Close Menu
Kodagu News
    ಹೊಸ ಸುದ್ದಿ

    ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

    August 24, 2026

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026

    ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ

    August 23, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
    • ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ
    • ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
    • ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ
    • ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ
    • ಗೌಡ ಸಮಾಜಗಳ ಪ್ರಮುಖರಿಂದ ಶಾಸಕ ಪೊನ್ನಣ್ಣರಿಗೆ ಅಭಿನಂದನೆ
    • ಲಾರಿ ಡಿಕ್ಕಿ: ಟ್ಯಾಕ್ಸಿ ಚಾಲಕ ಸಾಹಿಲ್ ಸಾವು
    • ಮಡಿಕೇರಿ ದಸರಾಕ್ಕೆ ₹2 ಕೋಟಿ ಅನುದಾನ ಘೋಷಣೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ರಾಷ್ಟ್ರೀಯ ಹೆದ್ದಾರಿಯಲ್ಲಿ ರಕ್ಷಣಾ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದ ಭೂಮಿಪೂಜೆ
    ಜಿಲ್ಲೆ

    ರಾಷ್ಟ್ರೀಯ ಹೆದ್ದಾರಿಯಲ್ಲಿ ರಕ್ಷಣಾ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದ ಭೂಮಿಪೂಜೆ

    ರಾಷ್ಟ್ರೀಯ ಹೆದ್ದಾರಿಯಲ್ಲಿ ರಕ್ಷಣಾ ತಡೆಗೋಡೆ ನಿರ್ಮಾಣದ ಕಾಮಗಾರಿಗೆ

    ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದ ಭೂಮಿಪೂಜೆ

     

    ರಾಷ್ಟ್ರೀಯ ಹೆದ್ದಾರಿ 275 ರ ಇಬ್ಬನಿ ರೆಸಾರ್ಟ್ ಬಳಿಯಿಂದ ಸಂಪಾಜೆ ವರೆಗೆ 21 ಕಡೆಗಳಲ್ಲಿ ಸುಮಾರು 94 ಕೋಟಿ ರೂ. ವೆಚ್ಚದ ರಕ್ಷಣಾ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬುಧವಾರ ಭೂಮಿ ಪೂಜೆ ನೆರವೇರಿಸಿದರು.

    ಮಡಿಕೇರಿ ತಾಲ್ಲೂಕಿನ ಮದೆನಾಡು ಬಳಿಯ ಕರ್ತೋಜಿ ಬಳಿ ರಕ್ಷಣಾ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಸಂಸದರು ಸ್ಥಳೀಯರ ಬೇಡಿಕೆಯಂತೆ 21 ಕಡೆಗಳಲ್ಲಿ ರಕ್ಷಣಾ ತಡೆಗೋಡೆ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ರಕ್ಷಣಾ ತಡೆಗೋಡೆ ಕಾಮಗಾರಿಯು 18 ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಸಂಸದರು ತಿಳಿಸಿದರು.

    ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹಾಗೂ ಕೇಂದ್ರ ಭೂಸಾರಿಗೆ ಮಂತ್ರಾಲಯ ಸಚಿವರಾದ ನಿತಿನ್ ಗಡ್ಕರಿ ಅವರ ಪ್ರಯತ್ನದಿಂದ ರಾಷ್ಟ್ರದಲ್ಲಿ ಹೆದ್ದಾರಿಗಳು ಅಭಿವೃದ್ಧಿ ಹೊಂದುತ್ತಿವೆ ಎಂದು ಸಂಸದರು ಹೇಳಿದರು.

    ರಾಷ್ಟ್ರದ ರಾಜದಾನಿ ನವದೆಹಲಿ, ಮುಂಬೈ, ಬೆಂಗಳೂರು, ಚೆನೈ, ಕೊಲ್ಕತ್ತಾ ಮತ್ತಿತ್ತರ ಕಡೆಗಳಲ್ಲಿ ಸಂಪರ್ಕ ರಸ್ತೆಯನ್ನಾಗಿ ಸರ್ಕಾರ ಕೈಗೊಂಡಿದೆ. ಹಾಗೆಯೇ ರೈಲ್ವೆ ಯೋಜನೆಗಳನ್ನು ವಿದ್ಯುದ್ದೀಕರಣ ಮಾಡಿ ಅಭಿವೃದ್ಧಿಗೊಳಿಸಲಾಗಿದೆ ಎಂದು ತಿಳಿಸಿದರು.

    ರಾಷ್ಟ್ರದಲ್ಲಿ ಹಿಂದೆ ಕಡಿಮೆ ವಿಮಾನ ನಿಲ್ದಾಣಗಳು ಇದ್ದವು, ಈಗ 150 ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಅದರಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಸ್ಥಾಪಿಸಲಾಗಿದೆ. ಹೀಗೆ ಜಾಗತಿಕವಾಗಿ ರಾಷ್ಟ್ರ ಅಭಿವೃದ್ಧಿಯಲ್ಲಿ ಮೂರನೇ ಸ್ಥಾನ ಹೊಂದಿದೆ ಎಂದರು.

