ಹುಣ್ಣಿಮೆಯ ಅಂಗವಾಗಿ ಧರ್ಮಸ್ಥಳ ಸಂಘದಿಂದ ನಾಪೋಕ್ಲುವಿನಲ್ಲಿ ಜೀವನದಿ ಕಾವೇರಿಗೆ ಮಹಾಆರತಿ ಕಾರ್ಯಕ್ರಮ

ವರದಿ:ಝಕರಿಯ ನಾಪೋಕ್ಲು

 

ನಾಪೋಕ್ಲು : ಹುಣ್ಣಿಮೆಯ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘ ಹಾಗೂ ಶೌರ್ಯ ತಂಡದ ವತಿಯಿಂದ ನಾಪೋಕ್ಲುವಿನಲ್ಲಿ ಜೀವನದಿ ಕಾವೇರಿಗೆ ಮಹಾ ಆರತಿಯನ್ನು ಅರ್ಪಿಸುವ ಕಾರ್ಯಕ್ರಮ ನಡೆಸಲಾಯಿತು.

 

ನಾಪೋಕ್ಲು ಸಮೀಪದ ಕೊಟ್ಟಮುಡಿ ಸೇತುವೆ ಬಳಿಯ ಕಾವೇರಿ ನದಿ ತಟದಲ್ಲಿ ಆರತಿ ಬೆಳಗಿ ಪ್ರಾರ್ಥನೆ ಸಲ್ಲಿಸಲಾಯಿತು.

 

ಆಯೋಜಿತ ಕಾರ್ಯಕ್ರಮ ದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದ ನಾಪೋಕ್ಲು ಸುಭಾಷ್ ನಗರ ಒಕ್ಕೂಟದ ಸೇವಾ ಪ್ರತಿನಿಧಿ ಉಮಾಲಕ್ಷ್ಮೀ,ಸಂಜೀವಿನಿ ಒಕ್ಕೂಟದ ಎಂಬಿಕೆ ಯಮುನಾ,ನಾಪೋಕ್ಲು ಶೌರ್ಯ ತಂಡದ ಸದಸ್ಯರಾದ ಶರವಣ, ದಿಲೀಶ್, ನಾರಾಯಣ, ನವಜೀವನ ಸಮಿತಿ ಸದಸ್ಯ ಬಾಲಸುಬ್ರಮಣಿ ಹಾಗೂ ರಾಜೇಶ್ವರಿ, ರೋಜಾ ಪಾಲ್ಗೊಂಡಿದ್ದರು.

Exit mobile version