Close Menu
Kodagu News
    ಹೊಸ ಸುದ್ದಿ

    ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು

    July 28, 2026

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು
    • ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ
    • ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
    • ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ
    • ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
    • ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
    • ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಇಸ್ರೋ ಸ್ಪೇಸ್ ಅಪ್ಲಿಕೇಶನ್ ಸೆಂಟರ್ (SAC) ಅಹಮದಾಬಾದ್‌ಗೆ ಆಯ್ಕೆ
    ಜಿಲ್ಲೆ

    ಇಸ್ರೋ ಸ್ಪೇಸ್ ಅಪ್ಲಿಕೇಶನ್ ಸೆಂಟರ್ (SAC) ಅಹಮದಾಬಾದ್‌ಗೆ ಆಯ್ಕೆ

    ಇಸ್ರೋ ಸ್ಪೇಸ್ ಅಪ್ಲಿಕೇಶನ್ ಸೆಂಟರ್ (SAC) ಅಹಮದಾಬಾದ್‌ಗೆ ಆಯ್ಕೆ

     

    ಗೋಣಿಕೊಪ್ಪದ ಕಾವೇರಿ ಹಿಲ್ಸ್ ಬಡಾವಣೆಯ ನಿವಾಸಿ ಮಾಜಿ ಸೈನಿಕರಾದ ಪಿ.ಎಂ. ಇಬ್ರಾಹಿಂ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವರಪುರದ ಶಿಕ್ಷಕಿಯಾಗಿರುವ ಶ್ರೀಮತಿ ಕೆ.ಇ. ಸಪೂರ ಅವರ ಪುತ್ರ ಪಿ.ಇ. ಮನ್ಸೂರ್ ಅವರು ಇಸ್ರೋದ ಸ್ಪೇಸ್ ಅಪ್ಲಿಕೇಶನ್ ಸೆಂಟರ್ (SAC), ಅಹಮದಾಬಾದ್‌ಗೆ ಪ್ರಾಜೆಕ್ಟ್ ಅಸೋಸಿಯೇಟ್ ಆಗಿ ಆಯ್ಕೆಯಾಗಿದ್ದಾರೆ.

    ಇವರು ಪ್ರಾಥಮಿಕ ಶಿಕ್ಷಣದಿಂದ ಪಿಯುಸಿ ವರೆಗೆ ಲಯನ್ಸ್ ಶಿಕ್ಷಣ ಸಂಸ್ಥೆ ಗೋಣಿಕೊಪ್ಪಳಿಯಲ್ಲಿ ಶಿಕ್ಷಣ ಪಡೆದಿದ್ದು, ನಂತರ ಅಳ್ವಾಸ್ ಇಂಜಿನಿಯರಿಂಗ್ ಕಾಲೇಜು ಮೂಡಬಿದ್ರೆಯಲ್ಲಿ ಕೃಷಿ ಇಂಜಿನಿಯರಿಂಗ್ ವಿಭಾಗದಲ್ಲಿ 2025ರಲ್ಲಿ ಪದವಿ ಪೂರ್ಣಗೊಳಿಸಿದ್ದಾರೆ. ಪ್ರಸ್ತುತ ಬೆಂಗಳೂರಿನ ಫರ್ನ್ಸ್ (Foundation for Education and Research in Nature Science and Sustainability) ಎಂಬ ನಾನ್ ಗವರ್ನ್ಮೆಂಟಲ್ ಆರ್ಗನೈಸೇಶನ್ (NGO) ಸಂಸ್ಥೆಯಲ್ಲಿ ಪರಿಸರ ಸಂರಕ್ಷಣೆ ವಿಷಯದಲ್ಲಿ ಇಂಟರ್ನ್‌ಶಿಪ್ ಮಾಡುತ್ತಿದ್ದಾರೆ.

    ಇವರು ಎಸ್.ಎಸ್.ಎಲ್.ಸಿ.ಯಲ್ಲಿ 90.08% ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದು, ಪಿಯುಸಿಯಲ್ಲಿ 85.6% ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ. ಇಂಜಿನಿಯರಿಂಗ್‌ನಲ್ಲಿ 8.9 ಸಿಜಿಪಿಎ ಅಂಕಗಳೊಂದಿಗೆ ಪದವಿ ಪೂರ್ಣಗೊಳಿಸಿದ್ದಾರೆ.

    ಇವರು ಮದರಸಾ ವಿದ್ಯಾಭ್ಯಾಸವನ್ನು ನೂರುಲ್ ಹುದಾ ಮದರಸಾ ಗೋಣಿಕೊಪ್ಪಳಿಯಲ್ಲಿ ಮೊದಲ ತರಗತಿಯಿಂದ ದಶಮ ತರಗತಿ ವರೆಗೆ ಉತ್ತಮ ಶ್ರೇಣಿಯಲ್ಲಿ ಪೂರ್ಣಗೊಳಿಸಿದ್ದಾರೆ. ಕೋವಿಡ್ ಅವಧಿಯಲ್ಲಿ ಪ್ಲಸ್ ಒನ್ ತರಗತಿಯನ್ನು ಮುಗಿಸಿದ್ದಾರೆ.

    ಇವರು ಇಂಜಿನಿಯರಿಂಗ್ ಅಧ್ಯಯನದ ವೇಳೆ ಕೃಷಿ ಭೂಸ್ಥಾನಿಕ ತಂತ್ರಜ್ಞಾನ ಮತ್ತು ಪರಿಸರ ಸ್ಥಿರತೆ ಕುರಿತು ಸಂಶೋಧನಾ ಪ್ರಬಂಧಗಳನ್ನು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸಮ್ಮೇಳನಗಳಲ್ಲಿ ಮಂಡಿಸಿದ್ದಾರೆ. Biennial Lake Conference ನಲ್ಲಿ ಮಂಡಿಸಿದ “Harnessing Geospatial Data to Improve Good Agricultural Practices: A Soil Based Approach” ಎಂಬ ಸಂಶೋಧನಾ ಪ್ರಬಂಧಕ್ಕೆ Sahyadri Young Ecologist – 2024 ಪ್ರಶಸ್ತಿ ದೊರೆತಿದೆ.

