರಿಕೆಯನ್ನು ನೀಡಿದೆ.

     

    ವೇತನ ಹೆಚ್ಚಳದ ಹಿಂಬಾಕಿ ಹಾಗೂ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ನೌಕರರು ಗುರುವಾರ (ಫೆಬ್ರವರಿ 19) ‘ಬೆಂಗಳೂರು ಚಲೋ’ ನಡೆಸಲಿದ್ದಾರೆ. ಈ ಹಿನ್ನೆಲೆ ರಾಜ್ಯಾದ್ಯಂತ ಬಸ್‌ ಸೇವೆ ವ್ಯತ್ಯಯವಾಗುವ ಸಾಧ್ಯತೆ ಇದೆ. ಸಾರಿಗೆ ನೌಕರರ ಸಂಘಟನೆಗಳು ಈ ಹಿಂದೆ ಜನವರಿ 29 ರಂದು ನಡೆಸಲು ಉದ್ದೇಶಿಸಿದ್ದ ಬೆಂಗಳೂರು ಚಲೋ ಹೋರಾಟವನ್ನು ಸಾರಿಗೆ ನೌಕರರ ಮುಖಂಡ ಅನಂತ ಸುಬ್ಬರಾವ್‌ ನಿಧನದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ಗುರುವಾರಕ್ಕೆ ‘ಬೆಂಗಳೂರು ಚಲೋ’ಗೆ ಕರೆ ಕೊಟ್ಟಿದೆ.ಸರಕಾರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸದ ಕಾರಣಕ್ಕೆ ರಾಜ್ಯ ವ್ಯಾಪಿ ಹೋರಾಟ ನಡೆಸುವುದಾಗಿ ಸಮಿತಿಯು ಅಧಿಕೃತವಾಗಿ ಘೋಷಿಸಿದೆ. ಫೆ.19 ರಂದು ಬೆಳಗ್ಗೆ ಸಾವಿರಾರು ಸಾರಿಗೆ ನೌಕರರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಜಮಾಯಿಸಿ ಬೃಹತ್‌ ಮೆರವಣಿಗೆ ನಡೆಸಲಿದ್ದಾರೆ. ನಂತರ ಸಮಿತಿಯ ಮುಖಂಡರು ಚರ್ಚೆ ನಡೆಸಿ ಮುಂದಿನ ಹೋರಾಟದ ರೂಪುರೇಷೆಗಳನ್ನು ಘೋಷಿಸಲಿದ್ದಾರೆ.

     

    *ಬಸ್‌ ಸೇವೆ ವ್ಯತ್ಯಯ?* ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕೂ ಸಾರಿಗೆ ನಿಗಮಗಳ ನೌಕರರು ಫೆಬ್ರವರಿ 19 ರಂದು ಕೆಲಸಕ್ಕೆ ಗೈರಾಗಿ ಬೆಂಗಳೂರು ಚಲೋದಲ್ಲಿ ಭಾಗಿಯಾಗುವ ಸಾಧ್ಯತೆಯಿದೆ. ಇದರಿಂದ ರಾಜ್ಯದೆಲ್ಲೆಡೆ ಬಸ್‌ ಸೇವೆಯಲ್ಲಿ ವ್ಯತ್ಯಯವಾಗಬಹುದು. ಈ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಬೆಂಗಳೂರು ಚಲೋ ಹೋರಾಟದಲ್ಲಿ ಭಾಗಿಯಾಗದಂತೆ ಹಾಗೂ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷಾ ಆದೇಶ ಹೊರಡಿಸಿದ್ದಾರೆ.

