Close Menu
Kodagu News
    ಹೊಸ ಸುದ್ದಿ

    ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ

    August 23, 2026

    ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ

    August 22, 2026

    ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ

    August 22, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
    • ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ
    • ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ
    • ಗೌಡ ಸಮಾಜಗಳ ಪ್ರಮುಖರಿಂದ ಶಾಸಕ ಪೊನ್ನಣ್ಣರಿಗೆ ಅಭಿನಂದನೆ
    • ಲಾರಿ ಡಿಕ್ಕಿ: ಟ್ಯಾಕ್ಸಿ ಚಾಲಕ ಸಾಹಿಲ್ ಸಾವು
    • ಮಡಿಕೇರಿ ದಸರಾಕ್ಕೆ ₹2 ಕೋಟಿ ಅನುದಾನ ಘೋಷಣೆ
    • ರಾಜ್ಯಪಾಲರನ್ನು ಭೇಟಿ ಮಾಡಿದ ಶಾಸಕ ಪೊನ್ನಣ್ಣ: KPSC ಆರೋಪಗಳ ಕುರಿತು ವಿಸ್ತೃತ ಚರ್ಚೆ
    • ಮೌಲ್ಯಾಧಾರಿತ ಛಾಯಾಚಿತ್ರದ ಕಡೆ ಗಮನ ಹರಿಸಿ: ಡಾ. ನರಸಿಂಹನ್
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಕಕ್ಕಬ್ಬೆ ನಾಲಡಿ ಸರ್ಕಾರಿ ಶಾಲೆಯಲ್ಲಿ ಅರಣ್ಯ ಇಲಾಖೆಯಿಂದ ಅರಣ್ಯ ರಕ್ಷಣೆ ಮತ್ತು ಕಾಡ್ಗಿಚ್ಚಿನ ಕುರಿತು ಜಾಗೃತಿ ಕಾರ್ಯಕ್ರಮ – ಅರಣ್ಯ ರಕ್ಷಣೆ ಎಲ್ಲರ ಜವಾಬ್ದಾರಿ -ಈರಣ್ಣ ತೇಲಿ ಸಲಹೆ
    ಜಿಲ್ಲೆ

    ಕಕ್ಕಬ್ಬೆ ನಾಲಡಿ ಸರ್ಕಾರಿ ಶಾಲೆಯಲ್ಲಿ ಅರಣ್ಯ ಇಲಾಖೆಯಿಂದ ಅರಣ್ಯ ರಕ್ಷಣೆ ಮತ್ತು ಕಾಡ್ಗಿಚ್ಚಿನ ಕುರಿತು ಜಾಗೃತಿ ಕಾರ್ಯಕ್ರಮ – ಅರಣ್ಯ ರಕ್ಷಣೆ ಎಲ್ಲರ ಜವಾಬ್ದಾರಿ -ಈರಣ್ಣ ತೇಲಿ ಸಲಹೆ

    ಕಕ್ಕಬ್ಬೆ ನಾಲಡಿ ಸರ್ಕಾರಿ ಶಾಲೆಯಲ್ಲಿ ಅರಣ್ಯ ಇಲಾಖೆಯಿಂದ ಅರಣ್ಯ ರಕ್ಷಣೆ ಮತ್ತು ಕಾಡ್ಗಿಚ್ಚಿನ ಕುರಿತು ಜಾಗೃತಿ ಕಾರ್ಯಕ್ರಮ – ಅರಣ್ಯ ರಕ್ಷಣೆ ಎಲ್ಲರ ಜವಾಬ್ದಾರಿ -ಈರಣ್ಣ ತೇಲಿ ಸಲಹೆ

    ವರದಿ:ಝಕರಿಯ ನಾಪೋಕ್ಲು

     

    ನಾಪೋಕ್ಲು :ನಾಪೋಕ್ಲು ಬಳಿಯ ಕಕ್ಕಬ್ಬೆ ನಾಲಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿರಾಜಪೇಟೆ ಮುಂಡ್ರೋಟು ವಲಯ ಅರಣ್ಯ ಇಲಾಖೆ ವತಿಯಿಂದ ಆಯೋಜಿಸಲಾದ ಕಾಡ್ಗಿಚ್ಚಿನಿಂದ ಅರಣ್ಯ ಸಂರಕ್ಷಣೆಯ ಕುರಿತು ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

     

