Close Menu
Kodagu News
    ಹೊಸ ಸುದ್ದಿ

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026

    ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!

    August 25, 2026

    ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    August 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
    • ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
    • ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    • ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    • ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
    • ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ
    • ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ತ್ರಿಪದಿ ಕವಿ ಸರ್ವಜ್ಞ ಜಯಂತಿ
    ಜಿಲ್ಲೆ

    ತ್ರಿಪದಿ ಕವಿ ಸರ್ವಜ್ಞ ಜಯಂತಿ

    ತ್ರಿಪದಿ ಕವಿ ಸರ್ವಜ್ಞ ಜಯಂತಿ

     

    ಕನ್ನಡ ಸಾಹಿತ್ಯ ಲೋಕದ ಅತ್ಯಂತ ಜನಪ್ರಿಯ ತ್ರಿಪದಿ ಕವಿ ಸರ್ವಜ್ಞ ಅವರು ಬರೆದಿರುವ ಪುಸ್ತಕ/ಹೊತ್ತಿಗೆಯನ್ನು ಎಲ್ಲಾ ಭಾಷೆಗಳಿಗೂ ಭಾಷಾಂತರ ಮಾಡಬೇಕು ಎಂದು ಕುಶಾಲನಗರ ಅನುಗ್ರಹ ಪದವಿ ಕಾಲೇಜಿನ ಪ್ರಾಧ್ಯಾಪಕರಾದ ಲೀಲಾಕುಮಾರಿ ತೊಡಿಕಾನ ಅವರು ಸಲಹೆ ಮಾಡಿದ್ದಾರೆ.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ಶುಕ್ರವಾರ ನಡೆದ ‘ಕವಿ ಸರ್ವಜ್ಞ ಜಯಂತಿ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

    ಸರ್ವಜ್ಞ ಅವರು ಬರೆದಿರುವ ತ್ರಿಪದಿ ಪದ್ಯಗಳು ಸಾರ್ವಕಾಲಿಕವಾಗಿದ್ದು, ಇಂಗ್ಲೀಷ್, ಹಿಂದಿ ಸೇರಿದಂತೆ ರಾಷ್ಟ್ರದ ಎಲ್ಲಾ ಭಾಷೆಗಳಿಗೂ ಭಾಷಾಂತರಿಸಿದಲ್ಲಿ ಪ್ರತಿಯೊಬ್ಬರಿಗೂ ತಲುಪಲು ಸಾಧ್ಯ. ಆ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕು ಎಂದು ಲೀಲಾಕುಮಾರಿ ತೊಡಿಕಾನ ಅವರು ಹೇಳಿದರು.

    ತ್ರಿಪದಿಗಳ ಬ್ರಹ್ಮ, ಚಕ್ರವರ್ತಿ ಎಂಬ ಬಿರುದು ಪಡೆದಿರುವ ಸರ್ವಜ್ಞ ಅವರು ಶ್ರೇಷ್ಠ ದಾರ್ಶನಿಕ, ಮಹಾನ್ ಮಾನವತಾವಾದಿಯಾಗಿದ್ದರು. ಕನ್ನಡ ಸಾಹಿತ್ಯ ಲೋಕದಲ್ಲಿ ಮೂರು ಸಾಲಿನಲ್ಲಿ ಪದ್ಯಗಳನ್ನು ರಚಿಸುವ ಮೂಲಕ ಪ್ರತಿಯೊಬ್ಬರಿಗೂ ಅರ್ಥವಾಗುವಂತೆ ಬರೆದಿರುವುದು ಶ್ಲಾಘನೀಯ ಎಂದರು.

    ಸಾಮಾಜಿಕ ವಿಮರ್ಶೆ, ಜೀವನಾನುಭವ, ಬದುಕಿನ ಸತ್ಯಗಳನ್ನು ಸರಳವಾಗಿ ತ್ರಿಪದಿಗಳ ಮೂಲಕ ಸರ್ವಜ್ಞ ಅವರು ವಿವರಿಸಿದ್ದಾರೆ ಎಂದು ಅವರು ಹೇಳಿದರು.

