ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ ಐವರ ಬಂಧನ

ಎರಡು ಪ್ರತ್ಯೇಕ ಪ್ರಕರಣ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದಾಖಲು

ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತುಗಳ ಮಾರಾಟ- ಸರಬರಾಜು ಮಾಡುತ್ತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ.

 

ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ಕಚೇರಿ ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬಂದಿದ್ದು ನಿಷೇಧಿತ ಮಾದಕ ವಸ್ತುಗಳ ಮಾರಾಟ-ಸರಬರಾಜು ಬಳಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಿಗ್ಗಾಲು ಗ್ರಾಮದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಸೇವನೆ ಕುರಿತು ಖಚಿತ ಮಾಹಿತಿ ಮೇರೆಗೆ ಫೆಬ್ರವರಿ 18 ರಂದು ದಾಳಿ ನಡೆಸಿ ಇಬ್ಬರು ಆರೋಪಿಗಳು ಹಾಗೂ ಕಡಗದಾಳು ಗ್ರಾಮದಲ್ಲಿ ದಿನಾಂಕ 19 ರಂದು ದಾಳಿ ನಡೆಸಿ ಮೂವರು ಆರೋಪಿಗಳನ್ನು ನಿಷೇಧಿತ ಮಾದಕ ವಸ್ತುವಿನೊಂದಿಗೆ ದಸ್ತಗಿರಿ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗಿರುತ್ತದೆ…

ಸದರಿ ಆರೋಪಿಗಳ ವಿರುದ್ಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 20 (b), 22 NDPS act ಅಡಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ಘನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ.

 

ಆರೋಪಿಗಳ ವಿವರ:-

 

1-ಕಾರ್ತಿಕ್ 27 ವರ್ಷ ಕಿಗ್ಗಾಲು ಗ್ರಾಮ ಮಡಿಕೇರಿ,

2- ಹರ್ಷವರ್ಧನ್ ಎಚ್. ಡಿ 26 ವರ್ಷ ಬಲಮುರಿ ಗ್ರಾಮ ಮಡಿಕೇರಿ

3- ಸಾಜೀರ್ 39 ವರ್ಷ ನೀರುಕೊಲ್ಲಿ ಗ್ರಾಮ ಮಡಿಕೇರಿ

4- ಶಾರುಕ್ 28 ವರ್ಷ ನೀರುಕೊಲ್ಲಿ ಗ್ರಾಮ ಮಡಿಕೇರಿ

5- ನಿಯಾಸ್ 39 ವರ್ಷ ಇಬ್ಬಿವಳವಾಡಿ ಗ್ರಾಮ ಮಡಿಕೇರಿ

Exit mobile version