    ಕಾರ್ಯಕ್ರಮದಲ್ಲಿ ಬಿರಾಜಪೇಟೆ ವಿಭಾಗದ ವಲಯ ಅರಣ್ಯ ಗಸ್ತು ಪಾಲಕ ಈರಣ್ಣ ತೇಲಿ ಅವರು ಕಾಡ್ಗಿಚ್ಚಿನಿಂದ ಅರಣ್ಯ ಸಂರಕ್ಷಣೆಯ ಕುರಿತು ಮಾತನಾಡಿ ನಿಸರ್ಗವು ನಮಗೆ ತಾಯಿ ಇದ್ದಂತೆ ಅದನ್ನು ರಕ್ಷಿಸುವುದು ನಮ್ಮ ಧರ್ಮ, ತಾಯಿ ತನ್ನ ಮಗುವನ್ನು ಹೇಗೆ ಪ್ರೀತಿಯಿಂದ ಪೋಷಿಸುತ್ತಾಳೋ ಹಾಗೆ ಈ ಪ್ರಕೃತಿ ನಮಗೆ ಆಮ್ಲಜನಕ ನೀರು ಮತ್ತು ಆಹಾರವನ್ನು ನೀಡಿ ಸಲಹುತ್ತಿದೆ. ಅರಣ್ಯಗಳ ಸಂರಕ್ಷಣೆ ಬಹಳ ಮುಖ್ಯ. ಅರಣ್ಯಗಳು ಭೂಮಿಯ ಸ್ವಾಶಕೋಶಗಳು, ಮರಗಳಿಲ್ಲದಿದ್ದರೆ ನಾವು ಉಸಿರಾಡುವ ಗಾಳಿ ವಿಷವಾಗುತ್ತದೆ. ಅರಣ್ಯಗಳು ಮಳೆಯನ್ನು ತರಿಸುತ್ತದೆ ಮತ್ತು ಸಾವಿರಾರು ವನ್ಯಜೀವಿಗಳಿಗೆ ಸುಂದರ ಆಶ್ರಯ ನೀಡುತ್ತದೆ. ಆದರೆ ಇಂದು ನಮ್ಮ ಸ್ವಾರ್ಥಕ್ಕಾಗಿ ನಾವು ಕಾಡುಗಳನ್ನು ನಾಶ ಮಾಡುತ್ತಿದ್ದೇವೆ. ಅರಣ್ಯಗಳ ರಕ್ಷಣೆ ಇಲಾಖೆಯಿಂದ ಮಾತ್ರವಲ್ಲ ಎಲ್ಲರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ ಎಂದರು.

     

    ಅರಣ್ಯಗಳ ನಾಶಕ್ಕೆ ಕೇವಲ ಕೊಡಲಿ ಮಾತ್ರ ಕಾರಣವಲ್ಲ ಬದಲಾಗಿ ಕಾಡ್ಗಿಚ್ಚು ಎಂಬ ಮಹಾಮಾರಿ ಕೂಡ ಒಂದು ದೊಡ್ಡ ಕಾರಣವಾಗಿದೆ. ಮಾನವನ ಸಣ್ಣ ನಿರ್ಲಕ್ಷ್ಯದಿಂದ ಕಾಡಿಗೆ ಬೆಂಕಿ ಬಿದ್ದಾಗ ಕ್ಷಣಾರ್ಧದಲ್ಲಿ ಸಾವಿರಾರು ಎಕರೆ ಅರಣ್ಯ ಭಸ್ಮವಾಗುತ್ತದೆ. ಒಂದು ಸಣ್ಣ ಬೆಂಕಿಕಡ್ಡಿ ಕೋಟಿಗಟ್ಟಲೆ ಮರಗಳನ್ನು ಸುಟ್ಟು ಬೂದಿ ಮಾಡುತ್ತದೆ.ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಅಸಹಾಯಕ ಪ್ರಾಣಿ ಪಕ್ಷಿಗಳ ಪ್ರಾಣಗಳ ಜೊತೆಗೆ ಸಸ್ಯ ಸಂಕುಲವೇ ಹಾಳಾಗಿ ಹೋಗಿ ಅಪರೂಪದ ಸಸ್ಯ ಪ್ರಭೇದಗಳನ್ನು ನಾವು ಕಳೆದುಕೊಳ್ಳುತ್ತೇವೆ. ಪ್ರವಾಸಿಗರು ಅಥವಾ ಸ್ಥಳೀಯರು ಕಾಡಿನ ಹತ್ತಿರ ಬೆಂಕಿಯನ್ನು ಬಳಸುವಾಗ ಜಾಗರೂಕ ರಾಗದಿದ್ದರೆ ಇಡೀ ಜೀವಸಂಕುಲವೇ ಅಪಾಯಕ್ಕೆ ಸಿಲುಕುತ್ತದೆ ಎಂದು ತಿಳಿಸಿದರು. ನಮಗೆ ನಮ್ಮ ಪೂರ್ವಜರು ನೀಡಿರುವ ಬೆಲೆ ಕಟ್ಟಲು ಸಾಧ್ಯವಾಗದ ಅಮೂಲ್ಯವಾದ ನಿಸರ್ಗವನ್ನು ನಮಗೆ ಬಳುವಳಿಯಾಗಿ ನೀಡಿದ್ದಾರೆ.ಅದನ್ನು ನಾವು ನಮ್ಮ ಮುಂದಿನ ಪೀಳಿಗೆಯ ಉಪಯೋಗಕ್ಕೆ ಯಾವುದೇ ಚಿತಿ ಬಾರದಂತೆ ಹಿಂತಿರುಗಿಸಬೇಕು ಎಂದು ನುಡಿದರು.