    ಸಮಾಜದಲ್ಲಿನ ಅಂಕುಡೊಂಕುಗಳನ್ನು ತ್ರಿಪದಿಗಳ ಮೂಲಕ ಬರೆದು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದಾರೆ. ಅವರ ತ್ರಿಪದಿಗಳಲ್ಲಿ ವ್ಯಂಗ್ಯ, ವಿಡಂಬನೆ, ವಿಮರ್ಶೆ ಕಾಣಬಹುದಾಗಿದೆ ಎಂದು ಅವರು ನುಡಿದರು.

    ಸರ್ವಜ್ಞ ಅವರ ತ್ರಿಪದಿಗಳಲ್ಲಿ ಸತ್ಯ, ಧರ್ಮ ಹಾಗೂ ನ್ಯಾಯನಿಷ್ಠೆ ಕಾಣಬಹುದಾಗಿದೆ. ಮೂರು ಸಾಲಿನ ತ್ರಿಪದಿಗಳು ಮೂರು ಪುಟಗಳಷ್ಟು ವಿವರವನ್ನು ನೀಡಬಹುದಾಗಿದೆ. ಅಂತಹ ಚಿಂತನೆಯನ್ನು ತ್ರಿಪದಿಗಳಲ್ಲಿ ವರ್ಣೀಸಲಾಗಿದೆ ಎಂದರು.

    ಸರ್ವಜ್ಞ ಅವರ ತ್ರಿಪದಿಗಳು ಪ್ರಸ್ತುತ ಸಮಾಜಕ್ಕೆ ದಿವ್ಯ ಔಷಧಿಯಾಗಿದೆ. ಆತ್ಮವಿಮರ್ಶೆ, ಸಾಮಾಜಿಕ ಚಿಂತನೆ, ಸಮಾಜ ಸುಧಾರಣೆಯತ್ತ ತ್ರಿಪದಿಗಳು ಬೆಳಕನ್ನು ಚೆಲ್ಲುತ್ತವೆ. ಕವಿ ಸರ್ವಜ್ಞ ಅವರು ದಾರ್ಶನಿಕ, ತತ್ವಜ್ಞಾನಿ, ವಾಸ್ತವವಾಗಿ ತ್ರಿಪದಿಗಳನ್ನು ರಚಿಸಿದ್ದಾರೆ ಎಂದು ಲೀಲಾಕುಮಾರಿ ತೊಡಿಕಾನ ಅವರು ವಿವರಿಸಿದರು.

    ಕುಲಾಲ ಕುಂಬಾರ ಸಂಘದ ಸ್ಥಾಪಕ ಅಧ್ಯಕ್ಷರಾದ ಮುತ್ತಮ್ಮ ಅವರು ಮಾತನಾಡಿ 2015 ರಿಂದ ಕವಿ ಸರ್ವಜ್ಞ ಅವರ ಜಯಂತಿಯನ್ನು ಸರ್ಕಾರ ಆಚರಿಸಿಕೊಂಡು ಬರುತ್ತಿದೆ ಎಂದು ಹೇಳಿದರು.

    ಕವಿ ಸರ್ವಜ್ಞ ಜಯಂತಿ ಸಂದರ್ಭದಲ್ಲಿ ಕುಲಾಲ ಕುಂಬಾರ ಸಂಘದವರು ಸಾಂಸ್ಕøತಿಕ, ಕ್ರೀಡಾಕೂಟವನ್ನು ಆಯೋಜಿಸುವಂತಾಗಬೇಕು ಇದಕ್ಕೆ ಜಿಲ್ಲಾಡಳಿತದ ಸಹಕಾರ ಅತ್ಯಗತ್ಯ ಎಂದು ಕೋರಿದರು.