    ಕೇಂದ್ರ ಸರ್ಕಾರದಿಂದ ಹಲವು ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಯುವಜನರಿಗೆ ವೃತ್ತಿ ಕೌಶಲ್ಯ ತರಬೇತಿಯನ್ನು ನೀಡಿ, ಸ್ವ ಉದ್ಯೋಗ ಕೈಗೊಳ್ಳಲು ಹೆಚ್ಚಿನ ಒತ್ತು ನೀಡಲಾಗಿದೆ ಎಂದರು.

    ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಪರಿಸರ ಶುಚಿತ್ವಕ್ಕೆ ಒತ್ತು ನೀಡುವ ಮೂಲಕ ಶೌಚಾಲಯ ನಿರ್ಮಾಣ ಸೇರಿದಂತೆ ಹಲವು ಯೋಜನೆಗಳನ್ನು ರೂಪಿಸಿದೆ ಎಂದು ಲೋಕಸಭಾ ಸದಸ್ಯರು ವಿವರಿಸಿದರು.

    ಸರ್ಕಾರದಿಂದ ಕೊಡಗು ಜಿಲ್ಲೆಗೆ ಪರಿಸರ ಸಂರಕ್ಷಣೆ ಮತ್ತು ಪ್ರಾಕೃತಿಕ ಸಂಪತ್ತನ್ನು ಸಂರಕ್ಷಣೆ ಮಾಡುವಲ್ಲಿ ಹಲವು ಕಾರ್ಯಕ್ರಮಗಳನ್ನು ರೂಪಿಸಿದೆ. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸುವಂತಾಗಬೇಕು ಎಂದು ಹೇಳಿದರು.

    ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಂಸದರು ರಕ್ಷಣಾ ತಡೆಗೋಡೆ ನಿರ್ಮಾಣ ಸಂಬಂಧ ತಜ್ಞರು, ಇಲ್ಲಿನ ಸ್ಥಳೀಯ ಮಣ್ಣಿನ ಪರಿಸ್ಥಿತಿಯನ್ನು ಅವಲೋಕಿಸಿ ಯೋಜನೆ ರೂಪಿಸಿದ್ದು, ಆ ನಿಟ್ಟಿನಲ್ಲಿ ಕಾಮಗಾರಿ ನಡೆಯಲಿದೆ ಎಂದು ಪ್ರತಿಕ್ರಿಯಿಸಿದರು.

    ರಸ್ತೆ ತಿರುವುಗಳ ಅಗಲೀಕರಣ ಸಂಬಂಧಿಸಿದಂತೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಂಸದರು ಇದು ಕಷ್ಟಸಾಧ್ಯದ ಕೆಲಸವಾಗಿದ್ದು, ಪರಿಸರಕ್ಕೆ ಹಾನಿಯಾಗದಂತೆ ಮುಂದಿನ ಕ್ರಮವಹಿಸಲಾಗುವುದು ಎಂದರು.

    ಮಾಜಿ ಸಚಿವರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಮಾತನಾಡಿ ಸಂಸದರು ಕರಿಮೆಣಸಿಗೆ ಸೆಸ್ ಜಾರಿಗೊಳಿಸುವುದನ್ನು ತಡೆದಿದ್ದಾರೆ ಎಂದು ಶ್ಲಾಘಿಸಿದರು. ತಡೆಗೋಡೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅಗತ್ಯ ಸಹಕಾರ ನೀಡಿದೆ ಎಂದು ಹೇಳಿದರು.

    ವಿಧಾನ ಪರಿಷತ್ ಮಾಜಿ ಸದಸ್ಯರಾದ ಸುನಿಲ್ ಸುಬ್ರಮಣಿ, ಪ್ರಮುಖರಾದ ನಾಗೇಶ್ ಕುಂದಲ್ಪಾಡಿ, ರವಿ ಕುಶಾಲಪ್ಪ, ನಗರಸಭಾ ಅಧ್ಯಕ್ಷರಾದ ಪಿ.ಕಲಾವತಿ, ಉಪಾಧ್ಯಕ್ಷರಾದ ಮಹೇಶ್ ಜೈನಿ, ಪ್ರಮುಖರಾದ ಉಮೇಶ್ ಸುಬ್ರಮಣಿ, ಕಾಂಗೀರ ಸತೀಶ್, ಪಿ.ಎಂ.ರವಿ. ಗೌತಮ್, ಸಜಿಲ್ ಕೃಷ್ಣ, ಪುಷ್ಪ, ಧನಂಜಯ ಅಗೋಳಿಕಜೆ, ಬೆಳ್ಳಿಯನ ಚಂದ್ರಪ್ರಕಾಶ್, ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಜಿ.ಎಚ್.ಗಿರೀಶ್, ಸಹಾಯಕ ಎಂಜಿನಿಯರ್ ಹನುಮಂತ ಇತರರು ಇದ್ದರು.

    Previous Articleಮಾಲ್ದಾರೆ ಚೌಡಿಕಾಡು ಬಳಿ ದ್ವಿಚಕ್ರವಾನದ ಮೇಲೆ ಒಂಟಿ ಸಲಗ ದಾಳಿ -ಸವಾರರು ಅಪಾಯದಿಂದ ಪಾರು
    Next Article ಜೂನಿಯರ್ ಕಾಲೇಜು ಆವರಣದಲ್ಲಿ ಮಕ್ಕಳ ಸಂತೆ

    Related Posts

    ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

    August 24, 2026

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026

    ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ

    August 23, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

    August 24, 2026

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026

    ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ

    August 23, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.