     

    *ವೇತನ ಕಡಿತದ ಎಚ್ಚರಿಕೆ*

    ಸಾರಿಗೆ ನೌಕರರು ಯಾವುದೇ ಕಾರಣಕ್ಕೂ ಫೆಬ್ರವರಿ 19 ರ ಹೋರಾಟದಲ್ಲಿ ಭಾಗಿಯಾಗಬಾರದು. ಕರ್ತವ್ಯಕ್ಕೆ ಗೈರಾದರೆ ವೇತನ ಕಡಿತಗೊಳಿಸಲಾಗುತ್ತದೆ. ಕರ್ತವ್ಯಕ್ಕೆ ಗೈರಾಗುವ ನೌಕರರ ಪಟ್ಟಿಯನ್ನು ಘಟಕವಾರು ಸಿದ್ಧಪಡಿಸಿ, ಕೆಲಸ ಮಾಡದಿದ್ದಾಗ ವೇತನವಿಲ್ಲ ತತ್ವದಡಿ ಕ್ರಮ ಕೈಗೊಳ್ಳಲಾಗುತ್ತದೆ. ಜತೆಗೆ, ಕರ್ತವ್ಯಕ್ಕೆ ಅನಧಿಕೃತವಾಗಿ ಗೈರಾಗುವ ನೌಕರರ ವಿರುದ್ಧ ಹೈಕೋರ್ಟ್‌ನ ಆದೇಶದಂತೆ ಶಿಸ್ತುಕ್ರಮ ಜರುಗಿಸಲಾಗುತ್ತದೆ ಎಂದು ಅಕ್ರಂ ಪಾಷಾ ಎಚ್ಚರಿಕೆ ನೀಡಿದ್ದಾರೆ. ಸಾರಿಗೆ ನಿಗಮಗಳ ಅಧಿಕಾರಿಗಳು ಫೆ.19 ರಂದು ಬಸ್‌ಗಳ ದೈನಂದಿನ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಬೇಕು. ಅನಿವಾರ್ಯ ಸಂದರ್ಭ ಹೊರತುಪಡಿಸಿ ನೌಕರರಿಗೆ ಯಾವುದೇ ರಜೆ ಮಂಜೂರು ಮಾಡಬಾರದು. ಈ ಸೂಚನೆ ವಾರದ ರಜೆ ಅಥವಾ ದೀರ್ಘಾವಧಿ ರಜೆಯಲ್ಲಿರುವ ನೌಕರರಿಗೆ ಅನ್ವಯಿಸುವುದಿಲ್ಲ. ಅಗತ್ಯವಿದ್ದರೆ ನೌಕರರು ವಾರದ ರಜೆಯನ್ನು ರದ್ದುಪಡಿಸಿ, ಕೆಲಸಕ್ಕೆ ನಿಯೋಜಿಸಬೇಕು ಎಂದು ಸೂಚಿಸಿದ್ದಾರೆ.

     

    *ಸಾರಿಗೆ ನೌಕರರ ಬೇಡಿಕೆಗಳು ಏನು?*

    ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಹಣ ತಕ್ಷಣವೇ ಬಿಡುಗಡೆ ಮಾಡಬೇಕು. 2024ರ ಜ.1ರಿಂದ ಅನ್ವಯವಾಗುವಂತೆ ನೂತನ ವೇತನ ಶ್ರೇಣಿ ಜಾರಿಗೊಳಿಸಬೇಕು. ಸಾರಿಗೆ ನೌಕರರಿಗೆ ರಾಜ್ಯ ಸರಕಾರಿ ನೌಕರರಿಗೆ ಸರಿ ಸಮಾನವಾದ ವೇತನ ನೀಡಬೇಕು. ಕೆಲಸದ ಅವಧಿಯಲ್ಲಿಅಧಿಕಾರಿಗಳಿಂದ ಕಾರ್ಮಿಕರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಬೇಕು.

    Previous Articleಸಂತ್ರಸ್ತರ ಗೌಪ್ಯತೆ ಇನ್ನು ಕಡ್ಡಾಯ: ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಮಹತ್ವದ ಬದಲಾವಣೆ ತಂದ ಡಿಜಿ-ಐಜಿಪಿ ಡಾ. ಎಂ.ಎ. ಸಲೀಂ
    Next Article 1.5 ಕೋಟಿ ವೆಚ್ಚದ ಕ್ಯಾಮಾಟ್ ಕುಂಬಳದಾಳು ಮೂರ್ನಾಡ್ ರಸ್ತೆ ನವೀಕರಣಕ್ಕೆ ಡಾ ಮಂತರ್ ಗೌಡ ಚಾಲನೆ

    Related Posts

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.