ಹೂಳು ತುಂಬಿದ ಕೆರೆಗೆ ಬಿದ್ದ ಮಗನನ್ನು ರಕ್ಷಿಸಲು ಕೆರೆಗೆ ಇಳಿದ ತಂದೆ…! ದಾರುಣ ಅಂತ್ಯ ಕಂಡ ತಂದೆ ಮಗ

ಪೊನ್ನಂಪೇಟೆ ಆಕಸ್ಮಿಕವಾಗಿ ಕೆರೆಗೆ ಬಿದ್ದ ಮಗಳನ್ನು ರಕ್ಷಿಸಲು ಕೆರೆಗೆ ಇಳಿದು ತಂದೆ-ಮಗ ಇಬ್ಬರು ನೀರಿನಲ್ಲಿ ಮುಳುಗಿದ ಹೃದಯವಿದ್ರಾವಕ ಘಟನೆ ಪೊನ್ನಂಪೇಟೆ ತಾಲೂಕಿನ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ.

 

ಚಿಕ್ಕಮಂಡೂರು ಗ್ರಾಮದ ಜಾಲಿಪುವಯ್ಯ ಎಂಬುವರ ಲೈನ್ ಮನೆಯಲ್ಲಿ ತಮ್ಮ ಕುಟುಂಬದೊಂದಿಗೆ ವಾಸವಿದ್ದ ಜೇನುಕರುಬರ ಶಿವಣ್ಣ ಹಾಗೂ ಆತನ ಮಗ ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆ, ಪ್ರಾಥಮಿಕ ವಿಭಾಗದಲ್ಲಿ ಎರಡನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಜೆಕೆ ಕೆಂಚ ದಾರುಣ ಅಂತ್ಯ ಕಂಡಿದ್ದಾರೆ

 

ಕಳೆದ ಭಾನುವಾರದಂದು ತಾವು ವಾಸವಿದ್ದ ತೋಟದ ಸಮೀಪ ಇರುವ ಕೆರೆಯಲ್ಲಿ ಸ್ನಾನ ಮಾಡಿಕೊಂಡು ಆಟ ವಾಡಿಕೊಂಡಿದ್ದ ಬಾಲಕ ಕೆಂಚ ಆಕಸ್ಮಿಕವಾಗಿ ಕೆರೆಗೆ ಬಿದ್ದಿದ್ದಾನೆ. ಮಗ ಕೆರೆಗೆ ಬಿದ್ದಿರುವುದನ್ನು ಗಮನಿಸಿದ ತಂದೆ ಶಿವಣ್ಣ ಮಗನನ್ನು ರಕ್ಷಿಸುವ ಸಲುವಾಗಿ ನೀರಿಗೆ ಇಳಿದಿದ್ದಾರೆ. ಕೆರೆಯಲ್ಲಿ ಹೂಳು ಇದ್ದ ಕಾರಣ ದುರಾದೃಷ್ಟವಶಾತ್ ನೀರಿನಿಂದ ಹೊರಬರಲಾಗದೆ ತಂದೆ ಮಗ ಇಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

Exit mobile version