Close Menu
Kodagu News
    ಹೊಸ ಸುದ್ದಿ

    ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ

    August 24, 2026

    ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

    August 24, 2026

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    • ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
    • ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ
    • ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
    • ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ
    • ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ
    • ಗೌಡ ಸಮಾಜಗಳ ಪ್ರಮುಖರಿಂದ ಶಾಸಕ ಪೊನ್ನಣ್ಣರಿಗೆ ಅಭಿನಂದನೆ
    • ಲಾರಿ ಡಿಕ್ಕಿ: ಟ್ಯಾಕ್ಸಿ ಚಾಲಕ ಸಾಹಿಲ್ ಸಾವು
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»‘ವಿಶ್ವ ಶ್ರವಣ ದಿನ’ ಪ್ರಯುಕ್ತ ಬೀದಿ ನಾಟಕ ಮೂಲಕ ಜಾಗೃತಿ ಜಾಥ ಶ್ರವಣ ಪ್ರತಿಯೊಬ್ಬರ ಮಹತ್ವದ ಅಂಗ: ತಜ್ಞ ವೈದ್ಯರ ಅಭಿಮತ
    ಜಿಲ್ಲೆ

    ‘ವಿಶ್ವ ಶ್ರವಣ ದಿನ’ ಪ್ರಯುಕ್ತ ಬೀದಿ ನಾಟಕ ಮೂಲಕ ಜಾಗೃತಿ ಜಾಥ ಶ್ರವಣ ಪ್ರತಿಯೊಬ್ಬರ ಮಹತ್ವದ ಅಂಗ: ತಜ್ಞ ವೈದ್ಯರ ಅಭಿಮತ

    ‘ವಿಶ್ವ ಶ್ರವಣ ದಿನ’ ಪ್ರಯುಕ್ತ ಬೀದಿ ನಾಟಕ ಮೂಲಕ ಜಾಗೃತಿ ಜಾಥ

    ಶ್ರವಣ ಪ್ರತಿಯೊಬ್ಬರ ಮಹತ್ವದ ಅಂಗ: ತಜ್ಞ ವೈದ್ಯರ ಅಭಿಮತ

     

    ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಬೋಧಕ ಆಸ್ಪತ್ರೆಯ ಕಿವಿ, ಮೂಗು ಮತ್ತು ಗಂಟಲು ವಿಭಾಗ ವತಿಯಿಂದ ‘ವಿಶ್ವ ಶ್ರವಣ ದಿನ’ ಪ್ರಯುಕ್ತ ಮಂಗಳವಾರ ಸಂಸ್ಥೆಯ ಎರಡನೇ ವರ್ಷದ ಪದವಿ ವೈದ್ಯಕೀಯ ವಿದ್ಯಾರ್ಥಿಗಳಿಂದ ನಗರದ ರಾಜಾಸೀಟು ಉದ್ಯಾನವನ ಆವರಣದಲ್ಲಿ ಶ್ರವಣದ ಮಹತ್ವ ಕುರಿತು ಬೀದಿನಾಟಕ ಮೂಲಕ ಜಾಗೃತಿ ಮತ್ತು ಜಾಥ ಕಾರ್ಯಕ್ರಮ ನಡೆಯಿತು.

    ಕೇಳಿ ಕೇಳಿ ಜನರೇ, ಪ್ರತಿಯೊಬ್ಬರ ಶ್ರವಣ ಅದರಲ್ಲೂ ಮಕ್ಕಳ ಶ್ರವಣ ಉತ್ತಮ ರೀತಿಯಲ್ಲಿ ಇರುವಂತೆ ನೋಡಿಕೊಳ್ಳುವುದು ಅತ್ಯಗತ್ಯ. ಆ ನಿಟ್ಟಿನಲ್ಲಿ ತಜ್ಞ ವೈದ್ಯರನ್ನು ಭೇಟಿ ಮಾಡಿ, ಕಾಲ ಕಾಲಕ್ಕೆ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳುವಂತೆ ಬೀದಿನಾಟಕ ಪ್ರದರ್ಶನ ಮೂಲಕ ಜಾಗೃತಿ ಮೂಡಿಸಿದರು.

    ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಹೆಚ್ಚಿನದ್ದಾಗಿದೆ. ಆ ದಿಸೆಯಲ್ಲಿ ಕಿವಿಗೆ ಯಾವುದೇ ವಸ್ತುವನ್ನು ಬಳಸಬಾರದು. ಮಕ್ಕಳಲ್ಲಿ ಕಿವಿ ಸ್ಪಷ್ಟವಾಗಿ ಕೇಳುತ್ತಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು. ಶ್ರವಣ ದೋಷ ಇದ್ದಲ್ಲಿ ಹತ್ತಿರದ ತಜ್ಞ ವೈದ್ಯರನ್ನು ಭೇಟಿ ಮಾಡಿ ಪರೀಕ್ಷಿಸಬೇಕು. ಸೂಕ್ಷ್ಮ ಭಾಗವಾದ ಕಿವಿಗೆ ಯಾವುದೇ ರೀತಿಯ ವಸ್ತುಗಳನ್ನು ಬಳಸಬಾರದು. ತಜ್ಞ ವೈದ್ಯರನ್ನೇ ಸಂಪರ್ಕಿಸಿ ಪರೀಕ್ಷಿಸಿಕೊಳ್ಳಬೇಕು ಎಂದು ವೈದ್ಯಕೀಯ ವಿದ್ಯಾರ್ಥಿಗಳ ತಂಡದವರು ಬೀದಿ ನಾಟಕ ಮೂಲಕ ಗಮನ ಸೆಳೆದರು.

    ಈ ಸಂದರ್ಭದಲ್ಲಿ ಜಾಗೃತಿ ಜಾಥಾಗೆ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಎ.ಜೆ.ಲೋಕೇಶ್ ಅವರು ಚಾಲನೆ ನೀಡಿದರು.

    ಜಾಥವು ರಾಜಾಸೀಟು ರಸ್ತೆ ಮೂಲಕ ನಗರದ ಮಂಗೇರಿರ ಮುತ್ತಣ್ಣ ವೃತ್ತ, ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದ ಮೂಲಕ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬೋಧಕ ಆಸ್ಪತ್ರೆ ತಲುಪಿತು.

    ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಡಾ.ಎ.ಜೆ.ಲೋಕೇಶ್ ಅವರು ಕಿವಿ ಸಂಬಂಧಿತ ತೊಂದರೆಗಳಿಗೆ ಶೀಘ್ರ ಚಿಕಿತ್ಸೆ ಪಡೆಯುವ ಅಗತ್ಯತೆ ಹಾಗೂ ಹೆಚ್ಚು ಶಬ್ದದ ಮಟ್ಟದಲ್ಲಿ ಇಯರ್ ಪೋನ್ ಬಳಕೆಯನ್ನು ತಪ್ಪಿಸುವ ಕುರಿತು ಸಲಹೆ ನೀಡಿದರು.

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಜಿಲ್ಲಾ ಮಟ್ಟದಲ್ಲಿ ಶ್ರವಣ ತಪಾಸಣೆ ಕಾರ್ಯಕ್ರಮಗಳ ಅಗತ್ಯತೆಯನ್ನು ಒತ್ತಿ ಹೇಳಿದರು.

    ‘6 ವರ್ಷದೊಳಗಿನ ಮಕ್ಕಳಲ್ಲಿ ಶ್ರವಣದೋಷ ಉಂಟಾದಲ್ಲಿ ಅಗತ್ಯ ಶಸ್ತ್ರ ಚಿಕಿತ್ಸೆಯನ್ನು ಮಾಡಿಸಬಹುದಾಗಿದೆ. ಸುಮಾರು 8 ಲಕ್ಷ ರೂ. ವೆಚ್ಚವಾಗಲಿದ್ದು, ಸರ್ಕಾರವೇ ಭರಿಸಲಿದೆ ಎಂದು ಹೇಳಿದರು.’

    ಈಗಾಗಲೇ ಜಿಲ್ಲೆಯಲ್ಲಿ ಒಂದು ಮಗುವಿಗೆ ಸರ್ಜರಿಯಾಗಿದ್ದು, ಇನ್ನೊಂದು ಮಗುವನ್ನು ಗುರುತಿಸಲಾಗಿದೆ ಎಂದು ಡಾ.ಸತೀಶ್ ಕುಮಾರ್ ಅವರು ಮಾಹಿತಿ ನೀಡಿದರು.

    ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ ಅವರು ಪ್ರತಿದಿನ ನಡೆಯುತ್ತಿರುವ ನವಜಾತ ಶಿಶುಗಳ ಶ್ರವಣ ತಪಾಸಣೆ, ಶೀಘ್ರ ಪತ್ತೆ ಮತ್ತು ಪುನರ್ವಸತಿಯ ಮಹತ್ವ ವಿವರಿಸಿದರು.

    ಶ್ರವಣ ಬಗ್ಗೆ ತಿಳಿದವರೇ ತಪ್ಪು ಮಾಡುತ್ತಿದ್ದಾರೆ. ಹುಟ್ಟಿದ ಎಲ್ಲಾ ಮಕ್ಕಳಿಗೂ ಶ್ರವಣ ಪರೀಕ್ಷೆ ಮಾಡಬೇಕು. ಶ್ರವಣ ದೋಷ ಉಂಟಾದಲ್ಲಿ ಇಡೀ ಕುಟುಂಬವೇ ಪರಿತಪಿಸಬೇಕಾಗುತ್ತದೆ. ಇದರಿಂದ ಸಮಾಜಕ್ಕೂ ನಷ್ಟ, ಆದ್ದರಿಂದ ಶ್ರವಣ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.

