ನಾಪೋಕ್ಲುವಿನ ಕಾಟಕೇರಿ ರಸ್ತೆಯಲ್ಲಿ ಬ್ರೇಕ್ ವಿಫಲಗೊಂಡ ಪರಿಣಾಮ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ

ನಾಪೋಕ್ಲು ಬ್ರೇಕ್ ವಿಫಲಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ಸೊಂದು ರಸ್ತೆ ಬದಿಯ ಚರಂಡಿಗೆ ಬಿದ್ದು ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಘಟನೆ ಕಾಟಕೇರಿ ಮಡಿಕೇರಿ ಮುಖ್ಯ ರಸ್ತೆಯಲ್ಲಿ ನಡೆದಿದೆ.

 

ಭಾನುವಾರ ಮಧ್ಯಾಹ್ನ ಎಮ್ಮೆ ಮಾಡುವಿನಿಂದ ನಾಪೋಕ್ಲು-ಬೆಟ್ಟಗೇರಿ ಕಾಟಕೇರಿ-ಮಡಿಕೇರಿ ಮಾರ್ಗವಾಗಿ ಮೈಸೂರಿಗೆ ತೆರಳುವ ಕೆಎಸ್ಆರ್ಟಿಸಿ ಬಸ್ ಕಾಟಕೇರಿ ಬಳಿಯ ರಸ್ತೆ ತಿರುವಿನಲ್ಲಿ ಬ್ರೇಕ್ ವಿಫಲಗೊಂಡು ಚಾಲಕರ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದು ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ನಿಂತಿದೆ

 

ಚಾಲಕನ ಸಮಯಪ್ರಜ್ಞೆಯಿಂದ ಬಾರಿಯ ಅನಾಹುತ ತಪ್ಪಿದೆ ಎಂದು ಬಸ್ಸಿನಲ್ಲಿದ್ದ ಪ್ರಯಾಣಿಕರು ಮಾಹಿತಿ ನೀಡಿದ್ದಾರೆ ಅವಘಡದಿಂದ ಬಸ್ಸಿನಲ್ಲಿದ್ದ ಮಹಿಳೆಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ

 

ಬಳಿಕ ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಮಂಗಳೂರು ಕಡೆಯಿಂದ ಬರುವ ಸಾರಿಗೆ ಬಸ್ಸಿನಲ್ಲಿ ಸಂಚರಿಸುವ ವ್ಯವಸ್ಥೆ ಬಸ್ಸಿನ ನಿರ್ವಾಹಕ ಕಲ್ಪಿಸಿದ್ದಾರೆ

Exit mobile version