2₹ ಕೋಟಿ ವೆಚ್ಚದಲ್ಲಿ ಚೆಕ್ ಡ್ಯಾಮ್ ನಿರ್ಮಿಸುವ ಕಾಮಗಾರಿಗೆ ಶಾಸಕ ಎ. ಎಸ್ ಪೊನ್ನಣ್ಣನಿಂದ ಭೂಮಿ ಪೂಜೆ
ವಿರಾಜಪೇಟೆ ತಾಲೂಕು ಕಣ್ಣಂಗಾಲ ಗ್ರಾಮಕ್ಕೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಇಲ್ಲಿಯ ಕುಮ್ಮೆ ಹೊಳಗೆ ಚೆಕ್ ಡ್ಯಾಮ್ ನಿರ್ವಹಿಸುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಭೂಮಿ ಪೂಜೆ ನೆರವೇರಿಸಿದ ಬಳಿಕ ಮಾತನಾಡಿದ ಮಾನ್ಯ ಶಾಸಕರು ಈ ಕಾಮಗಾರಿಯು ₹ 2 ಕೋಟಿ ವೆಚ್ಚದಲ್ಲಿ ನಡೆಯಲಿದ್ದು, ಸಣ್ಣ ನೀರಾವರಿ ಇಲಾಖೆ ಮೂಲಕ ನಡೆಯುವ ಈ ಕಾಮಗಾರಿಯಿಂದಾಗಿ ಸುತ್ತಮುತ್ತಲಿನ ಜಮೀನಿಗೆ ನೀರಾವರಿ ಸೌಲಭ್ಯ ಒದಗುವುದರೊಂದಿಗೆ ಅಂತರ್ಜಲ ಸಹ ವೃದ್ಧಿಯಾಗಲಿದೆ ಎಂದು ತಿಳಿಸಿದರು. ಕಾಮಗಾರಿಯನ್ನು ಅತ್ಯಂತ ಗುಣಮಟ್ಟದಲ್ಲಿ ಹಾಗೂ ಅತಿ ಶೀಘ್ರವಾಗಿ ನಿರ್ವಹಿಸಬೇಕೆಂದು ಇದೇ ಸಂದರ್ಭದಲ್ಲಿ ಸ್ಥಳದಲ್ಲಿ ಉಪಸ್ಥಿತರಿದ್ದ ಗುತ್ತಿಗೆದಾರರಿಗೆ ಶಾಸಕರು ಸೂಚಿಸಿದರು.
ಬಳಿಕ ಇಲ್ಲಿಯ ಚಾಮುಂಡಿ ಪೈಸಾರಿಗೆ ಭೇಟಿ ನೀಡಿದ ಮಾನ್ಯ ಶಾಸಕರು, ತಮ್ಮ ಅನುದಾನದ ₹15 ಲಕ್ಷಗಳಲ್ಲಿ ನಿರ್ಮಿಸಿದ ರಸ್ತೆಯನ್ನು ಸಾರ್ವಜನಿಕರ ಬಳಕೆಗಾಗಿ ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ವಲಯ ಅಧ್ಯಕ್ಷರಾದ ಮಚ್ಚಾರಂಡ ಕಿರಣ್, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ಹನೀಫ್, ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ರಫೀಕ್, ಅಂದಾಯಿ, ಕುಂಡಚ್ಚಿರ ಮಂಜು ದೇವಯ್ಯ, ಇಟೀರ ಭವಿನ್, ಮಂಜುನಾಥ್, ಕಾಂಗ್ರೆಸ್ ಮುಖಂಡರಾದ ಚೆoಬಂಡ ಡಿಲ್ಲು ನಾಣಯ್ಯ, ಬೇರೆರ ಕಿರಣ್ ಶಿವಪ್ಪ, ಮಚ್ಚಾರಂಡ ವನಿತಾ ಗಣಪತಿ,ಸ್ಥಳೀಯರಾದ ಬೊಪ್ಪಂಡ ಜಗ ಬೆಳ್ಳಿಯಪ್ಪ, ಪುಟ್ಟಿಚ್ಚoಡ ವಿಜು ಕಾಳಪ್ಪ,ಗಣೇಶ್ ಟಿ ವಿ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.