    ಸ್ಥಾನಿಕ ವೈದ್ಯಾಧಿಕಾರಿ ಡಾ.ಅಭಿನಂದನ್ ಅವರು ಮಾತನಾಡಿ ಪ್ರತಿಯೊಬ್ಬರ ಸಮೂಹ ಸಂವಹನಕ್ಕೆ ಶ್ರವಣ ಅತೀ ಮುಖ್ಯ ಅಂಗವಾಗಿದೆ. ಆದ್ದರಿಂದ ಈ ಬಗ್ಗೆ ಉದಾಸೀನ ಮಾಡದೆ ತಜ್ಞ ವೈದ್ಯರಿಂದ ಪರೀಕ್ಷಿಸಿ ಕೊಳ್ಳಬೇಕು ಎಂದರು.

    ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಿವಿ, ಮೂಗು ಮತ್ತು ಗಂಟಲು ವಿಭಾಗದ ಮುಖ್ಯಸ್ಥರಾದ ಡಾ.ಶ್ವೇತಾ ಅವರು ಶ್ರವಣ ಆರೋಗ್ಯವು ಸಮಗ್ರ ಆರೋಗ್ಯದ ಅವಿಭಾಜ್ಯ ಅಂಗವಾಗಿದ್ದು, ಶ್ರವಣ ದೋಷ ತಡೆಗಟ್ಟುವಿಕೆ, ಶೀಘ್ರ ತಪಾಸಣೆ ಹಾಗೂ ಸಮುದಾಯ ಜಾಗೃತಿಯ ಮೂಲಕ ಅದನ್ನು ಉತ್ತೇಜಿಸಬೇಕೆಂದು ತಿಳಿಸಿದರು.

    “ಆರೋಗ್ಯವೇ ಮಹಾ ಸಂಪತ್ತು” ಎಂದು ಹೇಳಿ, ವೈದ್ಯರು ಹಾಗೂ ವಿದ್ಯಾರ್ಥಿಗಳು ರೋಗ ಚಿಕಿತ್ಸೆಯ ಜೊತೆಗೆ ಆರೋಗ್ಯ ಪೆÇ್ರೀತ್ಸಾಹಕ್ಕೂ ಸಮಾನ ಮಹತ್ವ ನೀಡಬೇಕು ಎಂದು ಕರೆ ನೀಡಿದರು.

    ‘ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡಾ.ಪೂಜಾ ಅವರು ಮಾತನಾಡಿ ಶ್ರವಣವು ಕೇವಲ ಒಂದು ಇಂದ್ರಿಯವಲ್ಲ, ಅದು ಮಗುವಿನ ಭವಿಷ್ಯದ ಬಾಗಿಲು ಎಂದರು.

    ಮಗು ಸ್ಪಷ್ಟವಾಗಿ ಕೇಳಿಸಿಕೊಂಡಾಗ ಅದು ಆತ್ಮವಿಶ್ವಾಸದಿಂದ ಮಾತನಾಡುತ್ತದೆ. ಸ್ಪಷ್ಟವಾಗಿ ಕಲಿಯುತ್ತದೆ. ಹಾಗೆಯೇ ಸ್ವಪ್ನಗಳನ್ನು ದೊಡ್ಡದಾಗಿ ಕಾಣುತ್ತದೆ ಎಂದು ಅಭಿಪ್ರಾಯಪಟ್ಟರು.’

    ಸಮುದಾಯದಿಂದ ಶಾಲೆವರೆಗೆ, ಆಸ್ಪತ್ರೆಯಿಂದ ಮನೆ ವರೆಗೆ ಎಲ್ಲರೂ ಒಂದೇ ಸರಪಳಿಯ ಕೊಂಡಿಗಳು. ಆ ಸರಪಳಿಯಲ್ಲಿ ಒಂದು ಕೊಂಡಿ ದುರ್ಬಲವಾದರೂ ಮಗುವಿನ ಭವಿಷ್ಯ ಹಿನ್ನೆಡೆಯಾಗಬಹುದು. ಆದ್ದರಿಂದ ಶ್ರವಣ ಬಗ್ಗೆ ಎಚ್ಚರವಹಿಸಬೇಕು ಎಂದು ಡಾ.ಪೂಜಾ ಅವರು ಒತ್ತಿ ಹೇಳಿದರು.