    ಕುಲಾಲ/ಕುಂಬಾರ ಸಂಘದ ಮಾಜಿ ಅಧ್ಯಕ್ಷರಾದ ಎಂ.ಡಿ.ನಾಣಯ್ಯ ಅವರು ಮಾತನಾಡಿ ಕವಿ ಸರ್ವಜ್ಞರ ಜಯಂತಿಯನ್ನು ಪ್ರತಿವರ್ಷ ಆಚರಿಸಿಕೊಂಡು ಬರಲಾಗುತ್ತಿದ್ದು, ಸರ್ವಜ್ಞರ ಹೆಸರಿನಲ್ಲಿ ಎಲ್ಲರೂ ಸಂಘಟಿತರಾಗಬೇಕು ಎಂದು ಸಲಹೆ ಮಾಡಿದರು.

    ಕುಲಾಲ ಕುಂಬಾರ ಸಂಘದ ಕಾರ್ಯದರ್ಶಿ ಅರುಣ್ ಕುಮಾರ್ ಕೂಡಿಗೆ ಅವರು ಮಾತನಾಡಿ ಸಾಲ ಕೊಳ್ಳುವಾಗ ಹೆಜ್ಜೇನು ಸವಿದಂತೆ, ಸಾಲ ನೀಡುವಾಗ ಹೆಜ್ಜೇನು ಕಡಿದಂತೆ, ಎಂದು ವಿವರಿಸಿದ್ದಾರೆ ಎಂದು ಹೇಳಿದರು.

    ಕುಲಾಲ ಕುಂಬಾರ ಸಂಘದ ಜಿಲ್ಲಾ ಅಧ್ಯಕ್ಷರಾದ ಕೆ.ಕುಶಾಲಪ್ಪ ಮೂಲ್ಯ ಅವರು ಮಾತನಾಡಿ ಕವಿ ಸರ್ವಜ್ಞ ಅವರು ಹಾವೇರಿ ಜಿಲ್ಲೆಯ ಹಿರೆಕೆರೂರು ತಾಲ್ಲೂಕು ಅಂಬಲೂರು ಗ್ರಾಮದಲ್ಲಿ ಜನಿಸಿ, ಕನ್ನಡ ಭಾಷೆಯಲ್ಲಿ ತ್ರಿಪದಿಗಳನ್ನು ರಚಿಸುವ ಮೂಲಕ ಎಲ್ಲರಿಗೂ ಅರ್ಥವಾಗುವಂತೆ ವಿವರಿಸಿದ್ದಾರೆ ಎಂದು ಹೇಳಿದರು.

    ಕುಲಾಲ/ಕುಂಬಾರ ಮಹಿಳಾ ಸಂಘದ ಅಧ್ಯಕ್ಷರಾದ ಕಾಂತಿಮಣಿ, ಚಂದ್ರಶೇಖರ್ ಕುಲಾಲ, ಗಿಡ್ಡಪ್ಪ, ಇತರರು ಇದ್ದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ ಸ್ವಾಗತಿಸಿದರು, ಕಲಾವತಿ ಮತ್ತು ತಂಡದವರು ನಾಡಗೀತೆ ಹಾಡಿದರು. ಸುಂಟಿಕೊಪ್ಪ ಪಿಡಿಒ ವಿ.ಜಿ.ಲೋಕೇಶ್ ನಿರೂಪಿಸಿ, ವಂದಿಸಿದರು.

    Previous Articleಹೊದವಾಡ: ನೂತನ ಅಂಗನವಾಡಿ ಕೇಂದ್ರಕಟ್ಟಡ ಉದ್ಘಾಟಿಸಿದ ಶಾಸಕ ಡಾ. ಮಂತರ್ ಗೌಡ
    Next Article ಮಡಿಕೇರಿ ನಗರದ ವಿವಿಧಡೆಯಲ್ಲಿ ಗುಂಡಿ ಮುಚ್ಚುವ ಕಾರ್ಯ

    Related Posts

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026

    ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!

    August 25, 2026

    ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    August 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026

    ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!

    August 25, 2026

    ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    August 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.