    2025ರಲ್ಲಿ ನಡೆದ “Global Conference on Smart Horticulture for Prosperity and National Security” ಸಮ್ಮೇಳನದಲ್ಲಿ ಮಂಡಿಸಿದ “Geospatial Intelligence for Arecanut Suitability Mapping: A Remote Sensing and Machine Learning Approach” ಎಂಬ ಸಂಶೋಧನಾ ಪ್ರಬಂಧಕ್ಕೆ Best Research Paper Award ಲಭಿಸಿದೆ. ಇಂಜಿನಿಯರಿಂಗ್ ಅಧ್ಯಯನದ ಅಂತಿಮ ಹಂತದಲ್ಲಿ ಇಸ್ರೋ ಸಂಸ್ಥೆ ಬೆಂಗಳೂರಿನಲ್ಲಿ 5 ತಿಂಗಳ ಇಂಟರ್ನ್‌ಶಿಪ್ ಮಾಡುವ ಅವಕಾಶ ದೊರಕಿತ್ತು.

    ಪ್ರಾಥಮಿಕ ಶಿಕ್ಷಣದಿಂದಲೇ ಶಿಕ್ಷಕರ ಹಾಗೂ ಉಸ್ತಾದರ ಮೆಚ್ಚಿನ ವಿದ್ಯಾರ್ಥಿಯಾಗಿದ್ದ ಇವರು ಚೆಸ್ ಹಾಗೂ ಫುಟ್ಬಾಲ್ ಕ್ರೀಡೆಗಳಲ್ಲಿ ವಿಶ್ವವಿದ್ಯಾಲಯ ಮತ್ತು ರಾಜ್ಯ ಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ.

    ಪ್ರಸ್ತುತ ಇಸ್ರೋ ಅಹಮದಾಬಾದ್‌ನಲ್ಲಿ ನಡೆದ ಪರೀಕ್ಷೆ ಮತ್ತು ಇಂಟರ್ವ್ಯೂದಲ್ಲಿ ಪ್ರಥಮ ಸ್ಥಾನ ಪಡೆದು FASAL 2.0, IPCM ಹಾಗೂ SUFALAM-II ಯೋಜನೆಗಳಿಗೆ ಪ್ರಾಜೆಕ್ಟ್ ಅಸೋಸಿಯೇಟ್ ಆಗಿ ಆಯ್ಕೆಯಾಗಿದ್ದಾರೆ. ಇದರ ಮೂಲಕ ನೂರುಲ್ ಹುದಾ ಮದರಸಾ ಹಾಗೂ ಗೋಣಿಕೊಪ್ಪಳ ಮಹಲ್ ಮತ್ತು ಪೋಷಕರಿಗೆ ಕೀರ್ತಿ ತಂದಿದ್ದಾರೆ.

    ಇವರ ತಂದೆ ಪಿ.ಎಂ. ಇಬ್ರಾಹಿಂ ಅವರು ಭಾರತೀಯ ಸೇನೆಯ ಕೂರ್ಗ್ ರೆಜಿಮೆಂಟ್‌ನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ತಾಯಿ ಶ್ರೀಮತಿ ಕೆ.ಇ. ಸಪೂರ ಅವರು ದೇವರಪುರ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದು, 2026ರಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಉತ್ತಮ ಸರ್ಕಾರಿ ನೌಕರ ಪ್ರಶಸ್ತಿ ಪಡೆದಿದ್ದಾರೆ.

    ಇವರ ಅಕ್ಕ ಪಿ.ಇ. ಮೈಮೂನಾ ಅವರು ಎಂ.ಎಸ್.ಸಿ., ಬಿ.ಎಡ್. (ಭೌತಶಾಸ್ತ್ರ) ಪದವಿಯನ್ನು ಪೂರ್ಣಗೊಳಿಸಿ ಪ್ರಸ್ತುತ ಅನ್ವಾರುಲ್ ಹುದಾ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

    ಶಿಕ್ಷಕರ ಮಾರ್ಗದರ್ಶನ, ಪೋಷಕರ ಬೆಂಬಲ ಹಾಗೂ ಕಲಿಕೆಯಲ್ಲಿ ಇರುವ ಆಸಕ್ತಿ ಇವನನ್ನು ಇನ್ನಷ್ಟು ಉನ್ನತಿಗೆ

    ಎಲ್ಲರ ಹಾರೈಕೆ.

    Previous Articleಕೊಡಗು ಜಿಲ್ಲಾ ಮಹಿಳಾ ಮೋರ್ಚಾ ಹಾಗೂ ಮಡಿಕೇರಿ ನಗರ ಮಹಿಳಾ ಮೋರ್ಚಾ ಸಹಯೋಗದಲ್ಲಿ ಇಂದು ಬಾಲಭವನದಲ್ಲಿ ಮಹಿಳಾ ದಿನಾಚರಣೆ
    Next Article ಪೊನ್ನಂಪೇಟೆ ಮೂಲದ ಯುವತಿಯನ್ನು ಬೆಂಗಳೂರಿನಲ್ಲಿ ಕೇಬಲ್ ವೈಯರ್ ನಿಂದ ಕುತ್ತಿಗೆ ಬಿಗಿದು ಕೊಲೆಗೈದ ಪ್ರಿಯಕರ….!!!!

    Related Posts

    ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು

    July 28, 2026

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು

    July 28, 2026

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.