    ಜಾಗೃತಿ ಅಭಿಯಾನದ ಭಾಗವಾಗಿ ಆಯೋಜಿಸಲಾದ ಪೆÇೀಸ್ಟರ್ ಹಾಗೂ ಮೀಮ್ಸ್ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಮುದಾಯದಲ್ಲಿ ಕಿವಿ ಆರೈಕೆಗೆ ಆದ್ಯತೆ ನೀಡುವ ಬಗ್ಗೆ ಪರಿಣಾಮಕಾರಿಯಾಗಿ ಮಾಹಿತಿ ನೀಡಲಾಯಿತು.

    ಶ್ರವಣ ಶಕ್ತಿ ದೋಷ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ.ಸನತ್ ಕುಮಾರ್, ಡಾ.ಸಾತ್ಯಕಿ, ಡಾ.ನಳಿನ, ಡಾ.ಶರತ್ ಕುಮಾರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಡಾ.ಮೆರಿನ್ ನಿರೂಪಿಸಿದರು, ವಂದಿಸಿದರು.

    ಮತ್ತಷ್ಟು ಮಾಹಿತಿ: ಮಂಗಳವಾರ ನಡೆದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಯ ಕಿವಿ-ಮೂಗು-ಮತ್ತು ಗಂಟಲು ವಿಭಾಗದ ವತಿಯಿಂದ ವಿಶ್ವ ಶ್ರವಣ ದಿನವನ್ನು ಉತ್ಸಾಹಭರಿತವಾಗಿ ಆಚರಿಸಲಾಯಿತು.

    ಶ್ರವಣ ಆರೋಗ್ಯದ ಮಹತ್ವ ಹಾಗೂ ಶ್ರವಣ ನಷ್ಟದ ತಡೆಗಟ್ಟುವಿಕೆ ಮತ್ತು ಶೀಘ್ರ ಪತ್ತೆಯ ಅಗತ್ಯತೆ ಕುರಿತು ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಉದ್ದೇಶವಾಗಿತ್ತು. ಈ ವರ್ಷದ ವಿಷಯ “ಸಮುದಾಯಗಳಿಂದ ತರಗತಿಗಳವರೆಗೆ ಪ್ರತಿಯೊಂದು ಮಗುವಿಗೂ ಶ್ರವಣ ಆರೈಕೆ” ಎಂಬುದಾಗಿದ್ದು, ಮಕ್ಕಳಲ್ಲಿ ಶ್ರವಣ ಆರೈಕೆಯ ಮಹತ್ವವನ್ನು ಒತ್ತಿ ಹೇಳುತ್ತದೆ.

    ನಗರದ ರಾಜಾಶೀಟು ಉದ್ಯಾನವನ ಬಳಿ ನಡೆದ ಬೀದಿ ನಾಟಕದೊಂದಿಗೆ ಪ್ರಾರಂಭವಾಯಿತು. ಕಿವಿ ಆರೋಗ್ಯದ ನಿರ್ಲಕ್ಷ್ಯ, ಹೆಚ್ಚು ಶಬ್ದದ ಮಟ್ಟದಲ್ಲಿ ಇಯರ್ ಫೆÇೀನ್‍ಗಳ ಬಳಕೆ ಹಾಗೂ ಸಮಯಕ್ಕೆ ಸರಿಯಾದ ವೈದ್ಯಕೀಯ ಚಿಕಿತ್ಸೆ ಪಡೆಯುವ ಅಗತ್ಯತೆಯನ್ನು ನಾಟಕದ ಮೂಲಕ ಪರಿಣಾಮಕಾರಿಯಾಗಿ ತಿಳಿಸಲಾಯಿತು. ಈ ಬೀದಿ ನಾಟಕ ಪ್ರವಾಸಿಗರು ಮತ್ತು ಸ್ಥಳೀಯರ ಗಮನ ಸೆಳೆದು, ಶ್ರವಣ ಆರೈಕೆಯ ಸಂದೇಶವನ್ನು ಸಮರ್ಪಕವಾಗಿ ಹರಡಿತು.

    Previous Articleಸೋಮವಾರಪೇಟೆ:-ತೋಳೂರುಶೆಟ್ಟಳ್ಳಿಯಲ್ಲಿ ಅಗ್ನಿ ಅವಘಡ ಮಾಜಿ ಸಿಆರ್ಪಿಎಫ್ ಯೋಧ ಸಾವು
    Next Article ಇಂಡೋ ಜಪಾನ್ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಂಡ ಉದ್ಯಮಿ ನಾಪಂಡ ಮುದ್ದಪ್ಪ

    Related Posts

    ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ

    August 24, 2026

    ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

    August 24, 2026

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ

    August 24, 2026

    ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

    August 24, 2026

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.