     

    ನಮ್ಮ ಮನೆ ಹಾಗೂ ಶಾಲೆಯ ಪರಿಸರದಲ್ಲಿ ಕನಿಷ್ಠ ಒಂದು ಗಿಡವನ್ನಾದರೂ ನೆಟ್ಟು ಪೋಷಿಸಬೇಕು. ಕಾಗದಗಳನ್ನು ಮಿತವಾಗಿ ಬಳಸಬೇಕು ಏಕೆಂದರೆ ಪ್ರತಿ ಕಾಗದದ ಹಿಂದೆ ಒಂದು ಮರವಿದೆ. ಕಾಡಿನಲ್ಲಿ ಬೆಂಕಿ ಕಂಡರೆ ತಕ್ಷಣ ಹಿರಿಯರಿಗೆ ಅಥವಾ ಅರಣ್ಯ ಇಲಾಖೆಗೆ ಮಾಹಿತಿ ನೀಡಬೇಕೆಂದು ತಿಳಿಸಿದರು.

     

    ಕಾಡು ಬೆಳೆಸಿ ನಾಡು ಉಳಿಸಿ ಎಂಬ ಧ್ಯೇಯದೊಂದಿಗೆ ನಾವು ಪ್ರಕೃತಿಯನ್ನು ರಕ್ಷಿಸಿದರೆ ಪ್ರಕೃತಿ ನಮ್ಮನ್ನು ರಕ್ಷಿಸುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಈ ಹಸಿರು ಭೂಮಿಯನ್ನು ಮುಂದಿನ ಪೀಳಿಗೆಗೆ ಸುರಕ್ಷಿತವಾಗಿ ಹಸ್ತಾಂತರಿಸಲು ಪಣ ತೊಡಬೇಕೆಂದು ತಿಳಿಸಿದರು.

     

    ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಎಂ ಹೆಚ್ ರಜೀನ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಕಾಡುಗಳನ್ನು ಕಡಿದು ನಾಡು ಮಾಡಲು ಹೊರಟಿದ್ದಾರೆ, ಮುಂದಿನ ದಿನಗಳಲ್ಲಿ ಉಸಿರಾಡಲು ಕೂಡ ಶುದ್ಧ ಗಾಳಿ ದೊರೆಯದ ಪರಿಸ್ಥಿತಿ ನಿರ್ಮಾಣ ವಾಗಲಿದೆ. ಅರಣ್ಯ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ. ಇಲಾಖೆಯಿಂದ ನೀಡುವ ಸಲಹೆ ಸೂಚನೆಗಳನ್ನು ನಾವೆಲ್ಲರೂ ಕಡ್ಡಾಯವಾಗಿ ಪಾಲಿಸಿ ಮರಗಿಡಗಳನ್ನು ಬೆಳಿಸಿ ಪ್ರಕೃತಿ ಸೌಂದರ್ಯವನ್ನು ಕಾಪಾಡಬೇಕಾಗಿದೆ ಎಂದರು.

     

    ಈ ಸಂದರ್ಭ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ರೋಹಿಣಿ, ಅರಣ್ಯ ಇಲಾಖೆಯ ಸಿಬ್ಬಂದಿಗಳಾದ ಸುಭಾಷ್, ಪ್ರಜ್ವಲ್, ಮುತ್ತಪ್ಪ, ಶರತ್, ಶಾಲೆಯ ಅತಿಥಿ ಶಿಕ್ಷಕರಾದ ಸಂಜು, ಶಾರಿಕ, ಎಸ್ ಡಿ ಎಮ್ ಸಿ ಸದಸ್ಯರು, ವಿದ್ಯಾರ್ಥಿಗಳು ಹಾಜರಿದ್ದರು.

    Previous Articleಮಹಿಳಾ ದಿನಾಚರಣೆಯಲ್ಲಿ ನಾಪೋಕ್ಲು ಬೇತು ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಬೊಳ್ಳೆಪಂಡ ಆಶಾ ಅಪ್ಪಣ್ಣಗೆ ಸನ್ಮಾನ
    Next Article ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ

    Related Posts

    ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ

    August 23, 2026

    ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ

    August 22, 2026

    ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ

    August 22, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ

    August 23, 2026

    ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ

    August 22, 2026

    ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ

    August 22, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.