ಪೊನ್ನಂಪೇಟೆ ತಾಲೂಕಿನ ಬಾಳಲೆ ಭಾಗದ ಪ್ರವಾಸದಲ್ಲಿರುವ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿದರು.

ಬಾಳಲೆ ಪಂಚಾಯಿತಿ ಸಭಾಂಗಣದಲ್ಲಿ ಜನ ಸಂಪರ್ಕ ಸಭೆಯನ್ನು ಆಯೋಜಿಸಲಾಗಿತ್ತು. ಶಾಸಕರು ಅಧ್ಯಕ್ಷತೆ ವಹಿಸಿದ ಈ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಭಾಗವಹಿಸಿದರು.

ಸಾರ್ವಜನಿಕರು ತಮ್ಮ ಅನೇಕ ಸಮಸ್ಯೆಗಳನ್ನು ಶಾಸಕರಲ್ಲಿ ಈ ಸಂದರ್ಭ ಮನವರಿಕೆ ಮಾಡಿ ಕೊಟ್ಟರು. ಹಂತ ಹಂತವಾಗಿ ಎಲ್ಲರ ಸಮಸ್ಯೆಗಳನ್ನು ಕೂಲಂಕುಶವಾಗಿ ಆಲಿಸಿ, ಪರಿಶೀಲಿಸಿದ ಮಾನ್ಯ ಶಾಸಕರು, ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸುವಂತೆ ಅಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಮುಖವಾಗಿ ಕಂದಾಯ, ರಸ್ತೆ, ಅರಣ್ಯ ಹಾಗೂ ಇತರ ದೈನಂದಿನ ಸಮಸ್ಯೆಗಳ ಬಗ್ಗೆ ಮಾನ್ಯ ಶಾಸಕರಿಗೆ ಮನವಿಗಳು ಬಂದಿದ್ದು, ಎಲ್ಲವನ್ನೂ ಪರಿಗಣಿಸಿ ಶೀಘ್ರದಲ್ಲೇ ಜನರಿಗೆ ಅನುಕೂಲ ಆಗುವಂತೆ ಕೆಲಸ ಮಾಡಬೇಕೆಂದು ಅಧಿಕಾರಿಗಳಿಗೆ ಮಾನ್ಯ ಶಾಸಕರು ಖಡಕ್ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಪ್ರವೀಣ್, ತಾಲೂಕು ಇ ಒ ಅಪ್ಪಣ್ಣ, ತಾಲೂಕು ಬಗರ್ ಹುಕುಂ ಅಧ್ಯಕ್ಷರು ಲಾಲಾ ಅಪ್ಪಣ್ಣ, ಎಲ್ಲಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Exit mobile version